ವಿರೋಧ ಪಕ್ಷಗಳು ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕುವಂತೆ ಕೋರಿ ಸಂಸತ್ತಿನಲ್ಲಿ ಮಹಾಭಿಯೋಗ ನೋಟಿಸ್ ಸಲ್ಲಿಸಿವೆ
.
ಲೋಕಸಭೆಯಲ್ಲಿ ಮಂಡಿಸಲು ಉದ್ದೇಶಿಸಿರುವ ಈ ನಿರ್ಣಯಕ್ಕೆ ಒಟ್ಟು 193 ಸಂಸದರು ಸಹಿ ಹಾಕಿದ್ದಾರೆ. ಇದರಲ್ಲಿ 130 ಲೋಕಸಭೆ ಸದಸ್ಯರು ಮತ್ತು 63 ರಾಜ್ಯಸಭೆ ಸದಸ್ಯರು ಸೇರಿದ್ದಾರೆ.
ವಿಪಕ್ಷಗಳು, ಮುಖ್ಯ ಚುನಾವಣಾ ಆಯುಕ್ತರು ಹಲವು ಸಂದರ್ಭಗಳಲ್ಲಿ, ವಿಶೇಷವಾಗಿ SIR (ಸ್ಪೆಷಲ್ ಇಂಟೆನ್ಸಿವ್ ರಿವಿಷನ್ ) ಕಾರ್ಯವಿಧಾನದ ಸಂದರ್ಭದಲ್ಲಿ ಬಿಜೆಪಿ ಪರವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿವೆ.
ಭಾರತದ ಇತಿಹಾಸದಲ್ಲಿ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ನೋಟಿಸ್ ಮಂಡಿಸಲು ಮುಂದಾಗಿರುವುದು ಇದೇ ಮೊದಲ ಬಾರಿ ಎಂದು ಹೇಳಲಾಗುತ್ತಿದೆ.








