DHFWS Kolar Recruitment 2025 : ಕೋಲಾರ ಜಿಲ್ಲೆಯಲ್ಲಿ ಎನ್.ವಿ.ಬಿ.ಡಿ.ಸಿ.ಪಿ. ಕಾರ್ಯಕ್ರಮದಡಿಯಲ್ಲಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಕೀಟ ಸಂಗ್ರಾಹಕ ಹುದ್ದೆಯ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ.
ಹುದ್ದೆ :
ಕೀಟ ಸಂಗ್ರಾಹಕ
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೋಲಾರ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ :
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣ ಹೊಂದಿರಬೇಕು.
ವಯೋಮಾನ :
ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ಮೀರಿರಬಾರದು.
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,114 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಸಂದರ್ಶನ ಮೂಲಕ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಸಂದರ್ಶನ ಸ್ಥಳ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಕೆ.ಎನ್.ಟಿ.ಬಿ ಸ್ಯಾನಿಟೋರಿಯಂ ಆಸ್ಪತ್ರೆ ಆವರಣ, ಬಂಗಾರಪೇಟೆ ರಸ್ತೆ, ಕೋಲಾರ.
ಸಂದರ್ಶನ ನಡೆಯುವ ದಿನಾಂಕದ ವಿವರ :
ನೇರ ಸಂದರ್ಶನ ನಡೆಯುವ ದಿನಾಂಕ : ಆಗಸ್ಟ್ 01, 2025 ರಂದು ಬೆಳಿಗ್ಗೆ 10.00 ಗಂಟೆಗೆ








