ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

Shwetha by Shwetha
March 28, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿದ್ದ ಹಿರಿಯ ಮುಖಂಡ ಸಾದಿಕ್ ಪೈಲ್ವಾನ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಧಾನದ ಬಳಿಕ ತಮ್ಮ ನಾಮಪತ್ರವನ್ನು ಹಿಂಪಡೆಯುವ ಮೂಲಕ ಪಕ್ಷದ ಗೆಲುವಿಗೆ ಸಹಕರಿಸಿದ್ದಾರೆ. ಈ ಬೆಳವಣಿಗೆಯಿಂದಾಗಿ ದಾವಣಗೆರೆ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವುದು ಖಚಿತ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ ನಡೆದ ತುರ್ತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ದಾವಣಗೆರೆಯ ರಾಜಕೀಯ ವಿದ್ಯಮಾನಗಳು ಮತ್ತು ಬಂಡಾಯ ಶಮನದ ಕುರಿತು ಮಾಹಿತಿ ನೀಡಿದರು.

Related posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

May 15, 2026
ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

May 15, 2026

ಸಾದಿಕ್ ಪೈಲ್ವಾನ್ ಅವರೊಂದಿಗಿನ ತಮ್ಮ ಬಹುಕಾಲದ ಒಡನಾಟವನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿಗಳು, ಸಾದಿಕ್ ಅವರು ನನಗೆ ಇತ್ತೀಚಿನ ಪರಿಚಯವಲ್ಲ, ಬದಲಿಗೆ ಬಹಳ ವರ್ಷಗಳ ಆಪ್ತರು. ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪೈಲ್ವಾನ್ ಆಗಿ ಕಣಕ್ಕಿಳಿಯುತ್ತಿದ್ದ ದಿನಗಳಿಂದಲೂ ನಾನು ಅವರನ್ನು ಬಲ್ಲೆ. ನಾವು ಆಗಾಗ ಭೇಟಿಯಾಗುತ್ತಿದ್ದೆವು. ಅಂತಹ ಉತ್ಸಾಹಿ ವ್ಯಕ್ತಿ ಚುನಾವಣೆಗೆ ಸ್ಪರ್ಧಿಸಬೇಕೆಂದು ಬಯಸುವುದು ತಪ್ಪೇನಲ್ಲ. ಅದು ಪ್ರಜಾಪ್ರಭುತ್ವದಲ್ಲಿ ಸಹಜವಾದ ಆಕಾಂಕ್ಷೆ ಎಂದು ಸಮರ್ಥಿಸಿಕೊಂಡರು.

ಸಂಧಾನಕ್ಕೆ ತೆರಳಿದ್ದ ವಿಶೇಷ ತಂಡ

ಬಂಡಾಯ ಶಮನಕ್ಕೆ ನಡೆಸಿದ ಪ್ರಯತ್ನಗಳ ಬಗ್ಗೆ ವಿವರಿಸಿದ ಅವರು, ಸಾದಿಕ್ ಅವರು ನಾಮಪತ್ರ ಸಲ್ಲಿಸುವುದನ್ನು ತಡೆಯಲು ಪಕ್ಷದ ವತಿಯಿಂದ ಶಾಸಕ ರಿಜ್ವಾನ್ ಅರ್ಷದ್, ಮುಖಂಡರಾದ ಸಲೀಂ ಅಹ್ಮದ್ ಮತ್ತು ನಜೀರ್ ಅಹ್ಮದ್ ಅವರನ್ನು ದಾವಣಗೆರೆಗೆ ಕಳುಹಿಸಲಾಗಿತ್ತು. ಆದರೆ, ಅವರು ತಲುಪುವುದು ವಿಳಂಬವಾದ ಕಾರಣ, ಅಷ್ಟರಲ್ಲಾಗಲೇ ಸಾದಿಕ್ ನಾಮಪತ್ರ ಸಲ್ಲಿಸಿದ್ದರು. ನಾನು ವಿಧಾನಪರಿಷತ್ ಕಲಾಪದಲ್ಲಿ ಉತ್ತರ ನೀಡಬೇಕಾದ ಜವಾಬ್ದಾರಿ ಇದ್ದಿದ್ದರಿಂದ ಖುದ್ದು ದಾವಣಗೆರೆಗೆ ಹೋಗಲು ಸಾಧ್ಯವಾಗಿರಲಿಲ್ಲ. ಆದರೆ, ಪಕ್ಷದ ಮುಖಂಡರ ಮನವೊಲಿಕೆ ಮತ್ತು ನನ್ನ ಕೋರಿಕೆಗೆ ಮನ್ನಣೆ ನೀಡಿ ಸಾದಿಕ್ ಅವರು ಇಂದು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಇದಕ್ಕಾಗಿ ನಾನು ಅವರಿಗೆ ವೈಯಕ್ತಿಕವಾಗಿ ಹಾಗೂ ಪಕ್ಷದ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಸಿಎಂ ತಿಳಿಸಿದರು.

