ಭಾರತದಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಮುಂದೆ ಒಂದು ದಿನ ಬಾರತ ಸೋಂಕಿತರ ಸಂಖ್ಯೆಯಲ್ಲಿ ಅಮೆರಿಕಾವನ್ನೂ ಮೀರಿಸಿದ್ರೆ ಅಚ್ಚರಿಯೇನಿಲ್ಲ ಎಮದು ಹಲವು ತಜ್ಞರು ಅಭಿಪ್ರಾಯ ಹೊರಹಾಕಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕೊರೊನಾ ಹೋರಾಟದಲ್ಲಿ ಭಾರತ ಉತ್ತಮ ಸ್ಥಾನದಲ್ಲಿದೆಯಾ ಎಂದು ಪ್ರಶ್ನೆ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾರತ ಕೋವಿಡ್ ವಿರುದ್ಧ ಹೋರಾಟದಲ್ಲಿ ಉತ್ತಮ ಸ್ಥಾನದಲ್ಲಿದೆ ಎಂದು ಹೆಳಿಕೊಂಡಿದ್ದರು. ಆದ್ರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ ನಿಜಕ್ಕೂ ದೇಶ ಕೊರೊನಾ ಹೋರಾಟದಲ್ಲಿ ಉತ್ತಮ ಸ್ಥಾನದಲ್ಲಿದೆಯೇ ಎಂಬ ಪ್ರಶ್ನೆಯನ್ನ ಸರ್ಕಾರದ ಮುಂದಿಟ್ಟಿದ್ದಾರೆ.







