ಮೈಸೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವ ಯಾತ್ರೆ ರಾಜಕೀಯ ಉದ್ದೇಶದಿಂದ ನಡೆಸಲ್ಪಟ್ಟಿದೆ ಎಂದು ಟೀಕಿಸಿದ್ದಾರೆ.
ಸಿಎಂ ಹೇಳಿಕೆ:
ಬಿಜೆಪಿಯವರು ಈ ಯಾತ್ರೆಯಿಂದ ರಾಜಕೀಯ ಲಾಭ ಪಡೆಯುತ್ತಾರೆ ಎಂದುಕೊಂಡಿದ್ದಾರೆ. ಆದರೆ ಅವರಿಗೆ ಯಾವುದೇ ಲಾಭ ಸಿಗುವುದಿಲ್ಲ, ಎಂದು ಹೇಳಿದ್ದಾರೆ.
ಧರ್ಮಸ್ಥಳದ ಬಗ್ಗೆ ನಮಗೆ ಅಪಾರ ಗೌರವವಿದೆ. SIT ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು ತಿಳಿದು ವಿರೋಧಿಸುತ್ತಿದ್ದಾರೆ. ಇದು ಬಿಜೆಪಿ ಯ ಡೋಂಗಿತನ, ಎಂದು ಸಿಎಂ ಆರೋಪಿಸಿದರು.
ಸಿಎಂ ಸಿದ್ದರಾಮಯ್ಯ ಅವರ ಈ ಹೇಳಿಕೆ, ಧರ್ಮಸ್ಥಳ ಯಾತ್ರೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.








