ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಮುಸ್ಲಿಂ ವ್ಯಕ್ತಿ ಹಿಂದೂ ಮಹಿಳೆಯ ಮುಸುಕು ಎಳೆದಿದ್ದರೆ ದೇಶ ಹೊತ್ತಿ ಉರಿಯುತ್ತಿತ್ತು ಎಂದ ಒಮರ್‌ ಅಬ್ದುಲ್ಲಾ

Omar Abdullah says country would have burned if Muslim man had pulled Hindu woman's veil

Shwetha by Shwetha
December 20, 2025
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ಬಿಹಾರದಲ್ಲಿ ಹಿಜಾಬ್‌ ವಿವಾದ ಭುಗಿಲೆದ್ದಿದ್ದು, ಸಾರ್ವಜನಿಕ ಸಮಾರಂಭವೊಂದರಲ್ಲಿ ಮುಸ್ಲಿಂ ವೈದ್ಯೆಯ ಹಿಜಾಬ್‌ ಹಿಡಿದೆಳೆದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ವರ್ತನೆಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ, “ಮುಸ್ಲಿಂ ವ್ಯಕ್ತಿಯೋರ್ವ ಹಿಂದೂ ಮಹಿಳೆಯ ಮುಸುಕನ್ನು ಹಿಡಿದೆಳೆದಿದ್ದರೆ ಏನಾಗುತ್ತಿತ್ತು?

ನಿತೀಶ್‌ ಕುಮಾರ್‌ ವರ್ತನೆಯನ್ನು ಬಲವಾಗಿ ಸಮರ್ಥಸಿಕೊಂಡಿರುವ ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌, “ಸರ್ಕಾರಿ ಕೆಲಸದ ದೃಢೀಕರಣ ಪತ್ರ ಪಡೆಯುವಾಗ ಮುಖ ತೋರಿಸಲು ಏನು ಸಮಸ್ಯೆ? ಭಾರತ ಇಸ್ಲಾಮಿಕ್‌ ರಾಷ್ಟ್ರವಲ್ಲ. ಅಲ್ಲದೇ ಅದೇ ಯುವತಿ ಪಾಸ್‌ಪೋರ್ಟ್‌ ಪಡೆಯಲು ಮತ್ತು ಏರ್‌ಪೋರ್ಟ್‌ಗೆ ಹೋದಾಗ ತನ್ನ ಮುಖವನ್ನು ತೋರಿಸುವುದಿಲ್ಲವೇ?” ಎಂದು ಪ್ರಶ್ನಿಸಿದ್ದರು.

Related posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

August 26, 2026
ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

August 26, 2026

ಅಲ್ಲದೇ ಯುವತಿ ಕೆಲಸ ನಿರಾಕರಿಸಿದರೆ ಏನು? ಎಂಬ ಪ್ರಶ್ನೆಗೆ, “ಆಕೆ ಕೆಲಸವನ್ನಾದರೂ ನಿರಾಕರಿಸಲಿ ನರಕಕ್ಕಾದರೂ ಹೋಗಲಿ” ಎಂದು ಗಿರಿರಾಜ್‌ ಸಿಂಗ್‌ ಖಾರವಾಗಿ ಪ್ರತಿಕ್ರಿಯಿಸಿದ್ದರು. ಇದೇ ಧಾಟಿಯಲ್ಲಿ ಮಾತನಾಡಿದ ಎನ್‌ಡಿಎ ಮಿತ್ರಪಕ್ಷ ನಿಶಾದ್‌ ಪಕ್ಷದ ನಾಯಕ ಮತ್ತು ಉತ್ತರ ಪ್ರದೇಶದ ಸಚಿವ ಸಂಜಯ್‌ ನಿಶಾದ್‌, “ಒಂದು ವೇಳೆ ನಿತೀಶ್‌ ಕುಮಾರ್‌ ಬೇರೆಡೆ ಮುಟ್ಟಿದ್ದರೆ ಏನಾಗುತ್ತಿತ್ತು?” ಎಂದು ಅಸಭ್ಯವಾಗಿ ಕೇಳುವ ಮೂಲಕ ತೀವ್ರ ವಿವಾದ ಸೃಷ್ಟಿಸಿದ್ದಾರೆ.

