ಹೃದಯಾಘಾತದಿಂದ ಹಾಸನ ಜಿಲ್ಲೆಯಲ್ಲಿ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಇಕೋಕಾರ್ಡಿಯೋಗ್ರಾಂ (ECG) ವ್ಯವಸ್ಥೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.
ಹಾಸನದಲ್ಲಿ ನಡೆದ ಆರೋಗ್ಯ ಸಮೀಕ್ಷಾ ಸಭೆಯಲ್ಲಿ ಮಾತನಾಡಿದ ಸಚಿವರು, ಹೃದಯಾಘಾತ ಮತ್ತು ಕೋವಿಡ್ ನಡುವೆ ಯಾವುದೇ ನೇರ ಸಂಬಂಧವಿಲ್ಲ. ಆದರೆ ಹೃದಯಾಘಾತದ ಪ್ರಮಾಣವು ಹೆಚ್ಚುತ್ತಿರುವುದರಿಂದ, ನಾವು ತಜ್ಞರ ಸಲಹೆ ಆಧರಿಸಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ECG ಯಂತ್ರಗಳನ್ನು ಅಳವಡಿಸುವ ಯೋಜನೆ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ಹೃದಯ ಸಂಬಂಧಿತ ಸಮಸ್ಯೆಗಳನ್ನು ಮೊದಲೇ ಗುರುತಿಸಲು ಮಕ್ಕಳಿಗೆ ವೈದ್ಯಕೀಯ ಸ್ಟ್ರೀನಿಂಗ್ ಪ್ರಕ್ರಿಯೆ ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ಆರೋಗ್ಯ ಇಲಾಖೆಯು ಶೀಘ್ರದಲ್ಲೇ ಈ ಯೋಜನೆಗೆ ಚಾಲನೆ ನೀಡಲಿದೆ ಎಂದು ಗುಂಡೂರಾವ್ ಹೇಳಿದ್ದಾರೆ.








