ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ ಸಂಬಂಧಿಸಿದ ಪ್ರಕರಣವನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ.
ಈ ವೇಳೆ ದೇಶದ ಎಲ್ಲಾ NCERT ಪಠ್ಯಪುಸ್ತಕಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಈ ಉದ್ದೇಶಕ್ಕಾಗಿ ವಿಶೇಷ ಸಮಿತಿಯನ್ನು ರಚಿಸಲಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.
ಇದೇ ವೇಳೆ ಈ ಸಮಿತಿಯನ್ನು ಕೇಂದ್ರ ಸರ್ಕಾರವೇ ರಚಿಸಿದ್ದರೆ ಉತ್ತಮವಾಗುತ್ತಿತ್ತು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಈ ವಿಷಯದ ಕುರಿತು ವಿವಾದ ಉಂಟಾದ ಬಳಿಕ NCERT ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಕ್ಷಮೆಯಾಚಿಸಿ, ಸಂಬಂಧಿತ ಪಠ್ಯಪುಸ್ತಕಗಳನ್ನು ಹಿಂತೆಗೆದುಕೊಂಡಿತ್ತು. ಈ ಬೆಳವಣಿಗೆಯ ನಂತರ ಪಠ್ಯಪುಸ್ತಕಗಳ ವಿಷಯವಸ್ತು ಕುರಿತು ಇನ್ನಷ್ಟು ಕಟ್ಟುನಿಟ್ಟಿನ ಪರಿಶೀಲನೆ ನಡೆಯಲಿದೆ.







