ನವದೆಹಲಿ, ಸೆ.18: ಕರ್ನಾಟಕದ (Karnataka) ಕಲಬುರಗಿ (Kalaburagi) ಜಿಲ್ಲೆಯ ಆಳಂದ (Aland) ಲೋಕಸಭಾ ಕ್ಷೇತ್ರದಲ್ಲೂ ಮತಗಳ್ಳತನವಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ (Rahul Gandhi) ಅವರು ಗಂಭೀರ ಆರೋಪ ಮಾಡಿದ್ದಾರೆ. ರಾಹುಲ್ ಗಾಂಧಿಯವರು ಈ ಹಿಂದೆ ಬೆಂಗಳೂರಿನಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಆರೋಪ ಮಾಡಿದ್ದರು.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಳಂದ ವಿಧಾನಸಭಾ ಕ್ಷೆತ್ರದಲ್ಲಿನ 6000 ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಮತದಾರರನ್ನು ಗುರಿಯಾಗಿಸಿಕೊಂಡು ಸಾಫ್ಟ್ವೇರ್ ಬಳಸಿ ಅವರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ ಎಂದರು.
ಭಾರತದ ಮುಖ್ಯ ಚುನಾವಣಾ ಆಯುಕ್ತರು ಪ್ರಜಾಪ್ರಭುತ್ವವನ್ನು ನಾಶಪಡಿಸಿದ ಜನರನ್ನು ರಕ್ಷಿಸುತ್ತಿದ್ದಾರೆ ಎಂಬುದಕ್ಕೆ ಪುರಾವೆಯನ್ನು ನಾನು ಯುವಕರಿಗೆ, ಜನರಿಗೆ ನೀಡುತ್ತೇನೆ. ಮತದಾರರನ್ನು ಸೇರಿಸುವ, ಡಿಲೀಟ್ ಮಾಡುವ ವಿಧಾನವನ್ನು ಸಹ ನಾನು ನಿಮಗೆ ತೋರಿಸುತ್ತೇನೆ ಮತ್ತು ಅದನ್ನು ಹೇಗೆ ಮಾಡಲಾಗುತ್ತದೆ ಎಂಬುದನ್ನು ತೋರಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.
ಇದನ್ನೂ ಓದಿ: ಪ್ರಧಾನಿ ಮೋದಿ ಜೀವನದ ಆಧಾರಿತ ಬಯೋಪಿಕ್.. ಪೋಸ್ಟರ್ ಭರ್ಜರಿ ರಿಲೀಸ್
ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ವಿರುದ್ಧ ರಾಹುಲ್ ಗಾಂಧಿ ನೇರ ಆರೋಪ ಮಾಡಿದ್ದಾರೆ. 18 ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ 18 ಪತ್ರಗಳನ್ನು ಬರೆದು ಮಾಹಿತಿ ಕೇಳಲಾಗಿದೆ, ಆದರೆ ಅವರಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ, ಸಿಐಡಿ ಕೂಡ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು. ಫೆಬ್ರವರಿ 23ರಂದು ಎಫ್ಐಆರ್ ದಾಖಲಿಸಲಾಗಿತ್ತು. ಹಾಗಾದರೆ ಇದೆಲ್ಲದರ ಹಿಂದೆ ಜ್ಞಾನೇಶ್ ಕುಮಾರ್ ಕೈವಾಡವಿದೆ ಎಂದು ಆರೋಪಿಸಿದ್ದಾರೆ.
ಒಂದರ ನಂತರ ಒಂದರಂತೆ ಚುನಾವಣೆಗಳಲ್ಲಿ, ಯಾರೋ, ಯಾವುದೋ ಗುಂಪಿನ ಜನರು, ಭಾರತದಾದ್ಯಂತ ಮತದಾರರನ್ನು ವ್ಯವಸ್ಥಿತವಾಗಿ ಗುರಿಪಡಿಸಿ, ಅವರ ಹೆಸರುಗಳನ್ನು ಡಿಲೀಟ್ ಮಾಡಿದ್ದಾರೆ ಎಂದು ಹೇಳಿದರು.
ಇವರು ವಿವಿಧ ಸಮುದಾಯಗಳು, ಮುಖ್ಯವಾಗಿ ವಿರೋಧ ಪಕ್ಷಗಳಿಗೆ ಮತ ಹಾಕುವವರು, ದಲಿತರು, ಒಬಿಸಿಗಳು, ಆದಿವಾಸಿಗಳು, ಅಲ್ಪಸಂಖ್ಯಾತರು, ವಿರೋಧ ಪಕ್ಷಗಳಿಗೆ ಮತ ಹಾಕುವವರು ನಿರ್ದಿಷ್ಟವಾಗಿ ಗುರಿಯಾಗಿಸಿಕೊಳ್ಳುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ








