ಬೆಂಗಳೂರು: ಕೊರೊನಾ ವೈರಸ್ ಭೀತಿ ನಡುವೆಯೂ ಪರೀಕ್ಷೆ ಬರೆದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಕೆಲವೇ ಕ್ಷಣಗಳಲ್ಲಿ ಪ್ರಕಟವಾಗಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ.
ಬೆಳಿಗ್ಗೆ 11.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶ ಪ್ರಕಟಿಸಲಿದ್ದಾರೆ.
ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ 6.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಮಾರ್ಚ್ನಲ್ಲಿ ನಡೆಯಬೇಕಿದ್ದ ಇಂಗ್ಲಿಷ್ ಪತ್ರಿಕೆಯತ ಪರೀಕ್ಷೆಯನ್ನು ಕೊರೊನಾ ಕಾರಣದಿಂದ ಮುಂದೂಡಲಾಗಿತ್ತು. ಕಳೆದ ತಿಂಗಳ 18ರಂದು ಪರೀಕ್ಷೆ ನಡೆಸಿದ ನಂತರ ಇದೀಗ ಫಲಿತಾಂಶ ನೀಡಲಾಗುತ್ತಿದೆ.
ಕೆಳಕಂಡ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯ..
ಕಾಲೇಜಿಗೆ ಬರಬೇಡಿ, ಮೊಬೈಲ್‌ಗೆ ಬರುತ್ತೆ ರಿಸಲ್ಟ್
ಇಂದು ರಾಜ್ಯದ ಎರಡನೇ ಪಿಯುಸಿ ಫಲಿತಾಂಶ ಬೆಳಿಗ್ಗೆ 11.30 ಗಂಟೆಗೆ ಪ್ರಕಟವಾಗುತ್ತಿದ್ದು, ವಿದ್ಯಾರ್ಥಿಗಳು ತಮ್ಮ ಫಲಿತಾಂಶ ನೋಡಲಿಕ್ಕೆ ಕಾಲೇಜುಗಳಿಗೆ ಬರುವ ಅವಶ್ಯಕತೆ ಇಲ್ಲ. ನಿಮ್ಮ ಮೊಬೈಲ್‌ಗಳಿಗೇ ಎಸ್‌ಎಂಎಸ್ ಮೂಲಕ ನಿಮ್ಮ ಫಲಿತಾಂಶವನ್ನು ರವಾನಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ಕಳೆದ ತಿಂಗಳು ನಡೆದ ಇಂಗ್ಲಿಷ್ ಪತ್ರಿಕೆಯ ಮೌಲ್ಯಮಾಪನ ವೇಳೆ ಗ್ರೇಸ್ ಅಂಕ ಕೊಡಿ ಎಂದು ನಾನು ಹೇಳಿದ್ದಾಗಿ ನನ್ನ ಟ್ವಿಟರ್ ಅಕೌಂಟ್ ಹ್ಯಾಕ್ ಮಾಡಿ ನಕಲಿ ಸುದ್ದಿ ಹಾಕಲಾಗಿದೆ. ಇದನ್ನು ನಂಬಬೇಡಿ, ಫೇಕ್ ಎಂದು ಟ್ವಿಟರ್‌ನಲ್ಲಿ ಸುರೇಶ್‌ಕುಮಾರ್ ತಿಳಿಸಿದ್ದಾರೆ.