ನಿಷ್ಠಾವಂತ ಕಾರ್ಯಕರ್ತನ ತ್ಯಾಗ

ಸಾದಿಕ್ ಪೈಲ್ವಾನ್ ಅವರು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದು, ಪಕ್ಷದ ಒಬ್ಬ ಕಟ್ಟಾಳು ಮತ್ತು ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ದಾವಣಗೆರೆ ಕ್ಷೇತ್ರದಲ್ಲಿ ಸುಮಾರು 70 ಸಾವಿರಕ್ಕೂ ಹೆಚ್ಚು ಮುಸ್ಲಿಂ ಮತದಾರರಿದ್ದು, ಈ ಹಿನ್ನೆಲೆಯಲ್ಲಿ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರ ಬೇಡಿಕೆಯಲ್ಲಿ ನ್ಯಾಯವಿತ್ತು. ಆದರೆ, ಹೈಕಮಾಂಡ್ ಎಲ್ಲ ಆಯಾಮಗಳನ್ನು ಪರಿಶೀಲಿಸಿ, ಅಂತಿಮವಾಗಿ ಮೃತರಾದವರ ಕುಟುಂಬದವರಿಗೆ ಟಿಕೆಟ್ ನೀಡುವ ಸಂಪ್ರದಾಯದಂತೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ನೀಡಿದೆ ಎಂದು ಟಿಕೆಟ್ ಹಂಚಿಕೆಯ ಮಾನದಂಡವನ್ನು ಸ್ಪಷ್ಟಪಡಿಸಿದರು.

ಗೆಲುವಿನ ವಿಶ್ವಾಸ

ಈಗಾಗಲೇ 11 ಜನ ಬಂಡಾಯ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದು, ಇದು ಪಕ್ಷದ ಆಂತರಿಕ ಒಗ್ಗಟ್ಟನ್ನು ಪ್ರದರ್ಶಿಸುತ್ತದೆ. ಸಾದಿಕ್ ಪೈಲ್ವಾನ್ ಅವರ ಬೆಂಬಲದೊಂದಿಗೆ ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಸುಲಭವಾಗಲಿದ್ದು, ಬಾಗಲಕೋಟೆಯಲ್ಲೂ ಪಕ್ಷ ಉತ್ತಮ ಫಲಿತಾಂಶ ಕಾಣಲಿದೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು. ಒಟ್ಟಾರೆಯಾಗಿ, ದಾವಣಗೆರೆ ಉಪಚುನಾವಣೆಯ ಕಣದಲ್ಲಿ ಎದುರಾಗಿದ್ದ ಅಲ್ಪಸಂಖ್ಯಾತ ಮತ ವಿಭಜನೆಯ ಭೀತಿ ದೂರವಾಗಿದ್ದು, ಕೈ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿದೆ.

ShareTweetSendShare
Join us on:

Related Posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

by Shwetha
May 15, 2026
0

ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

by Shwetha
May 15, 2026
0

ಪತ್ನಿಯ ಜೀವನ ನಿರ್ವಹಣೆಗೆ ನ್ಯಾಯಾಲಯ ನಿಗದಿಪಡಿಸಿದ ಹಣವನ್ನು ನೀಡದೆ ಸಬೂಬು ಹೇಳುವ ಪತಿಯಂದಿರಿಗೆ ಕರ್ನಾಟಕ ಹೈಕೋರ್ಟ್ ಈಗ ಬಿಸಿ ಮುಟ್ಟಿಸಿದೆ. ನ್ಯಾಯಾಲಯದ ಆದೇಶವಿದ್ದರೂ ಜೀವನಾಂಶ ನೀಡದಿದ್ದರೆ ಅಂತಹವರ...

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

by Shwetha
May 15, 2026
0

ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದೆ. ವಿ.ಡಿ. ಸತೀಶನ್‌ ಅವರನ್ನು ಕೇರಳದ ಹೊಸ ಮುಖ್ಯಮಂತ್ರಿಯಾಗಿ...

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

by Shwetha
May 15, 2026
0

ನವದೆಹಲಿ: ಹಿಂದುತ್ವ ಎನ್ನುವುದು ಕೇವಲ ಒಂದು ಧರ್ಮವಲ್ಲ, ಅದು ಜೀವನದ ಒಂದು ಅತ್ಯುನ್ನತ ಮತ್ತು ವಿಶಾಲವಾದ ಮಾರ್ಗ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಒಬ್ಬ...

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram