ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಲಾಕ್‍ಡೌನ್ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡುವುದಕ್ಕೆ ಅವಕಾಶ ಕೊಡಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜತೆ ನಡೆದ ವಿಡಿಯೋ ಕಾನ್ಫರೆನ್ಸ್ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ.
ಈ ವೇಳೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸೂಚಿಸಿದರು.
ಲಾಕ್‍ಡೌನ್ ಬಗ್ಗೆ ಜಿಲ್ಲಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳಲು ಸಿಎಂ ಯಡಿಯೂರಪ್ಪ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡಬೇಕೋ ಬೇಡವೋ ಎಂಬುದರ ಬಗ್ಗೆ ಜನ ಪ್ರತಿನಿಧಿಗಳು, ಅಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.
ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ
ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...








