ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

If DKshi becomes the Chief Minister, I will not be a minister in his cabinet: KN Rajanna

Shwetha by Shwetha
December 7, 2025
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ತುಮಕೂರು: ರಾಜ್ಯ ರಾಜಕೀಯದಲ್ಲಿ ಸದಾ ತಮ್ಮ ನೇರ ಹಾಗೂ ನಿಷ್ಠುರ ಮಾತುಗಳಿಂದಲೇ ಸುದ್ದಿಯಲ್ಲಿರುವ ಹಿರಿಯ ನಾಯಕ ಹಾಗೂ ಸಚಿವ ಕೆ.ಎನ್. ರಾಜಣ್ಣ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ. ತುಮಕೂರಿನಲ್ಲಿ ನಡೆದ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದ ಬಳಿಕ ಮಾತನಾಡಿದ ಅವರು, ತಮ್ಮ ರಾಜಕೀಯ ಭವಿಷ್ಯ ಮತ್ತು ಸಚಿವ ಸ್ಥಾನದ ಕುರಿತು ಸ್ಪಷ್ಟ ನಿಲುವನ್ನು ವ್ಯಕ್ತಪಡಿಸಿದ್ದಾರೆ.

ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಬೇಡ

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

March 3, 2026

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭವಿಷ್ಯದಲ್ಲಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ತಾವು ಸಚಿವರಾಗುವುದಿಲ್ಲ ಎಂದು ಕೆ.ಎನ್. ರಾಜಣ್ಣ ಕಡಕ್ ಆಗಿ ನುಡಿದಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ನಾನು ಈ ಹಿಂದೆಯೇ ಹೇಳಿದ್ದೇನೆ, ಈಗಲೂ ಅದನ್ನೇ ಪುನರುಚ್ಚರಿಸುತ್ತೇನೆ. ಡಿಕೆಶಿ ಸಿಎಂ ಆದರೆ ಅವರ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡವೇ ಬೇಡ. ನನಗೆ ಅಧಿಕಾರ ಸಾಕು, ಇನ್ನೊಬ್ಬರಿಗೆ ಅಥವಾ ಹೊಸಬರಿಗೆ ಆ ಅವಕಾಶ ಸಿಗಲಿ ಎಂಬುದು ನನ್ನ ಅಭಿಪ್ರಾಯ ಎಂದು ಹೇಳುವ ಮೂಲಕ ತ್ಯಾಗದ ಮನೋಭಾವ ಪ್ರದರ್ಶಿಸಿದ್ದಾರೆ.

ನಾನು ಎಂದಿಗೂ ಅಧಿಕಾರಕ್ಕಾಗಿ ಹಪಹಪಿಸಿದವನಲ್ಲ. ಅಧಿಕಾರ ಬೇಕು ಎಂದು ಬೆನ್ನತ್ತುವ ಜಾಯಮಾನ ನನ್ನದಲ್ಲ. ಆದರೆ ಅಧಿಕಾರ ಸಿಕ್ಕಾಗ ಜನಪರ ಕೆಲಸ ಮಾಡುವುದು ಹೇಗೆ ಎಂದು ತೋರಿಸಿಕೊಟ್ಟಿದ್ದೇನೆ. ನಾನು ಸಚಿವನಾಗಿದ್ದಾಗ ಸಹಕಾರಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದೇನೆ. ತಿದ್ದುಪಡಿಗಳನ್ನು (ಅಮೆಂಡ್‌ಮೆಂಟ್) ಜಾರಿಗೆ ತರುವ ಮೂಲಕ ಮತ್ತು ಸೊಸೈಟಿಗಳಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಐತಿಹಾಸಿಕ ಕೆಲಸ ಮಾಡಿದ್ದೇನೆ ಎಂದು ತಮ್ಮ ಸಾಧನೆಗಳನ್ನು ಸ್ಮರಿಸಿದರು.

ಇದೇ ವೇಳೆ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಮಾತನಾಡಿದ ರಾಜಣ್ಣ, 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಘೋಷಿಸುವ ಮೂಲಕ ಪರೋಕ್ಷವಾಗಿ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಅವರ ಅಭಿಮಾನಿಗಳಲ್ಲಿ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ವಾಚ್ ಬಿಟ್ಟು ಜನರ ಸಮಸ್ಯೆಗಳ ಬಗ್ಗೆ ಮಾತನಾಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ದುಬಾರಿ ವಾಚ್‌ಗಳ ಬಗ್ಗೆ ವಿರೋಧ ಪಕ್ಷಗಳು ಮಾಡುತ್ತಿರುವ ಟೀಕೆಗಳಿಗೆ ರಾಜಣ್ಣ ತಿರುಗೇಟು ನೀಡಿದರು. ವಿಪಕ್ಷಗಳಿಗೆ ಟೀಕಿಸಲು ಬೇರೆ ವಿಷಯಗಳೇ ಇಲ್ಲದಂತಾಗಿದೆ. ಅವರು ಊಟಕ್ಕೆ ಹೋದರೂ ವಾಚ್ ಬಗ್ಗೆಯೇ ಮಾತನಾಡುತ್ತಾರೆ. ರಾಜ್ಯದಲ್ಲಿ ಎಷ್ಟೋ ಜ್ವಲಂತ ಸಮಸ್ಯೆಗಳಿವೆ, ವಿರೋಧ ಪಕ್ಷಗಳು ಅವುಗಳ ಬಗ್ಗೆ ಗಮನಹರಿಸಿ ಚರ್ಚೆ ನಡೆಸಲಿ ಎಂದು ಸಲಹೆ ನೀಡಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಸಹೋದರರಿಗೆ ನೋಟಿಸ್ ಬಂದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನೋಟಿಸ್ ಬಂದಿರುವುದು ನನಗೂ ತಿಳಿಯಿತು. ಆದರೆ ಯಾವ ಕಾರಣಕ್ಕೆ ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಇಲ್ಲ. ಅವರ ಮೇಲೆ ಈಗಾಗಲೇ 128 ಕೇಸ್‌ಗಳಿವೆ, ಅದರಲ್ಲಿ ಇದು ಯಾವುದಕ್ಕೆ ಸಂಬಂಧಿಸಿದ್ದು ಎಂಬುದು ಯಾರಿಗೂ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದರು.

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಮತ್ತು ಇಂಡಿಗೋ ವಿಮಾನ ಸ್ಥಗಿತದಂತಹ ಪ್ರಚಲಿತ ವಿದ್ಯಮಾನಗಳ ಬಗ್ಗೆಯೂ ರಾಜಣ್ಣ ಮಾತನಾಡಿದರು. ಹಿಂಸಾಚಾರವನ್ನು ಯಾರೂ ಒಪ್ಪಬಾರದು, ಯಾವುದೇ ಪಕ್ಷದ ಕಾರ್ಯಕರ್ತನ ಮೇಲೂ ಹಲ್ಲೆ ನಡೆಯಬಾರದು ಎಂದು ಹತ್ಯೆಯನ್ನು ಖಂಡಿಸಿದರು. ಇನ್ನು ಇಂಡಿಗೋ ವಿಮಾನ ಹಾರಾಟ ಸ್ಥಗಿತ ವಿಚಾರದಲ್ಲಿ ಪ್ರಧಾನಿ ಮೋದಿಯವರನ್ನು ಸಮರ್ಥಿಸಿಕೊಂಡ ರಾಜಣ್ಣ, ಪೈಲಟ್‌ಗಳ ಕೊರತೆ ಮತ್ತು ಆಡಳಿತ ಮಂಡಳಿಯ ವೈಫಲ್ಯಕ್ಕೆ ಮೋದಿಯೊಬ್ಬರನ್ನೇ ದೂಷಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram