ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿರುವುದನ್ನು ಅಮೆರಿಕದ ಅಧ್ಯಕ್ಷ ಟ್ರಂಪ್ ತೀವ್ರವಾಗಿ ಖಂಡಿಸಿದ್ದಾರೆ.
ನಮ್ಮ ರಾಯಭಾರ ಕಚೇರಿಯ ಮೇಲಿನ ದಾಳಿ ಹಾಗೂ ನಮ್ಮ ಸೈನಿಕರ ಸಾವಿಗೆ ಅಮೆರಿಕ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದೆ ಎಂಬುದು ನಿಮಗೆ ಶೀಘ್ರದಲ್ಲೇ ತಿಳಿಯಲಿದೆ, ಎಂದು ಟ್ರಂಪ್ ಹೇಳಿದ್ದಾರೆ. ಈ ಹೇಳಿಕೆ ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಉದ್ವಿಗ್ನತೆ ಮೂಡಿಸಿದೆ.
ಇದಕ್ಕೂ ಮೊದಲು ಇರಾನ್ ವಿರುದ್ಧ ನೇರ ಸೇನಾ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ ಎಂಬ ನಿಲುವು ವ್ಯಕ್ತಪಡಿಸಿದ್ದ ಟ್ರಂಪ್, ಈಗ ನಡೆದಿರುವ ದಾಳಿಯ ಹಿನ್ನೆಲೆ ತಮ್ಮ ನಿಲುವಿನಲ್ಲಿ ಬದಲಾವಣೆ ತೋರಿಸಿರುವಂತೆ ಕಾಣುತ್ತಿದೆ. ರಾಯಭಾರ ಕಚೇರಿ ಮೇಲಿನ ದಾಳಿಯ ನಂತರ, ಇರಾನ್ ವಿರುದ್ಧ ಸೇನೆಯನ್ನು ಕಳುಹಿಸುವ ಸಾಧ್ಯತೆಗಳೂ ಚರ್ಚೆಗೆ ಗ್ರಾಸವಾಗಿವೆ.
ಅಮೆರಿಕ ಸರ್ಕಾರದ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಹೊರಬರಬೇಕಿದ್ದು, ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಲಕ್ಷಣಗಳು ಕಾಣಿಸುತ್ತಿವೆ. ಅಂತಾರಾಷ್ಟ್ರೀಯ ಸಮುದಾಯ ಪರಿಸ್ಥಿತಿಯನ್ನು ಕಣ್ಣಿಟ್ಟು ಗಮನಿಸುತ್ತಿದೆ.
ಈ ಬೆಳವಣಿಗೆ ಜಾಗತಿಕ ಭದ್ರತೆ ಹಾಗೂ ರಾಜತಾಂತ್ರಿಕ ಸಂಬಂಧಗಳ ಮೇಲೂ ವ್ಯಾಪಕ ಪರಿಣಾಮ ಬೀರುವ ಸಾಧ್ಯತೆ ಇದೆ.








