RRB NTPC Recruitment 2025 : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟಿಕೆಟ್ ಸೂಪರ್ವೈಸರ್, ಸ್ಟೇಷನ್ ಮಾಸ್ಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ.
ಹುದ್ದೆ :
ಪದವೀಧರ ಹುದ್ದೆಗಳು – ಚೀಪ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೈನ್ ಮ್ಯಾನೇಜರ್, ಜೂನಿಯರ್ ಅಕೌಂಟ್ ಅಸಿಸ್ಟಂಟ್ ಕಮ್ ಟೈಪಿಸ್ಟ್, ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್.
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 30,307 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ ಹುದ್ದೆಗಳ ಸಂಖ್ಯೆ
ಚೀಪ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್ 6235
ಸ್ಟೇಷನ್ ಮಾಸ್ಟರ್ 5623
ಗೂಡ್ಸ್ ಟ್ರೈನ್ ಮ್ಯಾನೇಜರ್ 3562
ಜೂನಿಯರ್ ಅಕೌಂಟ್ ಅಸಿಸ್ಟಂಟ್ ಕಮ್ ಟೈಪಿಸ್ಟ್ 7520
ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ 7367
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಾನ :
ದಿನಾಂಕ 01/01/2025ಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 36 ವರ್ಷ ಮೀರಿರಬಾರದು.
ವೇತನ :
ಹುದ್ದೆ ವೇತನ
ಚೀಪ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್ 35,400
ಸ್ಟೇಷನ್ ಮಾಸ್ಟರ್ 35,400
ಗೂಡ್ಸ್ ಟ್ರೈನ್ ಮ್ಯಾನೇಜರ್ 29,200
ಜೂನಿಯರ್ ಅಕೌಂಟ್ ಅಸಿಸ್ಟಂಟ್ ಕಮ್ ಟೈಪಿಸ್ಟ್ 29,200
ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ 29,200
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 30, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 29, 2025








