ಕೇಂದ್ರ ಸರ್ಕಾರ ಜಾರಿಗೆ ತಂದಿರುವ GST ಪರಿಷ್ಕರಣೆ ಜನಸಾಮಾನ್ಯರು, ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ದೊಡ್ಡ ಕೊಡುಗೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
GST ಸರಳೀಕರಣದಿಂದ ತೆರಿಗೆ ಹೊರೆ ಗಣನೀಯವಾಗಿ ಕಡಿಮೆಯಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ನೇರ ಪ್ರಯೋಜನವಾಗಲಿದೆ. ಸಣ್ಣ ವ್ಯಾಪಾರಿಗಳಿಗೆ ಸಹ ಲಾಭವಾಗುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ
ರಾಹುಲ್ ಗಾಂಧಿ ಮತ್ತು ಖರ್ಗೆಯ ಆರೋಪಗಳು ಆಧಾರರಹಿತ ಎಂದು ಜೋಶಿ ಸ್ಪಷ್ಟನೆ ನೀಡಿದ್ದು, ಈ ಪರಿಷ್ಕರಣೆ ಜನಸಾಮಾನ್ಯರ ಜೀವನಕ್ಕೆ ಆರ್ಥಿಕ ನೆರವಿನಂತಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.








