ಹಾವೇರಿ : ಬಿಜೆಪಿಯ ಸಚಿವರಲ್ಲಿ ಹೊಂದಾಣಿಕೆ ಇಲ್ಲ ಎಂದು ಹೇಳುತ್ತಿರೋ ಕಾಂಗ್ರೆಸ್ ನಾಯಕರಿಗೆ ಸಚಿವ ಎಸ್.ಟಿ ಸೋಮಶೇಖರ್ ಅವರು ತಿರುಗೇಟು ನೀಡಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಸಚಿವರಲ್ಲಿ ಹೊಂದಾಣಿಕೆ ಇಲ್ಲ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದಾರೆ. ನಮ್ಮಲ್ಲಿ ಎಲ್ಲ ಮಂತ್ರಿಗಳ ನಡುವೆ ಹೊಂದಾಣಿಕೆ ಇದೆ. ಬಿಜೆಪಿ ಸರ್ಕಾರ ಎಲ್ಲ ಮಂತ್ರಿಗಳು ಒಂದಾಗಿ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದೇವೆ. ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ಹೊಂದಾಣಿಕೆ ಇದೆಯಾ ಎಂದು ಪ್ರಶ್ನಿಸಿದ ಸೋಮಶೇಖರ್, ನೂರಕ್ಕೆ ನೂರರಷ್ಟು ಅವರ ನಡುವೆ ಹೊಂದಾಣಿಕೆ ಇಲ್ಲ ಎಂದು ತಿರುಗೇಟು ನೀಡಿದರು.
ಇದೇ ವೇಳೆ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿ ನೀಡಿದ ಸೋಮಶೇಖರ್, ಸಿದ್ದರಾಮಯ್ಯ ಅವರು, ಕೊರೊನಾ ವಿಚಾರದಲ್ಲಿ ನಾವು ಖರ್ಚು ಮಾಡಿರುವ ಹಣದಲ್ಲಿ ಅವ್ಯವಾಹರ ಆಗಿದೆ ಎಂದು ಹೇಳುತ್ತಿದ್ದಾರೆ. ಖರ್ಚು ಮಾಡಿರುವ ಹಣವೇ ಕಡಿಮೆ. ಹೀಗಿರುವಾಗ ಹೆಚ್ಚಿನ ಹಣದ ಅವ್ಯವಹಾರ ಆಗಿದೆ ಅಂದರೆ ಹೇಗೆ ಎಂದು ಪ್ರಶ್ನಿಸಿದರು. ಇನ್ನು ಸಿದ್ದರಾಮಯ್ಯ ಪ್ರಚಾರಕ್ಕಾಗಿ ಲೆಕ್ಕಕೊಡಿ, ಲೆಕ್ಕಕೊಡಿ ಅಂತಿದ್ದಾರೆ. ಲೆಕ್ಕ ಕೊಡಲು ನಾವು ಸಿದ್ಧರಿದ್ದರೂ ಲೆಕ್ಕ ತೆಗೆದುಕೊಳ್ಳಲು ಸಿದ್ದರಾಮಯ್ಯ ಸಿದ್ಧರಿಲ್ಲ ಎಂದು ಕಿಡಿಕಾರಿದರು








