ADVERTISEMENT
Tuesday, February 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶ್ರೀವಿಷ್ಣು ಸಹಸ್ರನಾಮದ ಮಹತ್ವ:

admin by admin
February 9, 2026
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶ್ರೀವಿಷ್ಣು ಸಹಸ್ರನಾಮದ ಮಹತ್ವ:

 

ಮನುಷ್ಯನ ಆಯಸ್ಸು ನೂರ ಇಪ್ಪತ್ತು ವರ್ಷ… ಈ 120 ವರ್ಷಗಳಲ್ಲಿ ಅಂದಾಜು 36 ಸಾವಿರ ಹಗಲು ಮತ್ತು 36 ಸಾವಿರ ರಾತ್ರಿಗಳಿವೆ. ಮನುಷ್ಯ ದೇಹ 72 ಸಾವಿರ ನಾಡಿಗಳಿಂದಾಗಿದೆ. ಈ ನಾಡಿಗಳಲ್ಲಿ 36 ಸಾವಿರ ನಾಡಿಗಳು ಎಡ ಭಾಗದಲ್ಲೂ ಮತ್ತು 36 ಸಾವಿರ ನಾಡಿಗಳು ನಮ್ಮಬಲಭಾಗಲ್ಲೂ ಇರುತ್ತವೆ. ಈ ನಾಡಿಗಳಲ್ಲಿ ರಕ್ತ ಸಂಚಾರ ಸರಿಯಾಗಿ ಆದರೆ ಮನುಷ್ಯನಿಗೆ ಯಾವುದೇ ರೋಗ ಬರಲಾರದು.

Related posts

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

February 10, 2026
ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

February 9, 2026

 

 

 

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

 

ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು (ಸಾಕ್ಷಾತ್ ಶ್ರೀಹರಿ)ನಮಗೆ ಕರುಣಿಸಿದ್ದಾರೆ..-

 

ವಿಷ್ಣುಸಹಸ್ರನಾಮವನ್ನು ಪಠಿಸುವುದರಿಂದ ನಾವು ಬ್ರಹತೀಸಹಸ್ರದ 72 ಸಾವಿರ ಅಕ್ಷರಗಳನ್ನು ಜಪಿಸಿದಂತಾಗುತ್ತದೆ. ಇದರಿಂದ ನಮ್ಮ 72 ಸಾವಿರ ನಾಡಿಗಳಲ್ಲಿ ಪೂರ್ಣಪ್ರಮಾಣದ ರಕ್ತ ಸಂಚಾರವಾಗುತ್ತದೆ. ಆದ್ದರಿಂದ ವಿಷ್ಣುಸಹಸ್ರನಾಮ ಭವರೋಗ ಪರಿಹಾರಕ. ಆದರೆ ಅರ್ಥ ತಿಳಿದು ಹೃದಯತುಂಬಿ ಭಕ್ತಿಯಿಂದ ಪಾರಾಯಣ ಮಾಡುವುದು ಮುಖ್ಯ.

ವೇದಗಳಿಗೆ ಕನಿಷ್ಠ 3 ಅರ್ಥಗಳಿವೆ, ಮಹಾಭಾರತ ಶ್ಲೋಕಗಳಿಗೆ ಕನಿಷ್ಠ 10 ಅರ್ಥಗಳಿದ್ದರೆ, ಶ್ರೀ ವಿಷ್ಣು ಸಹಸ್ರನಾಮದ ಪ್ರತೀ ನಾಮಕ್ಕೆ ಕನಿಷ್ಠ ನೂರು ಅರ್ಥಗಳಿವೆ !! ಈ ಕಾರಣಕ್ಕಾಗಿಯೇ ಪ್ರಾಚೀನರು ಭಗವದ್ಗೀತೆ ಮತ್ತು ಶ್ರೀ ವಿಷ್ಣುಸಹಸ್ರನಾಮವನ್ನು ಅತ್ಯಮೂಲ್ಯ ಗ್ರಂಥವಾಗಿ ಪರಿಗಣಿಸಿದ್ದಾರೆ.

