ಪಾಕಿಸ್ತಾನದಲ್ಲಿ ಬಂಧಿಯಾಗಿರುವ ಭಾರತದ ಗುಪ್ತಚರ ಇಲಾಖೆ ಅಧಿಕಾರಿ ಕುಲಭೂಷಣ್ ಜಾಧವ್ ಅವರೊಂದಿಗೆ ಬೇಷರತ್ತು ಸಂಪರ್ಕ ಹೊಂದಲು ಅವಕಾಶ ಕೋರಿ ಪಾಕ್ ಗೆ ಭಾರತ ಒತ್ತಾಯಿಸಿದೆ. ಜಾಧವ್ ಅವರ ಮರುಪರಿಶೀಲನಾ ಅರ್ಜಿ ತಿರಸ್ಕಾರದ ನಂತರ ಭಾರತ ಇದೀಗ ಜಾಧವ್ ಅವರೊಂದಿಗೆ ಸಂಪರ್ಕಕ್ಕೆ ಅವಕಾಶ ಮಾಡಿಕೊಡುವಂತೆ ಒತ್ತಡ ಹರ‍್ತಿದೆ. ಪಾಕಿಸ್ತಾನದಲ್ಲಿ ಬಂಧಿಯಾಗಿರುವ ಭಾರತದ ಗುಪ್ತಚರ ಇಲಾಖೆ ಅಧಿಕಾರಿ ಕುಲಭೂಷಣ್ ಜಾಧವ್ ಅವರೊಂದಿಗೆ ಬೇಷರತ್ತು ಸಂಪರ್ಕ ಹೊಂದಲು ಅವಕಾಶ ಕೋರಿ ಪಾಕ್ ಗೆ ಭಾರತ ಒತ್ತಾಯಿಸಿದೆ. ಜಾಧವ್ ಅವರ ಮರುಪರಿಶೀಲನಾ ಅರ್ಜಿ ತಿರಸ್ಕಾರದ ನಂತರ ಭಾರತ ಇದೀಗ ಜಾಧವ್ ಅವರೊಂದಿಗೆ ಸಂಪರ್ಕಕ್ಕೆ ಅವಕಾಶ ಮಾಡಿಕೊಡುವಂತೆ ಒತ್ತಡ ಹರ‍್ತಿದೆ. 2017ರ ಏಪ್ರಿಲ್‌ನಲ್ಲಿ ಬೇಹುಗಾರಿಕೆ ಹಾಗೂ ಭಯೋತ್ಪಾದನೆ ಆಪಾದನೆಯ ಮೇಲೆ ನಿವೃತ್ತ ಭಾರತೀಯ ನೌಕಾಪಡೆಯ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯನ್ನು ಮರುಪರಿಶೀಲಿಸುವಂತೆ ಪರಿಶೀಲನಾ ಅರ್ಜಿ ಸಲ್ಲಿಸಲು ಜಾಧವ್ ನಿರಾಕರಿಸಿದ್ದಾರೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ
ಮರುಪರಿಶೀಲನೆಗಾಗಿ ಅರ್ಜಿಯನ್ನು ಸಲ್ಲಿಸಲು ಜಾಧವ್ ನಿರಾಕರಿಸಿದ್ದಾರೆ ಎಂದು ಕಳೆದ ವಾರ ಪಾಕಿಸ್ತಾನ ಹೇಳಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಭಾರತ, ಪಾಕಿಸ್ತಾನವು ಈ ವಿಚಾರದಲ್ಲಿ ನಾಟಕವಾಡುತ್ತಿದೆ. ಬಲವಂತವಾಗಿ ಜಾಧವ್ರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿದ್ದು, ಯಾವುದೇ ಷರತ್ತು ವಿಧಿಸದೆ ಜಾಧವ್‌ಗೆ ಅರ್ಜಿ ಸಲ್ಲಿಸಲು ಕಾನ್ಸುಲರ್ ಭೇಟಿಗೆ ಅವಕಾಶ ನೀಡಬೇಕೆಂದು ಕೇಳಿದೆ.








