ದಿನ ಭವಿಷ್ಯ: 06-02-2026
ಮೇಷ ರಾಶಿ
ಇಂದು ನಿಮಗೆ ಅತ್ಯಂತ ಚೈತನ್ಯದಾಯಕ ದಿನವಾಗಿರುತ್ತದೆ. ಉದ್ಯೋಗ ಸ್ಥಳದಲ್ಲಿ ನಿಮ್ಮ ಕೆಲಸಕ್ಕೆ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ಬಾಕಿ ಉಳಿದಿರುವ ಸರ್ಕಾರಿ ಕೆಲಸಗಳು ಇಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆರ್ಥಿಕವಾಗಿ ದಿನವು ಉತ್ತಮವಾಗಿದ್ದು ಹಳೆಯ ಸಾಲ ಮರುಪಾವತಿಯಾಗಬಹುದು. ಕುಟುಂಬದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು ಆದ್ದರಿಂದ ತಾಳ್ಮೆ ವಹಿಸಿ.
ಅದೃಷ್ಟ ಬಣ್ಣ ಕೆಂಪು
ಅದೃಷ್ಟ ಸಂಖ್ಯೆ 9
ವೃಷಭ ರಾಶಿ
ಶುಕ್ರವಾರವಾದ ಇಂದು ನಿಮ್ಮ ರಾಶ್ಯಾಧಿಪತಿ ಶುಕ್ರನ ಪ್ರಭಾವದಿಂದ ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಉತ್ತಮ ಅವಕಾಶಗಳು ಹುಡುಕಿಕೊಂಡು ಬರುತ್ತವೆ. ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭಾಂಶ ದೊರೆಯಲಿದೆ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ಮನೆಯ ಅಲಂಕಾರಕ್ಕಾಗಿ ಅಥವಾ ಐಷಾರಾಮಿ ವಸ್ತುಗಳಿಗಾಗಿ ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಆರೋಗ್ಯದ ಕಡೆಗೆ ಸ್ವಲ್ಪ ಗಮನ ಹರಿಸಿ.
ಅದೃಷ್ಟ ಬಣ್ಣ ಬಿಳಿ
ಅದೃಷ್ಟ ಸಂಖ್ಯೆ 6
ಮಿಥುನ ರಾಶಿ
ಇಂದು ನೀವು ಮಾತನಾಡುವಾಗ ಎಚ್ಚರ ವಹಿಸುವುದು ಅವಶ್ಯಕ. ನಿಮ್ಮ ಮಾತುಗಳು ಇತರರಿಗೆ ನೋವುಂಟು ಮಾಡುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಿರಲಿದ್ದು ಮಾನಸಿಕವಾಗಿ ಸ್ವಲ್ಪ ಕುಗ್ಗುವಿರಿ. ಆದರೆ ಸಂಜೆಯ ವೇಳೆಗೆ ಮಿತ್ರರ ಭೇಟಿಯಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಏಕಾಗ್ರತೆ ವಹಿಸಬೇಕು. ದೂರದ ಪ್ರಯಾಣವನ್ನು ಮುಂದೂಡುವುದು ಒಳ್ಳೆಯದು.
ಅದೃಷ್ಟ ಬಣ್ಣ ಹಸಿರು
ಅದೃಷ್ಟ ಸಂಖ್ಯೆ 5
ಕರ್ಕಾಟಕ ರಾಶಿ
ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಮನಸ್ಸು ಚಂಚಲವಾಗಿರುವ ಕಾರಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಕಷ್ಟವಾಗಬಹುದು. ಹಿರಿಯರ ಸಲಹೆ ಪಡೆಯುವುದು ಉತ್ತಮ. ತಾಯಿಯವರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ರಿಯಲ್ ಎಸ್ಟೇಟ್ ಅಥವಾ ಭೂಮಿಗೆ ಸಂಬಂಧಿಸಿದ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ. ದೈವಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ.
ಅದೃಷ್ಟ ಬಣ್ಣ ಹಾಲು ಬಿಳಿ
ಅದೃಷ್ಟ ಸಂಖ್ಯೆ 2
ಸಿಂಹ ರಾಶಿ
ನಿಮ್ಮ ಆತ್ಮವಿಶ್ವಾಸ ಇಂದು ಉತ್ತುಂಗದಲ್ಲಿರುತ್ತದೆ. ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗಲಿದೆ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಉನ್ನತ ಸ್ಥಾನಮಾನ ದೊರೆಯುವ ಯೋಗವಿದೆ. ಮಕ್ಕಳ ವಿದ್ಯಾಭ್ಯಾಸದ ಕುರಿತು ಶುಭ ಸುದ್ದಿ ಕೇಳುವಿರಿ. ಆರ್ಥಿಕ ಪರಿಸ್ಥಿತಿ ಸದೃಢವಾಗಿರುತ್ತದೆ. ಅನಗತ್ಯ ಕೋಪವನ್ನು ನಿಯಂತ್ರಿಸಿದರೆ ದಿನವು ಅತ್ಯಂತ ಶುಭದಾಯಕವಾಗಿರುತ್ತದೆ.
