ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಭಾರತ ಸೂಪರ್ ಪವರ್ ಆಗಲು ಮುಸ್ಲಿಂ ನಾಯಕತ್ವ ಅತ್ಯಗತ್ಯ; ಬಿಜೆಪಿಗೆ ಪರ್ಯಾಯ ನಾವೇ, ನಮ್ಮದು ಇಂಡಿಯಾ ಟೀಂ ಎಂದು ಗುಡುಗಿದ ಅಸಾದುದ್ದೀನ್ ಓವೈಸಿ

Muslim leadership is essential for India to become a superpower: Asaduddin Owaisi

Shwetha by Shwetha
January 19, 2026
in ದೇಶ - ವಿದೇಶ, National, Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಹೈದರಾಬಾದ್: ಮಹಾರಾಷ್ಟ್ರದ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ದೇಶದ ರಾಜಕೀಯ ಚಿತ್ರಣವನ್ನೇ ಬದಲಿಸುವ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದಲ್ಲಿ 125ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಗೆಲುವು ಸಾಧಿಸುವ ಮೂಲಕ ಹೈದರಾಬಾದ್ ಮೂಲದ ಎಐಎಂಐಎಂ ಪಕ್ಷವು ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಈ ಗೆಲುವಿನ ಬೆನ್ನಲ್ಲೇ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತಮ್ಮ ಮುಂದಿನ ರಾಜಕೀಯ ನಡೆ ಮತ್ತು ಮಹತ್ವಾಕಾಂಕ್ಷೆಗಳನ್ನು ಸ್ಪಷ್ಟಪಡಿಸಿದ್ದು, ಭಾರತ ವಿಶ್ವಗುರುವಾಗಲು ಮುಸ್ಲಿಂ ನಾಯಕತ್ವವನ್ನು ಬೆಳೆಸುವುದು ಅನಿವಾರ್ಯ ಎಂದು ಪ್ರತಿಪಾದಿಸಿದ್ದಾರೆ.

ಮಹಾರಾಷ್ಟ್ರದ ಫಲಿತಾಂಶ ಕೇವಲ ಸಂಖ್ಯೆಗಳ ಆಟವಲ್ಲ, ಅದು ಎಐಎಂಐಎಂ ಪಕ್ಷದ ಅಸ್ತಿತ್ವದ ಪ್ರಶ್ನೆಗೆ ಉತ್ತರವಾಗಿದೆ. ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಅಬ್ಬರದ ನಡುವೆಯೂ ಓವೈಸಿ ನೇತೃತ್ವದ ಪಕ್ಷ ತನ್ನದೇ ಆದ ಮತಬ್ಯಾಂಕ್ ಭದ್ರಪಡಿಸಿಕೊಂಡಿದೆ. ಎನ್‌ಸಿಪಿ (ಶರದ್ ಪವಾರ್ ಬಣ) ಮತ್ತು ರಾಜ್ ಠಾಕ್ರೆ ಅವರ ಎಂಎನ್‌ಎಸ್ ಪಕ್ಷಗಳು ಗಳಿಸಿದ ಒಟ್ಟು ಸ್ಥಾನಗಳಿಗಿಂತ ಎರಡರಷ್ಟು ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಎಐಎಂಐಎಂ ಮಹಾರಾಷ್ಟ್ರ ರಾಜಕೀಯದಲ್ಲಿ ಗಟ್ಟಿಯಾಗಿ ನೆಲೆಯೂರುವ ಸೂಚನೆ ನೀಡಿದೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಬಿಜೆಪಿ ಮತ್ತು ಸಂಘ ಪರಿವಾರಕ್ಕೆ ಸೆಡ್ಡು ಹೊಡೆಯಲು ಕಾಂಗ್ರೆಸ್ ವಿಫಲ

ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ಮತ್ತು ಇತರೆ ಜಾತ್ಯತೀತ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿಯನ್ನು ಎದುರಿಸಲು ಯಾವ ರಾಜಕೀಯ ಪಕ್ಷದ ಬಳಿಯೂ ಸ್ಪಷ್ಟವಾದ ಕಾರ್ಯತಂತ್ರವಿಲ್ಲ. ಸಂಘ ಪರಿವಾರವನ್ನು ಎದುರಿಸುವ ವಿಷಯದಲ್ಲಿ ಕಾಂಗ್ರೆಸ್ ಸೇರಿದಂತೆ ಯಾರಿಗೂ ನಿರ್ದಿಷ್ಟ ನೀತಿಯಿಲ್ಲ. ಆದರೆ ಎಐಎಂಐಎಂ ಸೈದ್ಧಾಂತಿಕ ಸ್ಪಷ್ಟತೆಯೊಂದಿಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಹೋರಾಡುತ್ತಿದೆ ಎಂದು ಓವೈಸಿ ಹೇಳಿದರು.