ಶರಶಯ್ಯೆಯಲ್ಲಿ ಮಲಗಿದ್ದ ಭೀಷ್ಮರೊಳಗೆ ತಾನಿದ್ದು, ಲೋಕ ಕಲ್ಯಾಣಕ್ಕಾಗಿ ಅವರಿಂದ ವಿಷ್ಣು ಸಹಸ್ರನಾಮ ನುಡಿಸಿದ. ಹೊರಗೆ ಕುಳಿತು ಕೇಳಿದ ಪರಮಾತ್ಮ ನಾಟಕವಾಡಿ, ಸ್ವೀಕರಿಸಿದ ಭೀಷ್ಮ ರನ್ನ ಉದ್ಧರಿಸಿದ, ಪರಮ ಕರುಣಾಳು ಭಗವಂತ.

|

ಫಲಶ್ರುತಿಃ

ವಿಷ್ಣು ಸಹಸ್ರನಾಮ ಪಠಿಸುವುದರ ಮಹತ್ವ ಹಾಗು ಅದರ ಉಪಯೋಗವನ್ನು ಇಲ್ಲಿ ವಿವರಿಸಲಾಗಿದೆ:

ಇತೀದಂ ಕೀರ್ತನೀಯಸ್ಯ ಕೇಶವಸ್ಯ ಮಹಾತ್ಮನಃ |

ನಾಮ್ನಾಂ ಸಹಸ್ರಂ ದಿವ್ಯಾನಾಮಶೇಷೇಣ ಪ್ರಕೀರ್ತಿತಮ್ || ೧ ||

ಜಗತ್ತಿನ ಸೃಷ್ಟಿ-ಸ್ಥಿತಿ-ಸಂಹಾರ -ನಿಯಮನಕ್ಕೆ ಕಾರಣನಾದ ಕೇಶವ ನಾಮಕ ಭಗವಂತನನ್ನು ಅವನ ಕೀರ್ತಿಯನ್ನು ಕೊಂಡಾಡುವ ಶ್ರೇಷ್ಠವಾದ ಸಹಸ್ರ ನಾಮ ವಿಷ್ಣು ಸಹಸ್ರನಾಮ. ಇದೊಂದು ಮಹಾಮಂತ್ರ. ಮಾನವನಿಂದ ಹಿಡಿದು ಚತುರ್ಮುಖನವರೆಗಿನ ಸಮಸ್ತ ಜೀವ ಜಾತಗಳಿಗೂ ಹಿರಿಯ ಶಕ್ತಿಯಾದ ಪರಮಾತ್ಮನ ಹೆಸರಿದು.

ಈ ಎಲ್ಲಾ ಭಗವಂತನ ನಾಮಗಳು ದಿವ್ಯ ನಾಮಗಳು; ಅನಾದಿನಿತ್ಯ, ಅಪ್ರಾಕೃತ(divine)ವಾದ ದಿವ್ಯ ನಾಮಗಳಿವು.ಇದು ಕೇವಲ ಸಾವಿರ ನಾಮವಷ್ಟೇ ಅಲ್ಲ, ಅನಂತನಾದ ಭಗವಂತನನ್ನು ಈ ಸಾವಿರ ನಾಮದಲ್ಲಿ ಚಿಂತನೆ ಮಾಡಬಹುದು. ಸಹಸ್ರ ಎಂದರೆ ಸಹ-ಸರಣ, ಭಗವಂತನ ಜೊತೆಗೆ/ಒಟ್ಟಿಗೆ ಆತನ ಅನಂತಗುಣಗಾನ ಈ ಸಹಸ್ರನಾಮ.

 

ಯ ಇದಂ ಶೃಣುಯಾನ್ನಿತ್ಯಂ ಯಶ್ಚಾಪಿ

ಪರಿಕೀರ್ತಯೇತ್ |

ನಾಶುಭಂ ಪ್ರಾಪ್ನುಯಾತ್ ಕಿಂಚಿತ್ ಸೋಮುತ್ರೇಹ ಚ ಮಾನವಃ || ೨ ||

ಯಾರು ಇದನ್ನು ಕೇಳುತ್ತಾರೋ, ಯಾರು ಇದನ್ನು ಭಕ್ತಿಯಿಂದ ತಿಳಿದು ಪಠಿಸುತ್ತಾರೋ,ಅವರಿಗೆ ಎಂದೂ ಕೂಡಾ ಕೆಡುಕಾಗುವುದಿಲ್ಲ. ವಿಷ್ಣು ಸಹಸ್ರನಾಮವನ್ನು ಯಾರು ಬೇಕಾದರೂ ಪಠಿಸಬಹುದು. ಇದಕ್ಕೆ ಇಂತಹ ನಿರ್ಬಂಧವಿಲ್ಲ. ಇದಕ್ಕೆ ಬೇಕಾಗಿರುವುದು ಕೇವಲ ಭಕ್ತಿಮಾತ್ರ. ದೇವರ ನಾಮ ಇರುವುದೇ ನಮಗೆ. ನಮ್ಮ ಬದುಕಿನಲ್ಲಿ ಧೈರ್ಯ-ಆತ್ಮ ವಿಶ್ವಾಸ ತುಂಬಲು, ಭಯ ಪರಿಹರಿಸಲು. ಯಾರು ದೇವರನ್ನು ನಂಬುತ್ತಾನೋ ಅವನು ಎಂದೂ ಯಾವುದಕ್ಕೂ ಭಯಪಡಬೇಕಾಗಿಲ್ಲ. ಜಾತಿ-ಲಿಂಗ ಭೇದವಿಲ್ಲದೆ ಎಲ್ಲರೂ ಪಠಿಸಬಹುದಾದ ಸಹಸ್ರನಾಮ ವಿಷ್ಣುಸಹಸ್ರನಾಮ.

ಯಾರು ಇದನ್ನು ಆಲಿಸುತ್ತಾರೆ ಮತ್ತು ಯಾರು ಇದನ್ನು ಪಠಿಸುತ್ತಾರೆ ಆ ಮಾನವನು ಇಹ-ಪರದಲ್ಲಿ ಕೆಡುಕನ್ನು ಹೊಂದಲಾರ. ನಾಮದ ಅರ್ಥವನ್ನು ತಿಳಿದು ಪಾರಾಯಣ ಮಾಡುವುದು ಮುಖ್ಯ.

ವೇದಾಂತಗೋ ಬ್ರಾಹ್ಮಣಃ ಸ್ಯಾತ್ ಕ್ಷತ್ರಿಯೋ ವಿಜಯೀ ಭವೇತ್ |

ವೈಶ್ಯೋ ಧನಸಮೃದ್ಧಃ ಸ್ಯಾತ್ ಶೂದ್ರಸ್ಸುಖಮವಾಪ್ನುಯಾತ್ || ೩ ||

ವಿಷ್ಣು ಸಹಸ್ರನಾಮವನ್ನು ಎಲ್ಲಾ ವರ್ಣದವರೂ ಪಠಿಸಬಹುದು. ಇಲ್ಲಿ ವರ್ಣ ಎಂದರೆ ಜಾತಿ ಅಲ್ಲ. ಹಿಂದೆ ಹೇಳಿದಂತೆ ಮಾನವನ ಸ್ವಭಾವಕ್ಕೆ ಅನುಗುಣವಾಗಿ ಪ್ರಾಚೀನರು ನಾಲ್ಕು ವರ್ಣವನ್ನು ಗುರುತಿಸಿದರು. ಜ್ಞಾನಾರ್ಜನೆ, ಅಧ್ಯಯನ ಮತ್ತು ಚಿಂತನೆಯಲ್ಲಿ ಆಸಕ್ತಿ ಉಳ್ಳವ ಬ್ರಾಹ್ಮಣ(ಬೃಹತ್ ಆದುದ್ದನ್ನು ಅನ್ವೇಷಣೆ ಮಾಡುವವ-Intelligence); ಇನ್ನೊಬ್ಬರು ತೊಂದರೆಯಲ್ಲಿದ್ದಾಗ ರಕ್ಷಣೆ(Protection) ಮಾಡುವವ ಕ್ಷತ್ರಿಯ. ಆತನಲ್ಲಿ ಆಡಳಿತ(Administration) ಗುಣವಿರುತ್ತದೆ. ವೈಶ್ಯ ಹೊಟ್ಟೆಗೆ ಬೇಕಾದುದ್ದನ್ನು ಕೊಡುವ ವ್ಯಾಪಾರ ಮನೋವೃತ್ತಿ ಇರುವವರು(Production). ಆಹಾರ ಉತ್ಪತ್ತಿ, ಗೋವುಗಳನ್ನು ಸಾಕಿ ಹಾಲು ಮಾರುವುದು ಇತ್ಯಾದಿ. ಶೂದ್ರ ಅಂದರೆ ಇನ್ನೊಬ್ಬರ ಕಷ್ಟಕ್ಕೆ ಕರಗುವವ (Service). ಯಾರು ಶೂದ್ರನಲ್ಲವೋ ಅವನು ಮನುಷ್ಯನೇ ಅಲ್ಲ. ಈ ವರ್ಣ ಪದ್ಧತಿ ಪ್ರಪಂಚದ ಎಲ್ಲಾ ಭಾಗದಲ್ಲೂ ಇದೆ. ಬ್ರಾಹ್ಮಣನ ಮಗ ಕ್ಷತ್ರಿಯನಾಗಬಹುದು, ಇಲ್ಲಿ ಜೀವ ಸ್ವಭಾವ ಮುಖ್ಯ. ತಂದೆ-ತಾಯಿ ಜಾತಿ ಅಲ್ಲ! ಯಾರೂ ಏಕವರ್ಣದವನಲ್ಲ. ಎಲ್ಲರಲ್ಲೂ ಎಲ್ಲ ಸ್ವಭಾವವಿರುತ್ತದೆ. ಯಾವ ಸ್ವಭಾವ ನಮ್ಮಲ್ಲಿ ಹೆಚ್ಚಗಿದೆಯೋ ನಾವು ಆ ವರ್ಣಕ್ಕೆ ಸೇರುತ್ತೇವೆ.ಸ್ವಭಾವ ನೈಸರ್ಗಿಕ.

ವಿಷ್ಣು ಸಹಸ್ರನಾಮ ಕೇಳುವುದರಿಂದ, ಪಠಿಸುವುದರಿಂದ ಬ್ರಾಹ್ಮಣನ ಜ್ಞಾನ ವೃದ್ಧಿಯಾಗುತ್ತದೆ, ವೈಶ್ಯನ ವ್ಯಾಪಾರ ಹೆಚ್ಚುತ್ತದೆ, ಕ್ಷತ್ರಿಯನ ಶತ್ರು ನಿಗ್ರಹಕ್ಕೆ ಬೇಕಾದ ಬಲವೃದ್ಧಿಯಾಗುತ್ತದೆ. ಶೂದ್ರ ಸುಖವಾಗಿ ಬದುಕುತ್ತಾನೆ.

ಹೀಗೆ ದೇವರ ನಾಮ ಪಠಿಸಲು ಯಾವ ವರ್ಣ ಭೇದವಿಲ್ಲ.

