ೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಚುನಾವಣಾ ಪ್ರಕ್ರಿಯೆಯಲ್ಲಿನ ಮತಗಳ್ಳತನದ ಆರೋಪ ಮಾಡಿರುವ ಸಂದರ್ಭದಲ್ಲಿ, ಈ ಕುರಿತು ಜನಜಾಗೃತಿ ಮೂಡಿಸಲು ನಾಳೆ ಬೆಂಗಳೂರಿನಲ್ಲಿ ಬೃಹತ್ ಮಟ್ಟದ ಪ್ರತಿಭಟನಾ ರ್ಯಾಲಿ ಆಯೋಜಿಸಲಾಗಿದೆ.
ಅಗಸ್ಟ್ 8, 2025 ರಂದು ನಡೆಯಲಿರುವ ಪ್ರತಿಭಟನೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿದ್ದು, ಇದರಲ್ಲಿ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಹಿತ ಕಾಂಗ್ರೆಸ್ನ ಹಿರಿಯ ನಾಯಕರು ಮತ್ತು ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ರಸ್ತೆಯಲ್ಲಿ ಸಂಚಾರ ನಿರ್ಬಂಧ:
ಸಾವಿರಾರು ಜನರು ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದ್ದು, ಫ್ರೀಡಂ ಪಾರ್ಕ್ ಸುತ್ತಮುತ್ತ ರಸ್ತೆಗಳಲ್ಲಿ ಭಾರಿ ಜಮಾವಣೆ ನಿರೀಕ್ಷಿಸಲಾಗಿದೆ. ಈ ಹಿನ್ನೆಲೆ ಬೆಂಗಳೂರು ಟ್ರಾಫಿಕ್ ಪೊಲೀಸ್ ಇಲಾಖೆ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಿದೆ.
ಸಂಭಾವ್ಯವಾಗಿ ಬ್ಲಾಕ್ ಆಗುವ ರಸ್ತೆಮಾರ್ಗಗಳು:
ಮೌರ್ಯ ಸರ್ಕಲ್, ಶೇಷಾದ್ರಿಪುರಂ ರಸ್ತೆ, ಕಾಳಿದಾಸ ರಸ್ತೆ, ಕನಕದಾಸ ಸರ್ಕಲ್, ಮೈಸೂರು ಬ್ಯಾಂಕ್ ಸರ್ಕಲ್–ಚಾಲುಕ್ಯ ಸರ್ಕಲ್ ಮಾರ್ಗ, ಖೋಡ್ ಸರ್ಕಲ್–ಆನಂದ್ ರಾವ್ ಸರ್ಕಲ್.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ನಿವಾಸಿಗಳು ಹಾಗೂ ದೈನಂದಿನ ಪ್ರಯಾಣಿಕರು ಮುಂಜಾಗ್ರತೆ ವಹಿಸಿ, ತಮ್ಮ ಪ್ರಯಾಣ ಯೋಜನೆ ಮರುಪರಿಶೀಲಿಸಿ, ತೊಂದರೆ ತಪ್ಪಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.








