ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್ ಸಂಘ ತೀವ್ರ ಆತಂಕ ವ್ಯಕ್ತಪಡಿಸಿದೆ.
ಸಂಘದ ಪ್ರಕಾರ, ಸಿಲಿಂಡರ್ ಪೂರೈಕೆಯಲ್ಲಿ ಮನೆ ಬಳಕೆದಾರರಿಗೆ ಮೊದಲ ಆದ್ಯತೆ ನೀಡಬೇಕು ಎಂಬ ಸೂಚನೆ ನೀಡಿರುವುದರಿಂದ ತಳಮಟ್ಟದಲ್ಲಿ ಗೊಂದಲ ಉಂಟಾಗಿದೆ. ಇದರ ಪರಿಣಾಮವಾಗಿ ಹಲವೆಡೆ ವ್ಯವಹಾರಿಕ ಬಳಕೆಗೆ ಅನಿಲ ಪೂರೈಕೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಂಘ ಹೇಳಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ಪಷ್ಟ ಮಾರ್ಗಸೂಚಿ ನೀಡಬೇಕು ಎಂದು ಸಂಘ ಒತ್ತಾಯಿಸಿದೆ. ಪೂರೈಕೆ ಸಂಬಂಧಿತ ಗೊಂದಲ ಮುಂದುವರೆದರೆ ರೆಸ್ಟೋರೆಂಟ್ ಮತ್ತು ಹೋಟೆಲ್ ಉದ್ಯಮಕ್ಕೆ ಹೆಚ್ಚಿನ ಸಮಸ್ಯೆಗಳು ಎದುರಾಗಬಹುದು ಎಂದು ಎಚ್ಚರಿಸಿದೆ.
ಪ್ರಸ್ತುತ ಅನಿಲ ಪೂರೈಕೆ ಅಡಚಣೆ ಉಂಟಾಗಿರುವುದರಿಂದ ಅನೇಕ ಹೋಟೆಲ್ಗಳು ಹಾಗೂ ರೆಸ್ಟೋರೆಂಟ್ಗಳು ಕಾರ್ಯಾಚರಣೆಯಲ್ಲಿ ತೊಂದರೆ ಅನುಭವಿಸುತ್ತಿದ್ದು, ಈ ಪರಿಸ್ಥಿತಿ ಉದ್ಯಮಕ್ಕೆ ಭಾರೀ ಹೊಡೆತ ನೀಡುತ್ತಿದೆ ಎಂದು ಉದ್ಯಮ ವಲಯದವರು ತಿಳಿಸಿದ್ದಾರೆ.








