ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮ್ಮ ರಾಜಕೀಯ ಭವಿಷ್ಯ ಕುರಿತು ಸ್ಪಷ್ಟ ಸಂದೇಶ ನೀಡಿದ್ದಾರೆ.
ನಾನು ರಾಜ್ಯ ರಾಜಕಾರಣಕ್ಕೆ ಬರುವ ಚಿಂತನೆ ಇಲ್ಲ. ನನ್ನ ಪಕ್ಷ ಏನು ಹೇಳುತ್ತದೋ ಅದನ್ನೇ ಮಾಡುತ್ತೇನೆ, ಎಂದು ಅವರು ಹೇಳಿದ್ದಾರೆ. ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಿಗಿಂತ ದೇಶ ದೊಡ್ಡದು ಎಂಬ ನಿಲುವು ತಮ್ಮದು ಎಂದು ತಿಳಿಸಿದ್ದಾರೆ.
ತಾವು ಪಕ್ಷದ ಶಿಸ್ತಿನ ಸಿಪಾಯಿ ಎಂದು ಹೇಳಿದ ಅವರು, ಹೈಕಮಾಂಡ್ ನೀಡುವ ಸೂಚನೆಗಳನ್ನು ಪಾಲಿಸುತ್ತೇನೆ ಎಂದು ಹೇಳಿದ್ದಾರೆ. ವೈಯಕ್ತಿಕ ಆಸೆಗಿಂತ ಪಕ್ಷದ ಹಿತ ಮತ್ತು ದೇಶದ ಹಿತವೇ ಮುಖ್ಯ ಎಂದು ವಿ. ಸೋಮಣ್ಣ ಒತ್ತಿ ಹೇಳಿದ್ದಾರೆ.
ಈ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಊಹಾಪೋಹಗಳಿಗೆ ತೆರೆ ಬೀಳುವ ಸಾಧ್ಯತೆ ಇದ್ದರೂ, ರಾಜಕೀಯ ವಲಯದಲ್ಲಿ ಚರ್ಚೆ ಮುಂದುವರಿಯುವ ಸಾಧ್ಯತೆಯಿದೆ.








