ಭಾರತೀಯ ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ನಲ್ಲಿ ಮಹತ್ವದ ಪತ್ರಿಕಾಗೋಷ್ಠಿ ಆಯೋಜಿಸಿದೆ.
ಮೂಲಗಳ ಪ್ರಕಾರ, ಈ ಪ್ರೆಸ್ ಮೀಟ್‌ಗೆ ಕಾರಣ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಮಾಡಿದ ಮತಗಳ ಕಳ್ಳತನ ಆರೋಪವೇ ಹಿನ್ನೆಲೆಯಾಗಿದೆ ಎಂದು ತಿಳಿದುಬಂದಿದೆ.
ರಾಹುಲ್ ಗಾಂಧಿ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರದ ಹಲವು ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮಗಳು ನಡೆದಿವೆ. ಇದರಿಂದಲೇ ಕಾಂಗ್ರೆಸ್ ಅಭ್ಯರ್ಥಿಗಳು ಸೋಲುಂಡಿದ್ದಾರೆ ಎಂದು ಆರೋಪಿಸಿದ್ದರು.
ಇದಕ್ಕೆ ಸ್ಪಷ್ಟನೆ ನೀಡುವ ಉದ್ದೇಶದಿಂದಲೇ ಚುನಾವಣಾ ಆಯೋಗ ಈ ಪ್ರೆಸ್ ಮೀಟ್ ನಡೆಸುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಇಂದಿನ ಪತ್ರಿಕಾಗೋಷ್ಠಿಯಿಂದ ಈ ವಿವಾದಕ್ಕೆ ಸ್ಪಷ್ಟನೆ ಸಿಗುವ ನಿರೀಕ್ಷೆ ಇದೆ.








