OICL Assistant Recruitment 2025 : ಓರಿಯೆಂಟಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಇದರಲ್ಲಿ ಅಗತ್ಯ ಇರುವ ಅಸಿಸ್ಟಂಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ :
ಅಸಿಸ್ಟೆಂಟ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 500 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 47 ಹುದ್ದೆಗಳು ಖಾಲಿ ಇದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಿತಿ :
ದಿನಾಂಕ 31 ಜುಲೈ 2025ಕ್ಕೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 22,405 ರಿಂದ ರೂ. 62,265 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ (ಪ್ರಿಲಿಮಿನರಿ ಮತ್ತು ಮುಖ್ಯ ಪರೀಕ್ಷೆ) ನಡೆಸಲಾಗುವುದು. ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಪ್ರಾದೇಶಿಕ ಭಾಷಾ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಪರೀಕ್ಷಾ ಕೇಂದ್ರಗಳು :
ಕರ್ನಾಟಕದಲ್ಲಿ ಬೆಂಗಳೂರು, ಹುಬ್ಬಳ್ಳಿ/ಧಾರವಾಡ, ಮಂಗಳೂರು, ಮೈಸೂರು, ಬೆಳಗಾವಿ, ಶಿವಮೊಗ್ಗ, ಕಲಬುರಗಿ.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 100
• ಉಳಿದ ಅಭ್ಯರ್ಥಿಗಳು – ರೂ. 850
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 02, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 17, 2025
ಪ್ರಿಲಿಮಿನರಿ ಪರೀಕ್ಷೆ ದಿನಾಂಕ : ಸೆಪ್ಟೆಂಬರ್ 07, 2025
ಮುಖ್ಯ ಪರೀಕ್ಷೆ ದಿನಾಂಕ : ಅಕ್ಟೋಬರ್ 28, 2025
Website:https://ibpsonline.ibps.in/oicljul25/








