ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ಕೋವಿಡ್ ದೃಢ
ಮಂಗಳೂರು : ದಕ್ಷಿಣ ಕನ್ನಡದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ಇದೀಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೋವಿಡ್ 19 ಸೋಂಕು ಇರುವುದು ದೃಢವಾಗಿದೆ. ಈ ವಿಚಾರವನ್ನು ಸ್ವತಃ ಮಿಥುನ್ ರೈ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಮಿಥುನ್ ರೈ ಟ್ವೀಟ್ ನಲ್ಲಿ.. `ನನಗೆ ಕೋವಿಡ್-19 ಸೋಂಕು ತಾಗಿರುವುದು ಪತ್ತೆಯಾಗಿದೆ. ಸದ್ಯ ನಾನೀಗ ಬೆಂಗಳೂರಿನಲ್ಲಿ ಕ್ವಾರೆಂಟೈನ್ ಆಗಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಜೊತೆ ಹತ್ತಿರದ ಸಂಪರ್ಕದಲ್ಲಿದ್ದವರು ಕೋವಿಡ್ -19 ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಮಿಥುನ್ ರೈ ಮನವಿ ಮಾಡಿಕೊಂಡಿದ್ದಾರೆ








