ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರು ರಸ್ತೆಗುಂಡಿ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು ರಸ್ತೆಗುಂಡಿ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

Saaksha Editor by Saaksha Editor
September 18, 2025
in Newsbeat, Politics, State, ಬೆಂಗಳೂರು
Bengaluru Potholes Crisis: HD Kumaraswamy Slams Karnataka Government

ಹೆಚ್‌ ಡಿ ಕುಮಾರಸ್ವಾಮಿ

Share on FacebookShare on TwitterShare on WhatsappShare on Telegram

ಬೆಂಗಳೂರು, ಸೆ.18: ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದ (Bengaluru Potholes) ಉದ್ಯಮಿಗಳು, ಖಾಸಗಿ ಕಂಪನಿಗಳ ನೌಕರರು ರೋಸಿ ಹೋಗಿದ್ದಾರೆ. ಐಟಿ ದಿಗ್ಗಜ್ಜರು ನಾವು ಬೆಂಗಳೂರನ್ನೇ ಬಿಟ್ಟೋಗ್ತಿವಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

Related posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026
guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

July 28, 2026

ಸಾಮಾಜಿಕ ಮಾಧ್ಯ,ಮ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ ಅವರು, “ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರೂ ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಗುಂಡಿ ‘ಗಂಡಾಗುಂಡಿ’: ಬೆಂಗಳೂರಿನಿಂದ ಕಂಪನಿಗಳೇ ಶಿಫ್ಟ್?

“ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಈ ಸರಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ” ಎಂದರು.

ಟ್ವಿಟರ್‌ ಪೋಸ್ಟ್‌

ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ.…

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 18, 2025

“ತೆರಿಗೆ ಹಾಕುವುದರಲ್ಲಿ ಸರಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ!” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕು.”

“ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ” ಎಂದು ಟೀಕಿಸಿದರು.

ಕಂಪನಿಗಳಿಗೆ ನನ್ನ ಮನವಿ ಇಷ್ಟೇ;

“ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ ಜನತೆ ಇದ್ದೇವೆ. ಹೋಗುತ್ತೇವೆ ಎನ್ನುವ ಮಾತನ್ನು ಮನಸ್ಸಿನಿಂದ ತೆಗೆದುಬಿಡಿ. ನಾವೆಲ್ಲರೂ ಸೇರಿ ಬೆಂಗಳೂರು ನಗರವನ್ನು ಬದಲಿಸೋಣ” ಎಂದು ಮನವಿ ಮಾಡಿಕೊಂಡರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Bangalore roads potholesBBMP road maintenanceBengaluru civic problemsBengaluru infrastructure issuesBengaluru potholesCivic issues in BengaluruHD Kumaraswamy newsHD Kumaraswamy pothole statementKarnataka government criticismKarnataka Road conditionsಕರ್ನಾಟಕ ಮೂಲಸೌಕರ್ಯ ಸಮಸ್ಯೆಕರ್ನಾಟಕ ಸರ್ಕಾರ ಟೀಕೆಕರ್ನಾಟಕ ಸರ್ಕಾರದ ವಿರುದ್ಧ ಟೀಕೆಬೆಂಗಳೂರು ಗುಂಡಿ ಸಮಸ್ಯೆಬೆಂಗಳೂರು ಡಾಂಬರ ರಸ್ತೆ ಸಮಸ್ಯೆಬೆಂಗಳೂರು ಬಿಬಿಎಂಪಿ ರಸ್ತೆ ತೊಂದರೆಬೆಂಗಳೂರು ರಸ್ತೆಗಳ ದುಸ್ಥಿತಿರಸ್ತೆ ಗುಂಡಿಗಳು ಸಾರ್ವಜನಿಕ ಸುರಕ್ಷತೆರಸ್ತೆ ಸ್ಥಿತಿ ಬೆಂಗಳೂರುಹುಳುಗೊಂಡಿ ಸಮಸ್ಯೆ ಬೆಂಗಳೂರುಹೆಚ್.ಡಿ. ಕುಮಾರಸ್ವಾಮಿಹೆಚ್.ಡಿ. ಕುಮಾರಸ್ವಾಮಿ ವಿವಾದಹೆಚ್‌ಡಿ ಕುಮಾರಸ್ವಾಮಿ ಕಿಡಿ
ShareTweetSendShare
Join us on:

Related Posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram