ಬೆಂಗಳೂರು: ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಬೆಂಗಳೂರಿನ ಜಯನಗರದ ಸಂಜಯ್ ಗಾಂಧಿ ಸರ್ಕಾರಿ ಆಸ್ಪತ್ರೆಯ 5 ವೈದ್ಯರು ಹಾಗೂ 12 ಮಂದಿ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಕಳೆದ ಹಲವು ದಿನಗಳಿಂದ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಈ ವೇಳೆ ವೈದ್ಯರಿಗೂ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದರಿಂದ ಸಂಜಯ್‍ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಸಿಬ್ಬಂದಿ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ವೈದ್ಯರು ಹಾಗೂ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಂಭೀರ ಸ್ವರೂಪದ ರೋಗಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ. ಸಾಮಾನ್ಯ ಲಕ್ಷಣಗಳಿರುವ ಕೊರೊನಾ ರೋಗಿಗಳಿಗೆ ಅಲ್ಲೇ ಚಿಕಿತ್ಸೆ ಮುಂದುವರೆಸಲು ನಿರ್ಧರಿಸಲಾಗಿದೆ.
ಆಸ್ಪತ್ರೆಯ ವೈದ್ಯರು ಹಾಗೂ ಬಹಳಷ್ಟು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...