ಬಿಜೆಪಿ ನಾಯಕರ ಈ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಒಮರ್‌ ಅಬ್ದುಲ್ಲಾ, “ಇಂತಹ ಹೇಳಿಕೆಗಳನ್ನು ಕೇಳಿದಾಗ ಯಾವುದೇ ಮಹಿಳೆಯ ಸುರಕ್ಷತೆ ಬಗ್ಗೆ ಸಹಜವಾಗಿ ಚಿಂತೆ ಮೂಡುತ್ತದೆ. ಒಂದು ವೇಳೆ ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಮಹಿಳೆಯ ಮುಸುಕನ್ನು ಹಿಡಿದೆಳೆದರೆ ಆಗಲೂ ಇದೇ ರೀತಿಯ ಸಮರ್ಥನೆ ಮಾಡಿಕೊಳ್ಳುತ್ತೀರಾ?” ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಆಮ್ ಆದ್ಮಿ ಪಕ್ಷಗಳು ಕೂಡ ನಿತೀಶ್ ಕುಮಾರ್ ಅವರಿಂದ ಬೇಷರತ್ ಕ್ಷಮೆ‌ಗೆ ಪಟ್ಟು ಹಿಡಿದಿವೆ.
ಏತನ್ಮಧ್ಯೆ, ನಿತೀಶ್ ಕುಮಾರ್ ಅವರ ಕ್ರಮವನ್ನು ಅಮ್ನೆಸ್ಟಿ ಇಂಟರ್ನ್ಯಾಷನಲ್ ಸೆನ್ಸಾರ್ ಮಾಡಿದೆ. ಘಟನೆಯನ್ನು “ಮಹಿಳೆಯ ಘನತೆ, ಸ್ವಾಯತ್ತತೆ ಮತ್ತು ಗುರುತಿನ ಮೇಲಿನ ದಾಳಿ” ಎಂದು ಅದು ಕರೆದಿದೆ.

“ಸಾರ್ವಜನಿಕ ಅಧಿಕಾರಿಯೊಬ್ಬರು ಮಹಿಳೆಯ ಹಿಜಾಬ್ ಅನ್ನು ಬಲವಂತವಾಗಿ ಕೆಡವಿದಾಗ, ಇಂತಹ ನಡವಳಿಕೆ ಸ್ವೀಕಾರಾರ್ಹ ಎಂಬ ಸಂದೇಶವನ್ನು ಸಾರ್ವಜನಿಕರಿಗೆ ರವಾನಿಸುತ್ತದೆ. ಇಂತಹ ಕ್ರಮಗಳು ಭಯವನ್ನು ಹೆಚ್ಚಿಸುತ್ತವೆ ಮತ್ತು ತಾರತಮ್ಯವನ್ನು ಸಾಮಾನ್ಯಗೊಳಿಸುತ್ತವೆ.” ಎಂದು ಜಾಗತಿಕ ಹಕ್ಕುಗಳ ಸಂಘಟನೆ ಅಸಮಾಧಾನ ಹೊರಹಾಕಿದೆ.

ಆಯುಷ್‌ ವೈದ್ಯರಿಗೆ ನೌಕರಿ ಪ್ರಮಾಣಪತ್ರ ಕೊಡುವ ಸಮಾರಂಭದಲ್ಲಿ, ಮುಸ್ಲಿಂ ವೈದ್ಯೆ ಧರಿಸಿದ್ದ ಹಿಜಾಬ್‌ನ್ನು ನಿತೀಶ್‌ ಕುಮಾರ್‌ ತೆಗೆಯಲು ಪ್ರಯತ್ನಿಸಿದ್ದರು. ನಿತೀಶ್‌ ಕುಮಾರ್‌ ಅವರ ವರ್ತನೆ ತೀವ್ರ ಟೀಕೆ ವ್ಯಕ್ತವಾಗಿತ್ತು. ಇತ್ತೀಚಿಗೆ ಕೇರಳದಲ್ಲಿ ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಗೆ ಶಾಲೆಗೆ ನಿರ್ಬಂಧ ಹಾಕಿದ ಘಟನೆ, ತೀವ್ರ ವಿವಾದವನ್ನು ಸೃಷ್ಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ShareTweetSendShare
Join us on:

Related Posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

by Shwetha
August 26, 2026
0

ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

by Shwetha
August 26, 2026
0

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಅಥವಾ ತಲೆಗೆ ಸ್ಕಾರ್ಫ್ ಧರಿಸಲು ಅನುಮತಿ ನೀಡಬೇಕು ಎಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ತರಗತಿಯಲ್ಲಿ ಹಿಜಾಬ್...

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

by Shwetha
August 26, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಾಡಿದ್ದ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

by Shwetha
August 26, 2026
0

ಬೆಂಗಳೂರು ಶಾಸಕರ ಬಂಡಾಯದ ಕಿಚ್ಚು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆಯ ಗುಸುಗುಸು ಈಗ ಜೋರಾಗಿ ಕೇಳಿಬರುತ್ತಿದೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು...

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

by Shwetha
August 26, 2026
0

ದೇಶದಲ್ಲಿ ಶಿಕ್ಷಣದ ಸ್ಥಿತಿಗತಿ ಮತ್ತು ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಸಾವಿರಾರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram