ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಧರ್ಮಸ್ಥಳದಲ್ಲಿ ನಡೆದದ್ದೇನು? SIT ತನಿಖೆಗೆ ಸರ್ಕಾರದಿಂದ ಆದೇಶ, ರಮ್ಯಾ ಪ್ರಶಂಸೆ

What happened in Dharmasthala? Government orders SIT investigation, Ramya praises

Shwetha by Shwetha
July 21, 2025
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಸಮಗ್ರ ತನಿಖೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿದೆ. ಈ ನಿರ್ಧಾರವನ್ನು ಕನ್ನಡ ನಟಿ ರಮ್ಯಾ ಸ್ವಾಗತಿಸಿದ್ದು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಧರ್ಮಸ್ಥಳ ಸಂಸ್ಥೆಯ ಮಾಜಿ ಕಾರ್ಮಿಕನೊಬ್ಬ ಪೊಲೀಸ್ ಇಲಾಖೆಯ ಮುಂದೆ ಶರಣಾಗಿ, ನೂರಾರು ಬಾಲಕಿಯರು ಮತ್ತು ಮಹಿಳೆಯರ ಅತ್ಯಾಚಾರ ಮತ್ತು ಕೊಲೆ ಮಾಡಿ ಧರ್ಮಸ್ಥಳದ ವಿವಿಧೆಡೆ ಶವಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದನು. ಈ ಹೇಳಿಕೆಯು ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದೆ.

Related posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

July 26, 2026
jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

July 26, 2026

SIT ರಚನೆ ಮತ್ತು ನಟಿ ರಮ್ಯಾ ಪ್ರತಿಕ್ರಿಯೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ, ಡಿಜಿಪಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ, ಐಜಿ ಎಂ.ಎನ್. ಅನುಚೇತ್, ಡಿಸಿಪಿ ಸೌಮ್ಯಲತಾ ಮತ್ತು ಎಸ್ಪಿ ಜಿತೇಂದ್ರಕುಮಾರ್ ದಯಾಮ್ ಅವರನ್ನೊಳಗೊಂಡ ನಾಲ್ವರು ಐಪಿಎಸ್ ಅಧಿಕಾರಿಗಳ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಈ ತಂಡವು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಎಲ್ಲಾ ಸಂಬಂಧಿತ ಕ್ರಿಮಿನಲ್ ಪ್ರಕರಣಗಳನ್ನು ತನಿಖೆ ಮಾಡಲಿದೆ.

ಈ ಕುರಿತು ಸಂತಸ ವ್ಯಕ್ತಪಡಿಸಿರುವ ನಟಿ ರಮ್ಯಾ, “ರಾಜ್ಯದ ಸಿಎಂ ಧರ್ಮಸ್ಥಳ ಕುರಿತ ಆರೋಪಗಳ ತನಿಖೆಗೆ SIT ರಚನೆ ಮಾಡಿದ್ದಾರೆ. ಈ ತಂಡದಲ್ಲಿರುವ ಎಲ್ಲರೂ ದಕ್ಷ ಅಧಿಕಾರಿಗಳಾಗಿದ್ದಾರೆ. ಅವರೆಲ್ಲರಿಗೂ ತನಿಖೆ ಮಾಡಲು ಫ್ರೀಹ್ಯಾಂಡ್ ನೀಡಲಾಗುತ್ತೆ ಎಂಬ ನಂಬಿಕೆ ನನಗಿದೆ” ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅವರ ಈ ಪೋಸ್ಟ್‌ಗೆ ಸಾಕಷ್ಟು ಕಾಮೆಂಟ್‌ಗಳು ಹರಿದುಬರುತ್ತಿವೆ.

ಪ್ರಕರಣದ ಹಿನ್ನೆಲೆ ಮತ್ತು ಸಿಎಂ ಸಿದ್ದರಾಮಯ್ಯ ಅವರ ಪೋಸ್ಟ್

ಕೋಟ್ಯಂತರ ಭಕ್ತರ ನಂಬಿಕೆಯ ಕೇಂದ್ರವಾಗಿರುವ ಧರ್ಮಸ್ಥಳದ ಕುರಿತು ಇಂತಹ ಗಂಭೀರ ಆರೋಪಗಳು ಕೇಳಿಬಂದಿರುವುದು ಭಕ್ತವೃಂದದಲ್ಲಿ ಅಚ್ಚರಿ ಮತ್ತು ಆಘಾತವನ್ನುಂಟು ಮಾಡಿದೆ. ಕಳೆದ ಕೆಲವು ವರ್ಷಗಳಿಂದ ಧರ್ಮಸ್ಥಳದಲ್ಲಿ ನಡೆದಿರುವ ಎನ್ನಲಾದ ಅತ್ಯಾಚಾರ, ಕೊಲೆ ಪ್ರಕರಣಗಳು ಸದ್ದು ಮಾಡುತ್ತಿದ್ದವು. ಇತ್ತೀಚೆಗೆ ವ್ಯಕ್ತಿಯೊಬ್ಬರು ದೂರು ದಾಖಲಿಸಿದ ನಂತರ ಸರ್ಕಾರ SIT ತನಿಖೆಗೆ ಆದೇಶಿಸಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪೋಸ್ಟ್‌ನಲ್ಲಿ, “ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ. ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ತನಿಖೆಯು ಧರ್ಮಸ್ಥಳದಲ್ಲಿ ನಡೆದಿರಬಹುದಾದ ಸತ್ಯಾಂಶಗಳನ್ನು ಹೊರತರಲು ಸಹಕಾರಿಯಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ShareTweetSendShare
Join us on:

Related Posts

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

by Shwetha
July 26, 2026
0

ನವದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಕ್ಷರಶಃ ವಿಶ್ವ ದಾಖಲೆ ನಿರ್ಮಿಸಿದ್ದಾರೆ....

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

by Shwetha
July 26, 2026
0

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಯುವಕರು ಸಿಜೆಪಿ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ,...

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

by Shwetha
July 26, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅತ್ಯಂತ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram