ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಎಸ್‌. ಎಲ್‌ ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

ಎಸ್‌. ಎಲ್‌ ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

Saaksha Editor by Saaksha Editor
September 24, 2025
in State, ರಾಜ್ಯ
SL Bhyrappa death condolences PM Narendra Modi Siddaramaiah and other national leaders

ಪ್ರಧಾನಿ ಮೋದಿ, ಎಸ್‌ ಎಲ್‌ ಭೈರಪ್ಪ

Share on FacebookShare on TwitterShare on WhatsappShare on Telegram

ಬೆಂಗಳೂರು, ಸೆ.24: ನಾಡಿನ ಹಿರಿಯ ಸಾಹಿತಿ, ಕಾದಂಬರಿಕಾರ ಎಸ್‌. ಎಲ್‌ ಭೈರಪ್ಪ (SL Bhyrappa) ಅವರು ನಿಧನರಾಗಿದ್ದಾರೆ. 94 ವರ್ಷದ ಎಸ್‌ ಎಲ್‌ ಭೈರಪ್ಪ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಎಸ್‌ ಎಲ್‌ ಭೈರಪ್ಪ ಅವರಕ್ಕೆ ದೇಶದ ಮತ್ತು ನಾಡಿನ ಗಣ್ಯ ವ್ಯಕ್ತಿಗಳು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

“ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನದೊಂದಿಗೆ, ನಮ್ಮ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಮುಟ್ಟಿದ ಒಬ್ಬ ಧೀಮಂತ ವ್ಯಕಿತ್ವವನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು, ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು ಚಿಂತಿಸಲು, ಪ್ರಶ್ನಿಸಲು ಮತ್ತು ಸಮಾಜದೊಂದಿಗೆ ಹೆಚ್ಚು ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದವು.
ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಅಚಲವಾದ ಉತ್ಸಾಹವು ಮುಂದಿನ ದಿನಗಳಲ್ಲೂ ಜನರನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.” ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

Related posts

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

July 10, 2026
ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಪರಿಶೀಲನೆ ನೆಪದಲ್ಲಿ ಕಾಲಹರಣ ಬೇಡ, ಸಾಲಮನ್ನಾ ಮಾಡಿ ರೈತರನ್ನು ಬದುಕಿಸಿ -ರೈತರ 50 ಸಾವಿರ ರೂಪಾಯಿ ವರೆಗಿನ ಸಾಲ ತಕ್ಷಣ ಮನ್ನಾ ಮಾಡಿ: ರಾಜ್ಯ ಸರ್ಕಾರಕ್ಕೆ ಆರ್ ಅಶೋಕ್ ಒತ್ತಾಯ

July 10, 2026

ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನದೊಂದಿಗೆ, ನಮ್ಮ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಮುಟ್ಟಿದ ಒಬ್ಬ ಧೀಮಂತ ವ್ಯಕಿತ್ವವನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು, ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು… pic.twitter.com/yAWYGxx4GI

— Narendra Modi (@narendramodi) September 24, 2025

ಸಿಎಂ ಸಿದ್ದರಾಮಯ್ಯ ಸಂತಾಪ

“ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ‌ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು.” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ.
ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ತಮ್ಮ‌ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ.
ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು.… pic.twitter.com/g4tZWYroHS

— CM of Karnataka (@CMofKarnataka) September 24, 2025

ಕಂಬನಿ ಮಿಡಿದ ಹೆಚ್‌ಡಿ ಕುಮಾರಸ್ವಾಮಿ

“’ಪರ್ವ’ ಮತ್ತು ‘ಉತ್ತರಕಾಂಡ’ ಕಾದಂಬರಿಗಳ ಮೂಲಕ ಮಹಾಭಾರತ ಹಾಗೂ ರಾಮಾಯಣವನ್ನು ನೋಡುವ ಮತ್ತು ಓದುವ ಕ್ರಮವನ್ನೇ ಬದಲಿಸಿದ ಅಭಿಜಾತ ಕಾದಂಬರಿಕಾರ ಸರಸ್ವತಿ ಸಮ್ಮಾನ ಪುರಸ್ಕೃತರು, ಪದ್ಮಭೂಷಣ ಎಸ್.ಎಲ್. ಭೈರಪ್ಪನವರು ನಿಧನರಾದರೆಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು.

ಶ್ರೀ ಭೈರಪ್ಪನವರ ಕಾದಂಬರಿಗಳನ್ನು ನಾನು ನಿಕಟವಾಗಿ ಓದಿದ್ದೇನೆ. ಅವರ ಕಥನ ಶೈಲಿ, ಪಾತ್ರ ಸೃಷ್ಟಿಯ ಪ್ರತಿಭೆಗೆ ಮಾರು ಹೋಗಿದ್ದೇನೆ. ಅವರು ಕನ್ನಡ ನೆಲದಲ್ಲಿ ಹುಟ್ಟಿ ಕನ್ನಡದಲ್ಲೇ ಬರೆದ ಅಪ್ಪಟ ಭಾರತೀಯ ಕಾದಂಬರಿಕಾರರು. ಮೇಲಾಗಿ ಹಾಸನ ಜಿಲ್ಲೆಯಲ್ಲಿ ಹುಟ್ಟಿದ್ದ ‘ಅಮರ ಪ್ರತಿಭೆ’ ಎಂಬ ಹೆಮ್ಮೆ ನನ್ನದು. ಅವರ ಅಗಲಿಕೆಯಿಂದ ಬಹುದೊಡ್ಡ ಶೂನ್ಯ ಸೃಷ್ಟಿಯಾಗಿದೆ.

ಶ್ರೀಯುತರ ನಿಧನ ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರು, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: ಪದ್ಮಭೂಷಣ, ಹಿರಿಯ ಸಾಹಿತಿ ಡಾ. ಎಸ್‌.ಎಲ್‌ ಭೈರಪ್ಪ ನಿಧನ

ಸಂತಾಪ ಸೂಚಿಸಿದ ಮಾಜಿ ಪ್ರಧಾನಿ

“ಕನ್ನಡ ಸಾಹಿತ್ಯ ಲೋಕದ ಮೇರು ಲೇಖಕ, ಸರಸ್ವತಿ ಸಮ್ಮಾನ್ ಪುರಸ್ಕೃತರಾದ, ಪದ್ಮಭೂಷಣ ಡಾ. ಎಸ್.ಎಲ್. ಭೈರಪ್ಪರವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಕನ್ನಡ ಸಾಹಿತ್ಯ ಪ್ರಪಂಚಕ್ಕೆ ಉತ್ಕೃಷ್ಟ ಕಾದಂಬರಿಗಳ‌ ನೀಡಿ, ಲಕ್ಷಾಂತರ ಓದುಗರ ಮನಗೆದ್ದಿದ್ದ, ಭೈರಪ್ಪನವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಭರಿಸಲಾಗದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.” ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಸಂತಾಪ ಸೂಚಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Bhyrappa death national leaders responseCondolences for Dr SL BhyrappaEminent personalities mourn SL BhyrappaLeaders pay tribute to SL BhyrappaPadma Bhushan SL Bhyrappa death newsPM Modi on SL Bhyrappa deathPM Modi tribute to Kannada writer SL BhyrappaPrime Minister Modi condoles SL Bhyrappa deathSL Bhyrappa obituary reactionsSL Bhyrappa passes away Modi reactionಎಸ್ ಎಲ್ ಭೈರಪ್ಪ ನಿಧನಕ್ಕೆ ನರೇಂದ್ರ ಮೋದಿ ಸಂತಾಪಎಸ್ ಎಲ್ ಭೈರಪ್ಪ ಸಾವಿಗೆ ರಾಜಕೀಯ ನಾಯಕರ ಸಂತಾಪಎಸ್.ಎಲ್. ಭೈರಪ್ಪ ನಿಧನಡಾ. ಎಸ್.ಎಲ್. ಭೈರಪ್ಪ ನಿಧನ – ಪ್ರಧಾನಿ ಮೋದಿ ಶೋಕಡಾ. ಭೈರಪ್ಪ ನಿಧನಕ್ಕೆ ಸಿದ್ಧರಾಮಯ್ಯ ಪ್ರತಿಕ್ರಿಯೆಪ್ರಧಾನಿ ಮೋದಿ ಎಸ್ ಎಲ್ ಭೈರಪ್ಪಗೆ ಶ್ರದ್ಧಾಂಜಲಿಭೈರಪ್ಪ ನಿಧನಕ್ಕೆ ಶೋಕ ಸಂದೇಶಗಳುರಾಷ್ಟ್ರೀಯ ನಾಯಕರಿಂದ ಎಸ್ ಎಲ್ ಭೈರಪ್ಪಗೆ ಶ್ರದ್ಧಾಂಜಲಿಸಾಹಿತಿ ಭೈರಪ್ಪ ನಿಧನ – ನಾಯಕರ ಪ್ರತಿಕ್ರಿಯೆಸಿದ್ಧರಾಮಯ್ಯ ಭೈರಪ್ಪ ನಿಧನಕ್ಕೆ ಶ್ರದ್ಧಾಂಜಲಿ
ShareTweetSendShare
Join us on:

Related Posts

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

by Shwetha
July 10, 2026
0

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಪರಿಶೀಲನೆ ನೆಪದಲ್ಲಿ ಕಾಲಹರಣ ಬೇಡ, ಸಾಲಮನ್ನಾ ಮಾಡಿ ರೈತರನ್ನು ಬದುಕಿಸಿ -ರೈತರ 50 ಸಾವಿರ ರೂಪಾಯಿ ವರೆಗಿನ ಸಾಲ ತಕ್ಷಣ ಮನ್ನಾ ಮಾಡಿ: ರಾಜ್ಯ ಸರ್ಕಾರಕ್ಕೆ ಆರ್ ಅಶೋಕ್ ಒತ್ತಾಯ

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಮತ್ತು ಪ್ರವಾಹದಿಂದ ಕಂಗಾಲಾಗಿರುವ ರೈತರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಒತ್ತಾಯಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಂಕಷ್ಟದಲ್ಲಿರುವ ಅನ್ನದಾತರ...

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

by Shwetha
July 10, 2026
0

ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದ ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ (PG) ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆಗಳ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ....

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಬಿಜೆಪಿ ನಾಯಕರ ಮಕ್ಕಳು ಯಾಕೆ ಆರ್‌ಎಸ್‌ಎಸ್ ಪ್ರಚಾರಕರಾಗುತ್ತಿಲ್ಲ?- ಬಡವರ ಮಕ್ಕಳನ್ನು ಜೈಲಿಗೆ ಕಳಿಸಿ ಬಿಜೆಪಿ ನಾಯಕರು ಮಜಾ ಮಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 10, 2026
0

ಬೆಂಗಳೂರು: ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದು, ಬಿಜೆಪಿಯ ದೊಡ್ಡ ನಾಯಕರ ಮಕ್ಕಳು ಯಾರು ಕೂಡ ಆರ್‌ಎಸ್‌ಎಸ್‌ನಲ್ಲಿ ಪೂರ್ಣಕಾಲಿಕ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ರಾಜ್ಯ ರಾಜಕಾರಣಕ್ಕೆ ನಾನು ಮರಳುವುದು ಖಚಿತ- ಸರಿಯಾದ ಸಮಯ ಬಂದಾಗ ಎಲ್ಲವನ್ನೂ ಬಿಚ್ಚಿಡ್ತೀನಿ: ಟೆಂಡರ್ ವಿಚಾರದಲ್ಲಿ ಡಿಕೆಶಿಗೆ ಎಚ್ ಡಿಕೆ ಎಚ್ಚರಿಕೆ

by Shwetha
July 10, 2026
0

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುತ್ತಾರೆಯೇ ಎಂಬ ಚರ್ಚೆಗಳಿಗೆ ಈಗ ಸ್ವತಃ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram