ನಿಲ್ಲದ ಕೊರೊನಾ ಓಟ : ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷಕ್ಕೆ ಏರಿಕೆ
ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಓಟ ಮತ್ತಷ್ಟು ವೇಗ ಪಡೆದುಕೊಂಡಿದ್ದು, ಸದ್ಯ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 10 ಲಕ್ಷಕ್ಕೆ ಏರಿಕೆಯಾಗಿದೆ. ಕೇವಲ ನಾಲ್ಕು ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಭಾರತದಲ್ಲಿ ದೃಢಪಟ್ಟಿವೆ.
ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 34,956 ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 10,03,832 ಕ್ಕೆ ಏರಿಕೆಯಾಗಿದೆ. ಇನ್ನು ಇದೇ ಅವಧಿಯಲ್ಲಿ 687 ಸೋಂಕಿತರು ಮೃತಪಟ್ಟಿದ್ದು, ಈವರೆಗೆ ಕಿಲ್ಲರ್ ಸೋಂಕಿಗೆ ಬಲಿಯಾದವರ ಸಂಖ್ಯೆ 25,602ಕ್ಕೆ ಏರಿಕೆಯಾಗಿದೆ
ದೇಶದ ಒಟ್ಟು 10,03,832 ಸೋಂಕಿತರ ಪೈಕಿ ಈವರೆಗೂ 6,35,757 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 3,42,473 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.








