ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ 976 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆದರೆ ಇವರಲ್ಲಿ ಹಲವು ಮಂದಿ ಸರ್ಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿದ್ದಾರೆ. ಹೀಗಾಗಿ
ಇಡೀ ವಿಜಯಪುರ ನಗರದಲ್ಲಿರುವ ಬಹುತೇಕ ಸರ್ಕಾರಿ ಕಚೇರಿಗಳು ಕೊರೊನಾ ಮಯವಾಗಿದ್ದು, ಸೀಲ್ಡೌನ್ ಆಗಿವೆ.
ವಿಜಯಪುರ ಮಹಾನಗರ ಪಾಲಿಕೆ, ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿ, ತಾಲೂಕು ಕಚೇರಿ, ಮಹಿಳಾ ವಿಶ್ವವಿದ್ಯಾಲಯ, ಗಾಂಧಿಗಂಜ್ ಪೊಲೀಸ್ ಠಾಣೆ ಸೇರಿದಂತೆ ಬಹುತೇಕ ಸರ್ಕಾರಿ ಕಚೇರಿಗಳನ್ನು ಸೀಲ್ಡೌನ್ ಮಾಡಲಾಗಿದೆ.
ವಿಜಯಪುರ ಮಹಾನಗರ ಪಾಲಿಕೆಯ 900 ಸಿಬ್ಬಂದಿಗಳ ಪೈಕಿ 22 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಪಾಲಿಕೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಪಾಲಿಕೆ ಕಚೇರಿಯನ್ನು ಸ್ಯಾನಿಟೈಸ್ ಮಾಡಿ ಕಾರ್ಯಾರಂಭ ಮಾಡಲು ಸೂಚನೆ ನೀಡಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ತಿಳಿಸಿದ್ದಾರೆ.
ವಿಜಯಪುರ ತಹಶೀಲ್ದಾರ್ ಕಚೇರಿಯ ನಾಲ್ವರು ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಸದ್ಯಕ್ಕೆ ಸೀಲ್ಡೌನ್ ಮಾಡಿ 48 ಗಂಟೆ ನಂತರ ಸ್ಯಾನಿಟೈಸ್ ಮಾಡಿ ಕಾರ್ಯರಂಭ ಮಾಡಲು ತಿಳಿಸಲಾಗಿದೆ.
ವಿಜಯಪುರ ನಗರದ ಪೊಲೀಸರ ಪೈಕಿ 40 ಜನರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವಿಜಯಪುರ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಯನ್ನೂ ಸೀಲ್ಡೌನ್ ಮಾಡಲಾಗಿದೆ. ಜತೆಗೆ ಸಮೀಪವೇ ಇರುವ ಗಾಂಧಿಗಂಜ್ ಪೊಲೀಸ್ ಠಾಣೆ ಕೂಡ ಸೀಲ್ಡೌನ್ ಆಗಿದೆ.
ಇದೇ ವೇಳೆ ರಾಜ್ಯದ ಮೊದಲ ಮಹಿಳಾ ವಿಶ್ವವಿದ್ಯಾಲಯದ 14 ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವಿವಿಯನ್ನೂ ಕೂಡ ಸೀಲ್ಡೌನ್ ಮಾಡಲಾಗಿದೆ.
ವಿಜಯಪುರ ನಗರದಲ್ಲಿ ಎಲ್ಲಿ ನೋಡಿದರೂ ಸರ್ಕಾರಿ ಕಚೇರಿಗಳು ಸೀಲ್ಡೌನ್ ಬೋರ್ಡ್ ಹಾಕಿಕೊಂಡಿವೆ. ಈಗಲಾದರೂ ಸರ್ಕಾರ ಎಚ್ಚೆತ್ತು ಕೊರೊನಾ ಸೋಂಕು ಹರಡುವುದನ್ನು ತಡೆಯಲು ಕ್ರಮಕೈಗೊಳ್ಳಬೇಕಿದೆ.
ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...








