ಬೆಂಗಳೂರು : ಕೊರೊನಾ ವೇಗಕ್ಕೆ ಬ್ರೇಕ್ ಹಾಕಲು ಸರ್ಕಾರ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನ ಲಾಕ್ ಡೌನ್ ಮಾಡಿದೆ. ಈ ಹಿನ್ನೆಲೆ ಪಕ್ಷ ಸಂಘಟನೆ, ಸದಸ್ಯತ್ವ ನೋಂದಣಿ ಹಾಗೂ ಮುಂದಿನ ಚುನಾವಣೆಗಳ ಸಿದ್ಧತೆ ಬಗ್ಗೆ ಸಮಾಲೋಚಿಸಲು ಕರೆಯಲಾಗಿದ್ದ ಸಭೆಗಳನ್ನು ಜೆಡಿಎಸ್ ರದ್ದುಗೊಳಿಸಿದೆ.
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ನೇತೃತ್ವದಲ್ಲಿ ಕಳೆದ ವಾರ ಪಕ್ಷದ ಮುಖಂಡರ ಸಭೆಗಳನ್ನು ಆರಂಭಿಸಲಾಗಿತ್ತು. ಈಗಾಗಲೇ ಬೆಂಗಳೂರು ನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಮುಖಂಡರ ಸಭೆ ನಡೆಸಲಾಗಿತ್ತು.
ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆ ಆಯಾ ಜಿಲ್ಲೆಯ ಮುಖಂಡರ ಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.








