ಬೆಂಗಳೂರು ; ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಇಂದು ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಪಡೆದ ಎಲ್ಲ ಮಕ್ಕಳಿಗೂ ಶುಭ ಹಾರೈಸುತ್ತೇನೆ. ತೇರ್ಗಡೆಯಾಗಿರುವ ಮಕ್ಕಳಿಗೆ ಅಭಿನಂದನೆಗಳು. ಸ್ವಲ್ಪ ಹಿನ್ನಡೆಯಾಗಿದ್ದಲ್ಲಿ ಧೈರ್ಯ ವಿಶ್ವಾಸ ಕಳೆದುಕೊಳ್ಳದೆ, ಹಿನ್ನಡೆಯನ್ನು ಸವಾಲಾಗಿ ಸ್ವೀಕರಿಸಿ,ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಿ. ತಂದೆ ತಾಯಿಗಳಿಗೆ ಹೆಮ್ಮೆ, ದೇಶಕ್ಕೆ ಕೀರ್ತಿ ತರುವ ಸಾಧನೆ ಮಾಡಿ ಎಂದು ಬರೆದುಕೊಂಡಿದ್ದಾರೆ.