ನಮ್ಮದು ಇಂಡಿಯಾ ಟೀಂ ವಿನಃ ಬಿ ಟೀಂ ಅಲ್ಲ

ಎಐಎಂಐಎಂ ಪಕ್ಷವನ್ನು ಬಿಜೆಪಿಯ ಬಿ ಟೀಂ ಎಂದು ಕರೆಯುವವರ ವಿರುದ್ಧ ಕಿಡಿಕಾರಿದ ಓವೈಸಿ, ನಾವು ಯಾರ ಬಿ ಟೀಂ ಕೂಡ ಅಲ್ಲ. ನಾವು ಭಾರತದ ಟೀಂ. ನಮ್ಮದು ಸ್ವತಂತ್ರ ರಾಜಕೀಯ ಅಸ್ತಿತ್ವ ಎಂದು ತಿರುಗೇಟು ನೀಡಿದರು. ಮುಸ್ಲಿಮರು ಕೇವಲ ಕಾಂಗ್ರೆಸ್ ಅಥವಾ ಇತರೆ ಜಾತ್ಯತೀತ ಪಕ್ಷಗಳ ಓಟ್ ಬ್ಯಾಂಕ್ ಆಗಿ ಉಳಿಯಬಾರದು. ಅವರು ತಮ್ಮದೇ ಆದ ಸ್ವತಂತ್ರ ನಾಯಕತ್ವವನ್ನು ರೂಪಿಸಿಕೊಳ್ಳಬೇಕು. ಈ ದಿಸೆಯಲ್ಲಿ ಎಐಎಂಐಎಂ ಕಾರ್ಯಪ್ರವೃತ್ತವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಭಾರತ ಸೂಪರ್ ಪವರ್ ಆಗಲು ವಂಚಿತರ ಉದ್ಧಾರವಾಗಬೇಕು

ತಮ್ಮ ರಾಜಕೀಯದ ಅಂತಿಮ ಗುರಿಯನ್ನು ಬಿಚ್ಚಿಟ್ಟ ಓವೈಸಿ, ಭಾರತ ಜಾಗತಿಕ ಮಟ್ಟದಲ್ಲಿ ಸೂಪರ್ ಪವರ್ ಆಗಿ ಹೊರಹೊಮ್ಮಬೇಕಾದರೆ ದೇಶದ ಅಲ್ಪಸ್ಯಾಂಖ್ಯಾತರು ಮತ್ತು ವಂಚಿತ ಸಮುದಾಯಗಳು ರಾಜಕೀಯ ಅಧಿಕಾರ ಪಡೆಯಬೇಕು ಎಂದರು. ಮುಸ್ಲಿಂ ನಾಯಕತ್ವ ಬೆಳೆಯುವುದು ರಾಷ್ಟ್ರದ ಹಿತಾಸಕ್ತಿಗೆ ಪೂರಕವೇ ಹೊರತು ಮಾರಕವಲ್ಲ. ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರು ಪ್ರತಿಪಾದಿಸಿದ ಬಹುತ್ವ ಮತ್ತು ವೈವಿಧ್ಯತೆಯ ತತ್ವವನ್ನು ನಾವು ಪಾಲಿಸುತ್ತಿದ್ದೇವೆ. ನಾನು ಸಾಯುವ ಮುನ್ನ ನನ್ನ ಸಮುದಾಯ ಮತ್ತು ದೇಶವನ್ನು ಮುನ್ನಡೆಸುವ ಸದೃಢ ನಾಯಕತ್ವವನ್ನು ನೋಡಲು ಬಯಸುತ್ತೇನೆ ಎಂದು ಓವೈಸಿ ಭಾವುಕರಾಗಿ ನುಡಿದರು.

ಮುಂದಿನ ಗುರಿ ಪಶ್ಚಿಮ ಬಂಗಾಳ ಮತ್ತು ರಾಷ್ಟ್ರ ರಾಜಕಾರಣ

ಮಹಾರಾಷ್ಟ್ರದ ಗೆಲುವು ಎಐಎಂಐಎಂ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ. ಹೈದರಾಬಾದ್, ಮಹಾರಾಷ್ಟ್ರ, ಬಿಹಾರದ ಬಳಿಕ ಇದೀಗ ಪಕ್ಷದ ಚಿತ್ತ ಪಶ್ಚಿಮ ಬಂಗಾಳದತ್ತ ನೆಟ್ಟಿದೆ. ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲೂ ಪಕ್ಷ ಸ್ಪರ್ಧಿಸುವ ಇಂಗಿತವನ್ನು ಓವೈಸಿ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಪರ್ಯಾಯ ಶಕ್ತಿಯಾಗಿ ಬೆಳೆಯಲು ಎಐಎಂಐಎಂ ಸಜ್ಜಾಗಿದ್ದು, ಮುಸ್ಲಿಂ ಸಮುದಾಯದ ಸಬಲೀಕರಣವೇ ಪಕ್ಷದ ಮೂಲ ಮಂತ್ರವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.

ಮಹಾರಾಷ್ಟ್ರದ ನಾಗರಿಕ ಸಂಸ್ಥೆಗಳ ಚುನಾವಣಾ ಫಲಿತಾಂಶ ಅಸಾದುದ್ದೀನ್ ಓವೈಸಿ ಅವರ ರಾಷ್ಟ್ರೀಯ ಮಹತ್ವಾಕಾಂಕ್ಷೆಗೆ ರೆಕ್ಕೆಪುಕ್ಕ ನೀಡಿದ್ದು, ಮುಂದಿನ ದಿನಗಳಲ್ಲಿ ಜಾತ್ಯತೀತ ಪಕ್ಷಗಳಿಗೆ ಮತ್ತು ಬಿಜೆಪಿಗೆ ದೊಡ್ಡ ಸವಾಲಾಗುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ.

ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram