ಬಿಷಪ್ ಫ್ರಾಂಕೋ ಮುಳಕಾಲ್ ವಿರುದ್ಧ ಜಾಮೀನು ರಹಿತ ವಾರೆಂಟ್
ತಿರುವನಂತಪುರಂ, ಜುಲೈ 14: ಕೇರಳದಲ್ಲಿ ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಬಿಷಪ್ ಫ್ರಾಂಕೋ ಮುಳಕಾಲ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.
ಬಿಷಪ್ ಫ್ರಾಂಕೋ ಷರತ್ತು ನಿಯಮ ಮೀರಿದ್ದ ಹಿನ್ನಲೆಯಲ್ಲಿ ನೀಡಲಾಗಿದ್ದ ಜಾಮೀನನ್ನು ಕೋರ್ಟ್ ರದ್ದುಪಡಿಸಿದೆ. ಈ ಮೊದಲು ಜಾಮೀನು ನೀಡುವ ಸಂದರ್ಭದಲ್ಲಿ ಷರತ್ತು ವಿಧಿಸಲಾಗಿದ್ದು ಅವರು ಒಂದು ಬಾರಿಯೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನು ರದ್ದು ಪಡಿಸಿರುವ ಕೋರ್ಟ್ ಜಾಮೀನುರಹಿತ ವಾರೆಂಟ್ ಅನ್ನು ಹೊರಡಿಸಿದೆ.
ಕೊಟ್ಟಾಯಂ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು ಆರೋಪಿ ಬಿಷಪ್ ಗೈರುಹಾಜರಿಯಾಗಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಅಲ್ಲದೇ ಈ ಮೊದಲು ನೀಡಲಾಗಿದ್ದ ಜಾಮೀನು ರದ್ದು ಮಾಡಲಾಗಿದೆ. ಆರೋಪಿ ಪರ ವಕೀಲರು ಅವರು ಪಂಜಾಬ್ ನಲ್ಲಿ ಕಂಟೇನ್ಮೆಂಟ್ ವಲಯದಲ್ಲಿ ಇರುವ ಕಾರಣ ಕೋರ್ಟ್ ಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಹೇಳಿದ್ದರೆ, ಅವರು ವಾಸವಾಗಿರುವ ಪ್ರದೇಶ ಕಂಟೇನ್ಮೆಂಟ್ ಜೋನ್ ನಲ್ಲಿ ಇಲ್ಲವೆಂದು ಪ್ರತಿವಾದಿ ವಕೀಲರು ವಾದಿಸಿದ್ದರು.








