ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

1992ರಲ್ಲಿ ತಂಡದಿಂದ ಕೈಬಿಟ್ಟಿರುವುದರಿಂದ ಗಂಗೂಲಿ ಈ ಮಟ್ಟಕ್ಕೆ ಬೆಳೆಯಲು ಕಾರಣವಾಯ್ತು – ಅರುಣ್ ಲಾಲ್

admin by admin
July 17, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

1992ರಲ್ಲಿ ತಂಡದಿಂದ ಕೈಬಿಟ್ಟಿರುವುದರಿಂದ ಗಂಗೂಲಿ ಈ ಮಟ್ಟಕ್ಕೆ ಬೆಳೆಯಲು ಕಾರಣವಾಯ್ತು – ಅರುಣ್ ಲಾಲ್

ಸೌರವ್ ಗಂಗೂಲಿ.. ಈ ಹೆಸರು ಹೇಳಿದಾಗ ಪ್ರತಿಯೊಬ್ಬರು ಹೇಳುವುದು ಒಂದೇ ಮಾತು… ಆತ ಅಪ್ರತಿಮ ನಾಯಕ. ನಾಯಕ ಅಂದ್ರೆ ಗಂಗೂಲಿ.. ಗಂಗೂಲಿ ಅಂದ್ರೆ ನಾಯಕ.. ಇದಕ್ಕೆ ಕಾರಣವೂ ಇದೆ. ಗಂಗೂಲಿ ನಾಯಕನಾಗಿ ಟೀಮ್ ಇಂಡಿಯಾಗೆ ಹೊಸ ಸ್ವರೂಪವನ್ನು ನೀಡಿದ್ದರು. ತಂಡದಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸಿದ್ರು. ಆಕ್ರಮಣಕಾರಿ ಪ್ರವೃತ್ತಿಯನ್ನು ರೂಢಿಸಿಕೊಳ್ಳುವಂತೆ ಮಾಡಿದ್ದರು. ಯುವ ಆಟಗಾರರಿಗೆ ಅವಕಾಶವ ಕೊಟ್ಟು ಬಲಿಷ್ಠ ತಂಡವನ್ನೂ ಕಟ್ಟಿದ್ದರು.
ಆದ್ರೆ ಗಂಗೂಲಿಯ ನಾಯಕತ್ವದ ಮುಂದೆ ಅವರ ಪ್ರತಿಭೆ ಮಾತ್ರ ಮಂಕಾಗಿ ಹೋಯ್ತು. ಅವರು ಎಷ್ಟೇ ರನ್ ದಾಖಲಿಸಿದ್ರೂ ಅವರನ್ನು ಬೊಟ್ಟು ಮಾಡಿ ತೋರಿಸುವಂತೆ ಮಾಡಿದ್ದು ಮಾತ್ರ ಅವರ ನಾಯಕತ್ವ. ಹೀಗಾಗಿ ಗಂಗೂಲಿಯ ಪ್ರತಿಭೆಯನ್ನು ಮರೆತು ಹೋಗುವಂತೆ ಮಾಡಿತ್ತು. ಹೀಗೆ ಗಂಗೂಲಿಯ ಪ್ರತಿಭೆಯ ಬಗ್ಗೆ ಮಾತನಾಡಿದ್ದು ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಅರುಣ್ ಲಾಲ್.
ಅರುಣ್ ಲಾಲ್ ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ. ಸದ್ಯ ವೀಕ್ಷಣೆ ವಿವರಣೆಕಾರರಾಗಿದ್ದಾರೆ. ಅರುಣ್ ಲಾಲ್ ಅವರು ಗಂಗೂಲಿಯವರನ್ನು ಬಹಳ ಹತ್ತಿರದಿಂದ ನೋಡಿದ್ದಾರೆ. ಅವರ ಏಳು ಬೀಳುಗಳನ್ನು ಕಣ್ಣಾರೆ ನೋಡಿದ್ದಾರೆ. ನಾಯಕತ್ವದಲ್ಲಿ ಗಂಗೂಲಿ ಉತ್ತುಂಗಕ್ಕೇರಿದ್ರೂ ಅವರಲ್ಲಿನ ಪ್ರತಿಭೆಯನ್ನೂ ಅರುಣ್ ಲಾಲ್ ನೆನಪು ಮಾಡಿಕೊಂಡಿದ್ದಾರೆ.
ನಾನು ಯಾವಾಗಲೂ ಸೌರವ್ ಗಂಗೂಲಿಯವರ ಅಪ್ಪಟ ಅಭಿಮಾನಿ. ಸಚಿನ್ ಮತ್ತು ಸೌರವ್ ಗಂಗೂಲಿ ವಿಶೇಷ ಆಟಗಾರರು. ನನಗೆ ಇನ್ನೂ ನೆನಪಿದೆ. ಬಹುಶಃ ಗಂಗೂಲಿಗೆ ಆಗ 16-17 ವಯಸ್ಸಿರಬೇಕು. ಕೊಲ್ಕತ್ತಾದ ಸಿಸಿಎಫ್‍ಸಿನಲ್ಲಿ ಪ್ರದರ್ಶನ ಪಂದ್ಯವೊಂದು ನಡೆದಿತ್ತು. ಆ ಪಂದ್ಯದಲ್ಲಿ ಗಂಗೂಲಿ ಕೂಡ ಆಡಿದ್ದರು. ಗಂಗೂಲಿ ಆ ಪಂದ್ಯದಲ್ಲಿ ಲೀಲಾಜಾಲವಾಗಿ ಆರೇಳು ಸಿಕ್ಸರ್‍ಗಳನ್ನು ಸಿಡಿಸಿದ್ದರು. ಗಂಗೂಲಿಯವರಲ್ಲಿ ಅದ್ಭುತ ಕ್ರಿಕೆಟ್ ಪ್ರತಿಭೆ ಇತ್ತು. ಗಂಗೂಲಿ ಮತ್ತು ಸಚಿನ್ ಕ್ರಿಕೆಟ್‍ಗಾಗಿಯೇ ಹುಟ್ಟಿದವರು ಎಂದು ಅರುಣ್ ಲಾಲ್ ಬಣ್ಣಿಸಿದ್ರು.
ಗಂಗೂಲಿ ಏನೇ ಆಗಿರಲಿ.. ಆದ್ರೆ ಆತ ಡಿಫರೆಂಟ್ ಪ್ಲೇಯರ್. 1992ರಲ್ಲಿ ಗಂಗೂಲಿ ಭಾರತ ಏಕದಿನ ತಂಡಕ್ಕೆ ಆಯ್ಕೆಯಾಗಿದ್ರು. ನಂತರ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ನಾಲ್ಕು ವರ್ಷಗಳ ಬಳಿಕ ಮತ್ತೆ ತಂಡವನ್ನು ಸೇರಿಕೊಂಡ್ರು. ಲಾಡ್ರ್ಸ್ ಅಂಗಣದಲ್ಲಿ ತನ್ನ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಗಂಗೂಲಿ ಶತಕ ಸಿಡಿಸಿದ್ರು. ನಂತರ ಹಿಂತಿರುಗಿ ನೋಡಲೇ ಇಲ್ಲ. ನಾಲ್ಕು ವರ್ಷಗಳ ಅಂತರದಲ್ಲಿ ಟೀಮ್ ಇಂಡಿಯಾದ ನಾಯಕನಾದ್ರು. ಐದು ವರ್ಷಗಳ ಕಾಲ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದರು. ಈ ಹಂತದಲ್ಲೇ ಟೀಮ್ ಇಂಡಿಯಾ ವಿಶ್ವಕ್ರಿಕೆಟ್‍ನಲ್ಲಿ ಪ್ರಜ್ವಲಿಸಿತ್ತು. ಇದು ಈಗ ಇತಿಹಾಸ.
ಅಂದು ತಂಡದಿಂದ ಕೈ ಬಿಡದಿದ್ರೆ ಗಂಗೂಲಿ ಇವತ್ತು ಈ ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ. ಟೀಮ್ ಇಂಡಿಯಾ ಆಟಗಾರನಾಗಿ, ನಾಯಕನಾಗಿ ಈಗ ಬಿಸಿಸಿಐ ಅಧ್ಯಕ್ಷನಾಗಿದ್ದಾರೆ. ತಂಡದಿಂದ ಕೈಬಿಟ್ಟ ಸಮಯದಲ್ಲಿ ಗಂಗೂಲಿಗೆ ಪ್ರಬುದ್ಧರಾಗಲು ಅವಕಾಶ ಸಿಕ್ಕಿತ್ತು. ತನ್ನನ್ನು ತಾನು ಅರ್ಥ ಮಾಡಿಕೊಳ್ಳಲು ಸಾಧ್ಯವಾಯ್ತು. ಅವರಿಗೆ ಕಮ್ ಬ್ಯಾಕ್ ಒಳ್ಳೆಯ ವೇದಿಕೆಯೂ ಸಿಕ್ಕಿತ್ತು ಎಂದು ಅರುಣ್ ಲಾಲ್ ಹೇಳಿದ್ದಾರೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026
Tags: Arun LalbccidadaICCIndian cricketIPLlordsSourav Gangulyteam india
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram