ಬೆಂಗಳೂರು: ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆಯಾಗದಂತೆ ತಡೆಯಲು 1955 ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕೊರೋನಾ ಸೋಂಕಿತರ ಚಿಕಿತ್ಸೆಗೆ ಉಪಯೋಗವಾಗಲಿ ಎಂದು 27,718ಕ್ಕೂ ಹೆಚ್ಚು ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ.

ಇನ್ನೂ 1955 ಖಾಸಗಿ ಆಸ್ಪತ್ರೆಗಳಲ್ಲೂ ಹಾಸಿಗೆಗಳ ಕಾಯ್ದುರಿಸಲಾಗಿದೆ. ಜಿಲ್ಲೆಗಳಿಗೆ ಸಹಕಾರಿಯಾಗಲಿ ಎಂದು ಜಿಲ್ಲಾ ಆಸ್ಪತ್ರೆಗಳಲ್ಲಿ ಐಸಿಯು ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. 120 ಹೆಚ್ಚುವರಿ ಆಂಬುಲೆನ್ಸ್ ಗಳ ಖರೀದಿಗೆ ಕ್ರಮ ವಹಿಸಲಾಗಿದೆ. ಜಿಲ್ಲೆಗಳಿಗೆ 1 ಲಕ್ಷ ರ್ಯಾಪಿಡ್ ಆಂಟಿಜೆನ್ ಕಿಟ್ಗಳನ್ನು ಕಳುಹಿಸಿಕೊಡಲಾಗಿದೆ” ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳ ಮೇಲೂ ಸಾಕಷ್ಟು ನಿಗಾ ವಹಿಸಿದೆ. ಮುಂದಿನ ದಿನಗಳಲ್ಲೂ ಸಹ ಕೊರೋನಾ ನಿಯಂತ್ರಣಕ್ಕೆ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿಗಳು, ಕೊರೊನಾ ಜತೆಜತೆಗೆ ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯ ಸಿದ್ಧವಾಗಬೇಕಿದೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.








