ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನೊಂದವರ ಪಾಲಿನ ಆಶಾಕಿರಣ ರೂಪಾ ಶೇಖರ್- ಎಸ್ಥೆಟೆಕ್ ಅಟ್ಯಾಕರ್ಸ್ ತಂಡದ ಒಡತಿ..!

admin by admin
February 18, 2026
in Newsbeat, Sports, ಕ್ರೀಡೆ
roopashekhar aesthetic attackers team owner

roopashekhar aesthetic attackers team owner

Share on FacebookShare on TwitterShare on WhatsappShare on Telegram

ರೂಪಾ ಶೇಖರ್
ಉದ್ಯಮಿ, ಯುವ ರಾಜಕಾರಣಿ
ಎಸ್ಥೆಟೆಕ್ ಅಟ್ಯಾಕರ್ಸ್ ಫ್ರಾಂಚೈಸಿಯ ಒಡತಿ

cmcup2026-aesthetic attackersteam
cmcup2026-aesthetic attackersteam

ರಾಜಕಾರಣ, ರಾಜಕಾರಣಿಗಳು ಅಂದ್ರೆ ಮೂಗು ಮುರಿಯುವ ಈಗಿನ ಕಾಲಘಟ್ಟದಲ್ಲಿ ರಾಜಕಾರಣ ಎಂಬುದು ಕೇವಲ ಅಧಿಕಾರದ ಛಾಯೆಯಲ್ಲಿಯೇ ಇರುವ ವೃತ್ತಿಯಲ್ಲ, ಬದಲಿಗೆ ಸಮಾಜ ಸೇವೆಗೆ ಒಂದು ಮಾರ್ಗ ಎಂಬುದನ್ನು ತೋರಿಸಿಕೊಟ್ಟವರು ರೂಪಾ ಶೇಖರ್.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

ರಾಜಕೀಯ, ಜನಸೇವೆ ಅನ್ನೋದು ರೂಪಾ ಶೇಖರ್‍ಗೆ ರಕ್ತಗತವಾಗಿ ಬಂದಿರುವ ಬಳುವಳಿ. ಮೈಸೂರು ಜಿಲ್ಲಾ ಪಂಚಾಯಿತಿ ಸದಸ್ಯೆಯಾಗಿ ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿರುವ ತಾಯಿ ಜಯಶೀಲಾ ಹಾಗೂ ಸ್ಥಳೀಯ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ, ಉಡಿಗಾಲ ಗ್ರಾಮ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದವರು ತಂದೆ ಯು.ಎಸ್. ರಾಜಶೇಖರ್. ಹೀಗೆ ರಾಜಕಾರಣದ ಕುಟುಂಬದಿಂದ ಬಂದಿರುವ ರೂಪಾಶೇಖರ್, ತಾನೂ ಕೂಡ ಸಮಾಜಮುಖಿ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ತಂದೆ-ತಾಯಿಯ ಅನುಭವವನ್ನು ಮುಂದಿಟ್ಟುಕೊಂಡು ಚಾಮರಾಜನಗರ ಜಿಲ್ಲೆಯಲ್ಲಿ ತಮ್ಮದೇ ರೀತಿಯ ಸೇವೆ ಸಲ್ಲಿಸುತ್ತಿದ್ದಾರೆ.

ಭಾರತೀಯ ಕಿಸಾನ್ ಸಂಘದ ಮಹಿಳಾ ಪ್ರಮುಖ್ ಹುದ್ದೆಯಲ್ಲಿರುವ ರೂಪಾಶೇಖರ್, ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸಿ ಗಮನ ಸೆಳೆದಿದ್ದಾರೆ. ಅದರಲ್ಲೂ ಚಾಮರಾಜನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರಿಗೆ ಅನುಕೂಲವಾಗುವಂತಹ ಹೋರಾಟ, ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನ್ನದಾತರ ನೋವಿಗೆ ಧ್ವನಿ ಮತ್ತು ಪರಿಹಾರವಾಗಿ ಕೆಲಸ ಮಾಡಿದ್ದಾರೆ.

ಇಡೀ ವಿಶ್ವವೇ ತಲ್ಲಣಿಸುವಂತೆ ಮಾಡಿದ್ದ ಕೋವಿಡ್ 19 ಸೋಂಕಿನ ದಾಳಿಯ ಸಮಯದಲ್ಲಿ ಚಾಮರಾಜನಗರದ ಜನತೆಯ ಸೇವೆಗೆ ನಿಂತಿದ್ದವರು ರೂಪಾಶೇಖರ್. ಕೋವಿಡ್ – 19 ಸಂದರ್ಭದಲ್ಲಿ ತಮ್ಮ ಸುರಕ್ಷತೆಯನ್ನೂ ಲೆಕ್ಕಿಸದೆ ಹಸಿದವರಿಗೆ ಆಹಾರ, ಸೋಂಕಿನಿಂದ ರಕ್ಷಿಸಿಕೊಳ್ಳಲು ಅಗತ್ಯ ವೈದ್ಯಕೀಯ ಪರಿಕರಗಳನ್ನು ಸರಬರಾಜು ಮಾಡಿದ್ದರು. ಚಾಮರಾಜನಗರ ಸರ್ಕಾರಿ ಆಸ್ಪತ್ರೆ, ಮನೆಗಳಿಗೆ ಮಾಸ್ಕ್, ಸ್ಯಾನಿಟಟೈಸರ್ ಸೇರಿದಂತೆ ಮಹಾಮಾರಿ ಸೋಂಕಿನಿಂದ ರಕ್ಷಿಸಿಕೊಳ್ಳಲು ಬೇಕಾಗುವ ಸಾಮಗ್ರಿಗಳನ್ನು ಪೂರೈಸಿದ್ದರು.

ಇನ್ನು, ನಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡರೆ ನಾವು ಆರೋಗ್ಯವಾಗಿರುತ್ತೇವೆ ಎಂಬ ಧ್ಯೇಯ ರೂಪಾಶೇಖರ್ ಅವರದ್ದು. ಅದಕ್ಕಾಗಿ ಕೇಂದ್ರ ಸರ್ಕಾರದ ಸ್ವಚ್ಛ ಭಾರತ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದು, ಚಾಮರಾಜನಗರದಲ್ಲಿ ಸ್ವಚ್ಛತೆ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡುತ್ತಿದ್ದಾರೆ.

ಇವುಗಳ ಜತೆಗೆ ಲಯನ್ಸ್ ಕ್ಲಬ್ ಸದಸ್ಯೆಯಾಗಿರುವ ರೂಪಾಶೇಖರ್, ನೊಂದವರ ಬದುಕಿಗೆ ಆಸರೆಯಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ಬೇಕಾಗಿರುವ ಅಗತ್ಯತೆಗಳನ್ನು ಪೂರೈಸುತ್ತಿದ್ದಾರೆ. ಚಾಮರಾಜನಗರದ ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್, ಶ್ಯೂ, ಪುಸ್ತಕಗಳನ್ನು ವಿತರಿಸಿ ಅವರ ಶಿಕ್ಷಣಕ್ಕೆ ನೆರವಾಗುತ್ತಿದ್ದಾರೆ. ಅದರೊಂದಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಸಮಿತಿ ಸದಸ್ಯೆಯಾಗಿಯೂ ಕೆಲಸ ಮಾಡುತ್ತಿದ್ದು, ವೀರಶೈವ ಲಿಂಗಾಯತ ಸಮುದಾಯದ ಏಳಿಗೆಗೆ ಅವಿರತ ಶ್ರಮಿಸುತ್ತಿದ್ದಾರೆ.

ರಾಜಕಾರಣಿಯಾಗಿಯಷ್ಟೇ ಅಲ್ಲದೆ ಯಶಸ್ವಿ ಮಹಿಳಾ ಉದ್ಯಮಿಯಾಗಿಯೂ ರೂಪಾಶೇಖರ್ ಗುರುತಿಸಿಕೊಂಡಿದ್ದಾರೆ. ಆರ್.ಆರ್ ಇಂಡಸ್ಟ್ರೀಸ್ ಮೂಲಕ ಚಾಮರಾಜನಗರ, ಮೈಸೂರು ಭಾಗದ ನೂರಾರು ಜನರಿಗೆ ಉದ್ಯೋಗಾವಕಾಶ ಕಲ್ಪಿಸಿದ್ದಾರೆ. ಕೈಗಾರಿಕಾ ಕ್ಷೇತ್ರದಲ್ಲಿ ಇವರ ಕಾರ್ಯ ಗುರುತಿಸಿ ಹಲವು ಪ್ರಶಸ್ತಿಗಳು ಲಭಿಸಿವೆ.
ಸಮಾಜದ ಏಳಿಗೆಯಲ್ಲಿ, ಸಮಸ್ಯೆಗಳ ನಿವಾರಣೆಯಲ್ಲಿ ತಮ್ಮದೇ ಆದ ರೀತಿಯ ಕೊಡುಗೆ ನೀಡುತ್ತಿರುವ ಉದ್ಯಮಿ, ಯುವ ರಾಜಕಾರಣಿ ರೂಪಾಶೇಖರ್ ಅವರು ಸಿಎಂ ಕಪ್ ಬ್ಯಾಡ್ಮಿಂಟನ್ ಭಾಗವಾಗಿರುವ ನಮ್ಮೆಲ್ಲರಿಗೂ ಹೆಮ್ಮೆಯಾಗಿದೆ. ರೂಪಾ ಶೇಖರ್ ಅವರು ಎಸ್ಥೆಟೆಕ್ ಅಟ್ಯಾಕರ್ಸ್ ತಂಡದ ಒಡತಿಯಾಗಿದ್ದಾರೆ.

Tags: #aestheticattackers#cmcup2026#roopashekhar#saakshatvbengaluruckarnatakamcupbadminton2025
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram