ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ ಪರಿಣಾಮಗಳು ಭಾರತಕ್ಕೂ ತಟ್ಟುತ್ತಿರುವ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ. ಇಂದು ಸಂಜೆ 6:30ಕ್ಕೆ ದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದೆ.
ಇದರ ಮೊದಲು ಕೇಂದ್ರ ಸರ್ಕಾರವು ಮೂರು ರಕ್ಷಣಾ ಪಡೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದು, ಸರ್ವಪಕ್ಷ ಸಭೆ ಕೂಡ ಆಯೋಜಿಸಿತ್ತು.
ಈ ಹಿನ್ನೆಲೆ, ಸಿಎಂಗಳೊಂದಿಗೆ ನಡೆಯಲಿರುವ ಸಭೆ ಅತ್ಯಂತ ಮಹತ್ವ ಪಡೆದಿದ್ದು, ದೇಶದ ಭದ್ರತೆ, ಆರ್ಥಿಕ ಪರಿಸ್ಥಿತಿ ಹಾಗೂ ಅಗತ್ಯ ಕ್ರಮಗಳ ಬಗ್ಗೆ ಚರ್ಚೆಯಾಗುವ ನಿರೀಕ್ಷೆಯಿದೆ.







