ನಾಗೌರ್ : ಟ್ರಕ್ ಹಾಗೂ ಡಂಪರ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಕಾಲಿಯಾ ಗ್ರಾಮದ ಬಳಿ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ.
ನಾಗೌರ್ ಜಿಲ್ಲೆಯ ಲಡೌನ್ ಹಾಗೂ ದಿದ್ವಾನಾ ಮಧ್ಯೆ ಇರುವ ಬಕಾಲಿಯಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಟ್ರಕ್ ಗೆ ಡಂಪರ್ ಡಿಕಿ ಹೊಡೆದ ಪರಿಣಾಮ ಅಗ್ನಿ ಅನಾಹುತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವ್ಯಕ್ತಿ ಜೈಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಘಟನೆ ಬಗ್ಗೆ ತಿಳಿದು ನಾಲ್ಕು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸಿವೆ. ಜೆಸಿಬಿ ಸಹಾಯದ ಮೂಲಕ ರಸ್ತೆಯಲ್ಲಿನ ಅಪಘಾತಗೊಂಡ ವಾಹನಗಳನ್ನು ತೆರವು ಮಾಡಿ ಬೇರೆ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.








