ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಕುರಿತ ವದಂತಿಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿವೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ಪಷ್ಟನೆ ನೀಡಿ, ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ. ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅದನ್ನು ಪೂರ್ಣವಾಗಿ ಅನುಸರಿಸುತ್ತೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರುನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆಯ ಕುರಿತಾಗಿ ಈಗ ಜೋರಾಗಿ ವದಂತಿಗಳು ಹರಡಲಾಗುತ್ತಿದೆ. ಆದರೆ ಈ ಪ್ರಶ್ನೆ ಇಲ್ಲಿಗೆ ಅಪ್ರಸ್ತುತ. ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ. ನಾವು ಎಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಇತ್ತೀಚೆಗೆ ರಾಜ್ಯ ರಾಜಕೀಯದಲ್ಲಿ ಅತೃಪ್ತ ಮಂತ್ರಿಗಳು, ಅತೃಪ್ತ ಶಾಸಕರ ನಡುವಿನ ಒತ್ತಾಸೆ, ಕೆಲವರು ಸಚಿವ ಸ್ಥಾನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವುದು, ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಭೆಗಳು ಮುಖ್ಯಮಂತ್ರಿ ಸ್ಥಾನ ಬದಲಾವಣೆಯಾಗಬಹುದೇ ಎಂಬ ಪ್ರಶ್ನೆಗಳನ್ನು ರಾಜಕೀಯ ವಲಯದಲ್ಲಿ ಹುಟ್ಟು ಹಾಕಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ಧರಾಮಯ್ಯ, ನಾನು ಅಥವಾ ಡಿಕೆಶಿ ಯಾವ ನಿರ್ಧಾರವನ್ನೂ ಸ್ವತಂತ್ರವಾಗಿ ತೆಗೆದುಕೊಳ್ಳುವುದಿಲ್ಲ. ಹೈಕಮಾಂಡ್ ನಿರ್ಧಾರವೇ ನಮಗೆ ಮುಖ್ಯ ಎಂಬ ಸ್ಪಷ್ಟನೆ ನೀಡಿದ್ದಾರೆ.