 

ಬ್ರಾಹ್ಮಣ( ಶಮಃ ದಮಃ ತಪಃ ಶೌಚಂ ಕ್ಷಾಂತಿ ಆರ್ಜವಮ್ ಏವ ಚ । ಜ್ಞಾನಂ ವಿಜ್ಞಾನಮ್ ಆಸ್ತಿಕ್ಯಂ ಬ್ರಹ್ಮಕರ್ಮ ಸ್ವಭಾವಜಮ್.

ಭಗವಂತನಲ್ಲಿ ನಿಷ್ಠೆ, ಇಂದ್ರಿಯಗಳಲ್ಲಿ ಹಿಡಿತ, ಉಪವಾಸಾದಿ ನೇಮಗಳು, ನೈರ್ಮಲ್ಯ,

ಅಪಕಾರಿಯನ್ನೂ ಮನ್ನಿಸುವ ಸೈರಣೆ, ನೇರ ನಡೆ-ನುಡಿ, ತಿಳಿವು, ಆಳವಾದ ಸಂಶೋಧನಾ ದೃಷ್ಟಿ ಮತ್ತು ಆಸನ ಇಂತಹ ಅನೇಕ ಗುಣ ಇದ್ದು ವೇದಗಳ ನಿರ್ಣಯ ಮಾಡುವವ) ಜ್ಞಾನವನ್ನು ಪಡೆದಾನು.

 

 

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

 

ಕ್ಷತ್ರಿಯನು ಗೆಲುವನ್ನು ಪಡೆದಾನು; ವೈಶ್ಯನು ತುಂಬು ಸಿರಿವಂತನಾದಾನು; ಶೂದ್ರನು ಸುಖವನ್ನು ಪಡೆದಾನು.

ಧರ್ಮಾರ್ಥೀ ಪ್ರಾಪ್ನುಯಾದ್ಧರ್ಮಂ ಅರ್ಥಾರ್ಥೀ ಚಾರ್ಥಮಾಪ್ನುಯಾತ್ |

ಕಾಮಾನವಾಪ್ನುಯಾತ್ ಕಾಮೀ ಪ್ರಜಾರ್ಥೀ ಚಾಪ್ನುಯಾತ್ ಪ್ರಜಾಮ್ || ೪ ||

ಮನುಷ್ಯ ಪಡೆಯಲಿಕ್ಕೆ ಬಯಸುವುದು ಧರ್ಮ, ಅರ್ಥ, ಕಾಮ, ಮೋಕ್ಷ ಈ ನಾಲ್ಕನ್ನು. ಇದರಲ್ಲಿ ಕಾಮ ಮತ್ತು ಅರ್ಥ ಲೌಕಿಕವಾದದ್ದು. ಸಾಮಾನ್ಯವಾಗಿ ಧಾರ್ಮಿಕ ಪ್ರವೃತ್ತಿಯುಳ್ಳ(Elevated Souls)ವರು ಲೌಕಿಕವಾದದ್ದನ್ನು ಬಯಸದೇ ದೇವರನ್ನು ತಿಳಿಯುವ ಧರ್ಮ ಹಾಗು ಅದರಾಚೆಗಿನ ಮೋಕ್ಷವನ್ನು ಸುಖವೆಂದು ತಿಳಿದಿರುತ್ತಾರೆ. ಬಯಕೆಗಳೇ ಇಲ್ಲದಿರುವುದು ನಿಜವಾದ ಸುಖ.