ಅದೃಷ್ಟ ಬಣ್ಣ ಕೇಸರಿ
ಅದೃಷ್ಟ ಸಂಖ್ಯೆ 1
ಕನ್ಯಾ ರಾಶಿ
ಇಂದು ಆರ್ಥಿಕ ವಿಷಯಗಳಲ್ಲಿ ಜಾಗ್ರತೆ ವಹಿಸಬೇಕು. ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಕಚೇರಿಯಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಕೋರ್ಟು ಕಚೇರಿ ವ್ಯಾಜ್ಯಗಳಲ್ಲಿ ಜಯ ಸಿಗುವ ಸೂಚನೆ ಇದೆ. ಆರೋಗ್ಯದ ವಿಷಯದಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು ಆದ್ದರಿಂದ ಆಹಾರ ಸೇವನೆಯಲ್ಲಿ ಹಿತಮಿತವಿರಲಿ. ವ್ಯಾಪಾರದಲ್ಲಿ ಹೊಸ ಹೂಡಿಕೆ ಮಾಡಲು ಇದು ಸೂಕ್ತ ಸಮಯವಲ್ಲ.
ಅದೃಷ್ಟ ಬಣ್ಣ ಹಸಿರು
ಅದೃಷ್ಟ ಸಂಖ್ಯೆ 5
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಜ್ಯೋತಿಷ್ಯಶಾಸ್ತ್ರತಜ್ಞರು 8548998564
ತುಲಾ ರಾಶಿ
ಇಂದು ನಿಮಗೆ ಅತ್ಯಂತ ಅದೃಷ್ಟದ ದಿನ. ಪ್ರೀತಿ ಪ್ರೇಮದ ವಿಷಯಗಳಲ್ಲಿ ಯಶಸ್ಸು ಸಿಗಲಿದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರುವ ಸಾಧ್ಯತೆ ಇದೆ. ಹೊಸ ಉದ್ಯೋಗದ ಅವಕಾಶಗಳು ಎದುರಾಗಲಿವೆ. ಸೃಜನಶೀಲ ಕೆಲಸಗಳಲ್ಲಿ ಆಸಕ್ತಿ ಹೆಚ್ಚುತ್ತದೆ. ಆರ್ಥಿಕವಾಗಿ ಧನಲಾಭದ ಯೋಗವಿದ್ದು ಹೂಡಿಕೆಗಳು ಲಾಭದಾಯಕವಾಗಲಿವೆ. ಮನಸ್ಸು ಪ್ರಶಾಂತವಾಗಿರುತ್ತದೆ.
ಅದೃಷ್ಟ ಬಣ್ಣ ಬಿಳಿ
ಅದೃಷ್ಟ ಸಂಖ್ಯೆ 6
ವೃಶ್ಚಿಕ ರಾಶಿ
ಇಂದು ವಾಹನ ಚಾಲನೆ ಮಾಡುವಾಗ ಅತಿ ಎಚ್ಚರಿಕೆ ಅಗತ್ಯ. ಅನಗತ್ಯ ತಿರುಗಾಟದಿಂದ ದೈಹಿಕ ಆಯಾಸ ಉಂಟಾಗಬಹುದು. ಕುಟುಂಬದಲ್ಲಿ ಶಾಂತಿ ನೆಲೆಸಲು ಮೌನವಾಗಿರುವುದು ಒಳ್ಳೆಯದು. ಉದ್ಯೋಗದಲ್ಲಿ ವರ್ಗಾವಣೆ ಅಥವಾ ಬದಲಾವಣೆಯ ಸಾಧ್ಯತೆಗಳಿವೆ. ಶತ್ರುಗಳ ಬಾಧೆ ಕಡಿಮೆಯಾಗಲಿದೆ. ದೇವರ ಪ್ರಾರ್ಥನೆಯಿಂದ ಸಂಕಷ್ಟಗಳು ದೂರವಾಗುತ್ತವೆ.
ಅದೃಷ್ಟ ಬಣ್ಣ ಕೆಂಪು
ಅದೃಷ್ಟ ಸಂಖ್ಯೆ 9
ಧನು ರಾಶಿ
ಇಂದು ಅದೃಷ್ಟ ಲಕ್ಷ್ಮಿ ನಿಮ್ಮ ಮನೆ ಬಾಗಿಲಿಗೆ ಬರುವ ಸಂಭವವಿದೆ. ದೀರ್ಘಕಾಲದ ಕನಸುಗಳು ನನಸಾಗುವ ಸಮಯ. ಸಹೋದರ ಸಹೋದರಿಯರಿಂದ ಬೆಂಬಲ ದೊರೆಯಲಿದೆ. ತೀರ್ಥಕ್ಷೇತ್ರ ದರ್ಶನ ಅಥವಾ ದೈವಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯ ಸಿಗಲಿದೆ. ಆರೋಗ್ಯ ಉತ್ತಮವಾಗಿರುತ್ತದೆ.
ಅದೃಷ್ಟ ಬಣ್ಣ ಹಳದಿ
ಅದೃಷ್ಟ ಸಂಖ್ಯೆ 3
ಮಕರ ರಾಶಿ
ಕೆಲಸದ ಸ್ಥಳದಲ್ಲಿ ಅತಿಯಾದ ಜವಾಬ್ದಾರಿಗಳು ಹೆಗಲೇರಬಹುದು. ಆದರೆ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಮುಂದಿನ ದಿನಗಳಲ್ಲಿ ಸಿಗಲಿದೆ. ತಂದೆಯವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಆಸ್ತಿ ಖರೀದಿ ಅಥವಾ ಮಾರಾಟದ ವಿಚಾರದಲ್ಲಿ ಆತುರ ಬೇಡ. ಹಣಕಾಸಿನ ವಿಷಯದಲ್ಲಿ ಮೋಸ ಹೋಗುವ ಸಾಧ್ಯತೆ ಇರುವುದರಿಂದ ಅಪರಿಚಿತರನ್ನು ನಂಬಬೇಡಿ.
ಅದೃಷ್ಟ ಬಣ್ಣ ನೀಲಿ
ಅದೃಷ್ಟ ಸಂಖ್ಯೆ 8
ಕುಂಭ ರಾಶಿ
ಇಂದು ಹೊಸ ಆಲೋಚನೆಗಳು ನಿಮ್ಮ ಮನಸ್ಸಿಗೆ ಬರುತ್ತವೆ. ಸ್ವಂತ ಉದ್ಯೋಗ ಅಥವಾ ವ್ಯಾಪಾರ ಮಾಡುವವರಿಗೆ ಲಾಭದಾಯಕ ದಿನ. ಸ್ನೇಹಿತರ ಸಹಾಯದಿಂದ ಕಷ್ಟದ ಕೆಲಸಗಳು ಸುಲಭವಾಗುತ್ತವೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಸಾಮಾಜಿಕವಾಗಿ ನಿಮ್ಮ ಹೆಸರು ಬೆಳೆಯಲಿದೆ. ದಾಂಪತ್ಯ ಜೀವನದಲ್ಲಿ ಅನ್ಯೋನ್ಯತೆ ಹೆಚ್ಚಾಗಲಿದೆ.
ಅದೃಷ್ಟ ಬಣ್ಣ ನೀಲಿ
ಅದೃಷ್ಟ ಸಂಖ್ಯೆ 8
ಮೀನ ರಾಶಿ
ಇಂದು ಖರ್ಚು ವೆಚ್ಚಗಳ ಮೇಲೆ ಹಿಡಿತವಿರಲಿ. ವಿದೇಶ ಪ್ರಯಾಣಕ್ಕೆ ಪ್ರಯತ್ನಿಸುತ್ತಿರುವವರಿಗೆ ಶುಭ ಸುದ್ದಿ ಸಿಗಬಹುದು. ಆಧ್ಯಾತ್ಮಿಕ ಚಿಂತನೆಗಳಲ್ಲಿ ಮನಸ್ಸು ಹಗುರವಾಗುತ್ತದೆ. ಕಣ್ಣಿಗೆ ಸಂಬಂಧಿಸಿದ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಬಹುದು. ಯಾರಿಗೂ ಸಾಲ ಕೊಡುವ ಮುನ್ನ ಯೋಚಿಸಿ. ಸಂಜೆಯ ವೇಳೆ ದೇವಸ್ಥಾನಕ್ಕೆ ಭೇಟಿ ನೀಡುವುದು ಉತ್ತಮ.
ಅದೃಷ್ಟ ಬಣ್ಣ ಹಳದಿ
ಅದೃಷ್ಟ ಸಂಖ್ಯೆ 3
ಇಂದಿನ ವಿಶೇಷ ಪರಿಹಾರ
ಶುಕ್ರವಾರವಾದ್ದರಿಂದ ಲಕ್ಷ್ಮೀ ದೇವಿಗೆ ತುಪ್ಪದ ದೀಪ ಹಚ್ಚಿ ಮತ್ತು ಕನಕಧಾರ ಸ್ತೋತ್ರವನ್ನು ಪಠಿಸುವುದರಿಂದ ಆರ್ಥಿಕ ಸಮಸ್ಯೆಗಳು ನಿವಾರಣೆಯಾಗಿ ಶುಭವಾಗುತ್ತದೆ.








