ಬೆಂಗಳೂರು , ಸೆ.15: ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darashan) ಜೈಲು ಸೇರಿ ನರಕಯಾತನೆ ಅನುಭವಿಸುತ್ತಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್ ಜೈಲಿನಲ್ಲಿ ನಿದ್ದೆ ಮಾಡದೆ ರಾತ್ರಿಯಿಡೀ ಒದ್ದಾಡುತ್ತಿದ್ದಾರೆ. ಹೀಗಾಗಿ ದಾಸನ ಪರ ವಕೀಲರು ಮತ್ತೆ ಕೋರ್ಟ್ ಮೆಟ್ಟಿಲೇರಿದ್ದಾರೆ.
ಸುಪ್ರೀಂಕೋರ್ಟ್ ಆದೇಶದ ನಂತರ ಮತ್ತೆ ಜೈಲುಪಾಲಾಗಿರುವ ಕಾಟೇರ ಪ್ರತಿನಿತ್ಯ ಪರದಾಡ್ತಿದ್ದಾರೆ. ನನ್ನ ಕೈಗೆ ಫಂಗಸ್ ಆಗಿದೆ. ಸ್ವಲ್ಪ ವಿಷ ನೀಡಿ ಎಂದು ಇತ್ತಿಚೀಗಷ್ಟೇ ಜಡ್ಜ್ ಬಳಿ ಮನವಿ ಮಾಡಿದ್ದರು. ದಾಸನ ಅಳಲು ಆಲಿಸಿದ್ದ 57ನೇ ಸಿಸಿಎಚ್ ಕೋರ್ಟ್ ಕನಿಷ್ಠ ಸೌಲಭ್ಯ ಒದಗಿಸುವಂತೆ ಆದೇಶ ನೀಡಿತ್ತು. ಆದರೆ ಹಾಸಿಗೆ, ದಿಂಬು ನೀಡುವಂತೆ ಕೋರ್ಟ್ ಆದೇಶಿಸಿದ್ದರೂ ಜೈಲಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು 57ನೇ ಸಿಸಿಎಚ್ ಕೋರ್ಟ್‌ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ.
ಜೈಲಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಹಾಗೂ ಕೋರ್ಟ್ ಆದೇಶ ಮಾಡಿದ್ರೂ ಯಾವುದೇ ಸೌಕರ್ಯ ನೀಡಿಲ್ಲ. ಕೋರ್ಟ್ ಆದೇಶದ ಪ್ರತಿಯನ್ನು ಇ-ಮೇಲ್ ಮಾಡಲಾಗಿದೆ. ಆದರೂ ದರ್ಶನ್‌ಗೆ ಅದೇ ನರಕ ಮುಂದುವರಿದಿದೆ. ಎರಡು-ಮೂರು ಬಾರಿ ಜೈಲಿಗೆ ಹೋಗಿ ವಿಚಾರಿಸಿದ್ದೀವಿ. ಆದರೂ ಕೂಡ ಯಾವುದೇ ಸೌಲಭ್ಯ ನೀಡಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಒಟಿಟಿ ಹಕ್ಕು 125 ಕೋಟಿ!
ದರ್ಶನ್ ಜೈಲು ಸೇರಿ ಒಂದು ತಿಂಗಳು ಕಳೆದು ಹೋಗಿದೆ. ಇನ್ನೂ ಅವರನ್ನು ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಿದ್ದಾರೆ. 14 ದಿನಗಳ ಕಾಲ ಮಾತ್ರ ಕ್ವಾರಂಟೈನ್ ಸೆಲ್ ನಲ್ಲಿ ಇರಿಸಬೇಕು. ಇನ್ನು ಬಿಸಿಲಿನ ವಿಚಾರಕ್ಕೆ ಸೂರ್ಯನನ್ನು ತರೋದಕ್ಕೆ ಆಗುತ್ತಾ ಅಂತ ಉತ್ತರಿಸುತ್ತಾರೆ. ಅದಲ್ಲದೇ ಹಾಸಿಗೆ, ದಿಂಬು ಏನನ್ನು ಕೊಡ್ತಿಲ್ಲ. ತುಂಬಾ ಕನಿಷ್ಠವಾಗಿ ನಡೆಸಿಕೊಳ್ತಿದ್ದಾರೆ ಎಂದು ಮನವಿ ಮಾಡಿಕೊಂಡಿದ್ದಾರೆ. ಅರ್ಜಿ ಸ್ವೀಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆ.27ಕ್ಕೆ ಮುಂದೂಡಿದೆ.
ಕಳೆದ ಬಾರಿ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದಾಗ ಅಧಿಕಾರಿಗಳು ರಾಜಾತಿಥ್ಯ ನೀಡಿದ್ದರು. ಆದರೆ ಸುಪ್ರೀಂಕೋರ್ಟ್ ಖಡಕ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಈ ಬಾರಿ ಜೈಲಾಧಿಕಾರಿಗಳು ಯಾವುದೇ ವಿಶೇಷ ಆತಿಥ್ಯ ನೀಡಿಲ್ಲ. ಚೆನ್ನಾಗಿ ತಿಂದು ಉಂಡು ಬಾಡಿ ಬಿಲ್ಡ್ ಮಾಡಿದ್ದ ದರ್ಶನ್ ಇದೀಗ ಕುಗ್ಗಿ ಹೋಗಿದ್ದಾರೆ.
ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