ವಿಷ್ಣು ಸಹಸ್ರನಾಮ ಪಠಿಸುವುದು ಅಂದರೆ ಪ್ರತಿ ನಾಮದ ಉಚ್ಛಾರ ಹಾಗು ಅದರ ಹಿಂದಿನ ಅರ್ಥ ಸ್ಮರಣೆ.ಒಂದು ನಾಮ ಸ್ಮರಣೆ ಮಾಡಿದರೂ ಸಾಕು ನಮ್ಮ ಬದುಕು ಪಾವನವಾಗುತ್ತದೆ, ಧರ್ಮಮಯವಾಗುತ್ತದೆ . ಒಂದು ವೇಳೆ ನಮಗೆ ಅತೀ ಕಷ್ಟವಿದ್ದು ದುಡ್ಡಿನ ಅಗತ್ಯ ಇದ್ದಲ್ಲಿ ವಿಷ್ಣು ಸಹಸ್ರನಾಮವನ್ನು ಯಾವುದೇ ಲೋಭವಿಲ್ಲದೆ ನಿರ್ಮಲ ಮನಸ್ಸಿನಿಂದ ಭಕ್ತಿ ಪೂರ್ವಕವಾಗಿ ಚಿಂತನೆ ಮಾಡಿದರೆ ಖಂಡಿತ ನಾವು ಆ ಚಿಂತೆಯಿಂದ ಪಾರಾಗುತ್ತೇವೆ. ಆದರೂ ನಾವು ಏನನ್ನೂ ಬಯಸದೇ ದೇವರ ಸ್ಮರಣೆ ಮಾಡುವುದು ಅತೀ ಶ್ರೇಷ್ಠ. ಬಯಕೆಗಳಿಲ್ಲದೆ ಸ್ಮರಿಸಿದರೆ ನಾವು ಮಹಾಫಲವನ್ನು ಪಡೆಯುತ್ತೇವೆ; ಅರಿವನ್ನು ಪಡೆದು ಮೋಕ್ಷವನ್ನು ಪಡೆಯುತ್ತೇವೆ.

ಧರ್ಮ ಬೇಕೆನ್ನುವವನು ಪಡೆದಾನು ಧರ್ಮವನ್ನು;ಅರ್ಥ ಬೇಕೆನ್ನುವವನು ಪಡೆದಾನು ಅರ್ಥವನ್ನು. ಕಾಮಗಳನ್ನು ಪಡೆದಾನು-ಕಾಮ ಬೇಕೆನುವವನು. ಪ್ರಜ್ಞೆ ಬೇಕೆನುವವನು ಪಡೆದಾನು ಪ್ರಜ್ಞೆಯನ್ನು ಪಡೆಯುತ್ತಾನೆ.

 

ಮುಂದುವರಿಯುವುದು….

ಸಂಗ್ರಹ ಪ್ರಶಾಂತ ಭಟ್

ಆಧ್ಯಾತ್ಮ ಬಂಧುಗಳೇ…

ಮನೆ, ಮಠ,ಮಂದಿರಗಳಲ್ಲಿ ದೈವಿಕ ಕಾರ್ಯಗಳಲ್ಲಿ ರಾಮಾಯಣ,ಮಹಾಭಾರತ ಭಾಗವತ ಪುರಾಣ,ಗರುಡ ಪುರಾಣ ಮೊದಲಾದ ಅಷ್ಟಾದಶ ಪುರಾಣಗಳ ಪಾರಾಯಣ ಮತ್ತು ಪ್ರವಚನ

ಜಪ ತಪ ಹೋಮ ಅನುಷ್ಠಾನ ಗಳನ್ನು……

ವಿವಾಹಕ್ಕೆ ಸಂಬಂಧಪಟ್ಟ ಮೇಳಾ ಮೇಳಿ

ಮುಹೂರ್ತ ನಿರ್ಣಯ ಮೊದಲಾದ

ಜಾತಕ ವಿಮರ್ಶೆ ….ಪ್ರಶ್ನೆ ಚಿಂತನೆಯನ್ನು

ಯೋಗ್ಯತಾನುಸಾರ ಸರಳ ಮತ್ತು ಶ್ರದ್ಧೆಯಿಂದ ನಡೆಸಿಕೊಡಲಾಗುತ್ತದೆ

ಆಸಕ್ತ ಭಗವದ್ಭಕ್ತರು ಸಂಪರ್ಕಿಸಬಹುದು.

