ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೇಂದ್ರ ವಿಮಾನಯಾನ ಸಚಿವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಹೊಸ ವಿಮಾನ ನಿಲ್ದಾಣ ಯೋಜನೆಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, , HAL ವಿಮಾನ ನಿಲ್ದಾಣ, ಯಲಹಂಕ ಏರ್ ಫೋರ್ಸ್ ಸ್ಟೇಷನ್ ಹಾಗೂ ಜಕ್ಕೂರು ವಾಯುನೆಲೆ ಸುತ್ತಮುತ್ತಲ ಪ್ರದೇಶಗಳಲ್ಲಿ ಇರುವ ಬಹುಮಹಡಿ ಕಟ್ಟಡಗಳ ಎತ್ತರದ ನಿರ್ಬಂಧಗಳನ್ನು ಸಡಿಲಿಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಕ್ರಮಗಳಿಂದ ನಗರದ ವಿಮಾನಯಾನ ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.