8548998564

ShareTweetSendShare
Join us on:

Related Posts

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 10, 2026
0

ದಿನ ಭವಿಷ್ಯ: 10-02-2026 ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ಸಿಗಲಿದೆ. ವ್ಯಾಪಾರಸ್ಥರಿಗೆ ಹಳೆಯ ಹೂಡಿಕೆಗಳಿಂದ...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 9, 2026
0

ದಿನ ಭವಿಷ್ಯ: 09-02-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ದಿನವು ಉತ್ಸಾಹದಾಯಕವಾಗಿರಲಿದೆ. ಉದ್ಯೋಗದಲ್ಲಿ ನೀವು ಅಂದುಕೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳಲಿವೆ. ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯುವ...

ಇದು ‘ಗಾಯತ್ರಿ ಮಂತ್ರ’ದ ಮಹತ್ವ: ಪಠಿಸಿ ನೋಡಿ, ಎಲ್ಲಾ ಕಷ್ಟಗಳು ನಿವಾರಣೆ ಗ್ಯಾರಂಟಿ

ಇದು ‘ಗಾಯತ್ರಿ ಮಂತ್ರ’ದ ಮಹತ್ವ: ಪಠಿಸಿ ನೋಡಿ, ಎಲ್ಲಾ ಕಷ್ಟಗಳು ನಿವಾರಣೆ ಗ್ಯಾರಂಟಿ

by admin
February 8, 2026
0

ಇದು ‘ಗಾಯತ್ರಿ ಮಂತ್ರ’ದ ಮಹತ್ವ: ಪಠಿಸಿ ನೋಡಿ, ಎಲ್ಲಾ ಕಷ್ಟಗಳು ನಿವಾರಣೆ ಗ್ಯಾರಂಟಿ   *#ಗಾಯತ್ರೀ_ಮಂತ್ರದ_ಮಹತ್ವ*   ಮಕ್ಕಳಿಗೆ ಬ್ರಹ್ಮೋಪದೇಶದಲ್ಲಿ ತಂದೆ ಗುರಸ್ಥಾನದಲ್ಲಿ ಗಾಯತ್ರೀ ಮಂತ್ರೋಪದೇಶವನ್ನು ಮಾಡುತ್ತಾರೆ....

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (08-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 8, 2026
0

ದಿನ ಭವಿಷ್ಯ: 08-02-2026 ಮೇಷ ರಾಶಿ ಇಂದು ನಿಮಗೆ ಉತ್ಸಾಹದಾಯಕ ದಿನವಾಗಿದೆ. ರವಿ ಗ್ರಹದ ಅನುಗ್ರಹದಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಸರ್ಕಾರಿ ಕೆಲಸಗಳಲ್ಲಿ ಅಥವಾ ಮೇಲಧಿಕಾರಿಗಳೊಂದಿಗೆ ನಡೆಸುವ...

ರೋಗಗಳು ದೂರವಾಗಿ ಆರೋಗ್ಯ ವೃದ್ಧಿಸುವ ಮಂತ್ರ

ರೋಗಗಳು ದೂರವಾಗಿ ಆರೋಗ್ಯ ವೃದ್ಧಿಸುವ ಮಂತ್ರ

by admin
February 7, 2026
0

ರೋಗಗಳು ದೂರವಾಗಿ ಆರೋಗ್ಯ ವೃದ್ಧಿಸುವ ಮಂತ್ರ   ಆಂಜನೇಯನ ಈ ಮಂತ್ರವನ್ನು 11 ಬಾರಿ ಜಪಿಸುವವರು ಮತ್ತು ಅವರ ಕುಟುಂಬ ಸದಸ್ಯರು ರೋಗಗಳಿಂದ ಸಂಪೂರ್ಣವಾಗಿ ಗುಣಮುಖರಾಗುತ್ತಾರೆ, ರೋಗಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram