ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

Shwetha by Shwetha
March 29, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಹಾಗೂ ವಶಪಡಿಸಿಕೊಳ್ಳಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಈ ಚುನಾವಣಾ ಕಾವು ಈಗ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹಾಗೂ ದಾವಣಗೆರೆ ಸ್ಥಳೀಯ ಬಿಜೆಪಿ ನಾಯಕರ ನಡುವಿನ ಪ್ರತಿಷ್ಠೆಯ ಕದನಕ್ಕೆ ಸಾಕ್ಷಿಯಾಗಿದೆ.

ತಾಕತ್ತಿದ್ದರೆ ದಾವಣಗೆರೆಗೆ ಕಾಲಿಡಲಿ ಎಂದು ಬಿಜೆಪಿ ಮುಖಂಡ, ಮಾಜಿ ಮೇಯರ್ ಬಿ.ಜಿ ಅಜಯ್ ಕುಮಾರ್ ಹಾಕಿದ್ದ ಸವಾಲನ್ನು ಸ್ವೀಕರಿಸಿ ಅಖಾಡಕ್ಕಿಳಿದ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಬಿಜೆಪಿ ಕಾರ್ಯಕರ್ತರು ಧಿಕ್ಕಾರದ ಸ್ವಾಗತ ಕೋರಿದ್ದಾರೆ. ಪ್ರದೀಪ್ ಈಶ್ವರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಮಲ ಪಡೆಯ ಕಾರ್ಯಕರ್ತರು, ಅವರಿಗೆ ರಸ್ತೆಯಲ್ಲಿ ಪೊರಕೆ ಮತ್ತು ಚಪ್ಪಲಿಗಳನ್ನು ಪ್ರದರ್ಶಿಸಿ, ಹುಚ್ಚ ಹುಚ್ಚ ಎಂದು ಜರಿದರು.

Related posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

May 15, 2026
ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

May 15, 2026

ಇತ್ತೀಚೆಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರದೀಪ್ ಈಶ್ವರ್, ತಮ್ಮ ಭಾಷಣದಲ್ಲಿ ಬಿಜೆಪಿಯವರನ್ನು ತೀವ್ರವಾಗಿ ಟೀಕಿಸಿದ್ದರು. ಬಿಜೆಪಿಯವರು ಅಯೋಗ್ಯರು, ಅವರು ಮುಸ್ಲಿಂ ಮಹಿಳೆಯರಿಗೆ ಕಿಂಚಿತ್ತೂ ಗೌರವ ನೀಡುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದರು. ಶಾಸಕರ ಈ ಹೇಳಿಕೆ ಸ್ಥಳೀಯ ಬಿಜೆಪಿಗರ ಕಣ್ಣು ಕೆಂಪಾಗಿಸಿತ್ತು.

ಈ ಹೇಳಿಕೆಗೆ ತಿರುಗೇಟು ನೀಡಿದ್ದ ಮಾಜಿ ಮೇಯರ್ ಬಿ.ಜಿ ಅಜಯ್ ಕುಮಾರ್, ಮಹಿಳೆಯರ ಬಗ್ಗೆ ಮಾತನಾಡುವ ನೈತಿಕತೆ ಪ್ರದೀಪ್ ಈಶ್ವರ್ ಅವರಿಗೆ ಇಲ್ಲ. ಇಡೀ ದಾವಣಗೆರೆಯ ಮುಸ್ಲಿಂ ಮಹಿಳೆಯರಿಗೆ ಅವರು ಅವಮಾನ ಮಾಡಿದ್ದಾರೆ. ಧೈರ್ಯವಿದ್ದರೆ, ತಾಕತ್ತಿದ್ದರೆ ಅವರು ಮತ್ತೆ ದಾವಣಗೆರೆಗೆ ಕಾಲಿಡಲಿ ಎಂದು ಏಕವಚನದಲ್ಲಿಯೇ ಬಹಿರಂಗ ಸವಾಲು ಎಸೆದಿದ್ದರು.

ಸವಾಲು ಸ್ವೀಕರಿಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಪ್ರದೀಪ್ ಈಶ್ವರ್

ಅಜಯ್ ಕುಮಾರ್ ಅವರ ಈ ಸವಾಲನ್ನು ಗಂಭೀರವಾಗಿ ತೆಗೆದುಕೊಂಡ ಪ್ರದೀಪ್ ಈಶ್ವರ್, ನಾನು ದಾವಣಗೆರೆಗೆ ಮಾತ್ರವಲ್ಲ, ನಿಮ್ಮ ಬಿಜೆಪಿ ಕಚೇರಿ ಬಳಿಯೇ ಬಂದು ಪ್ರಚಾರ ಮಾಡುತ್ತೇನೆ ಎಂದು ಮರು ಸವಾಲು ಹಾಕಿದ್ದರು. ಅದರಂತೆಯೇ ಇಂದು ದಾವಣಗೆರೆಗೆ ಆಗಮಿಸಿದ ಅವರು, ಪಿ.ಬಿ ರಸ್ತೆಯಿಂದಲೇ ಕೈಯಲ್ಲಿ ಕಾಂಗ್ರೆಸ್ ಬಾವುಟ ಹಿಡಿದು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಕಚೇರಿಯತ್ತ ಘೋಷಣೆಗಳನ್ನು ಕೂಗುತ್ತಾ ಹೆಜ್ಜೆ ಹಾಕಿದರು.

ಶಾಸಕರು ಬಿಜೆಪಿ ಕಚೇರಿಯತ್ತ ಬರುತ್ತಿದ್ದಂತೆ ಇತ್ತ ಬಿಜೆಪಿ ಕಾರ್ಯಕರ್ತರು ಕೂಡ ಅವರನ್ನು ತಡೆಯಲು ಸಜ್ಜಾಗಿ ನಿಂತಿದ್ದರು. ಎರಡೂ ಗುಂಪುಗಳು ದಾವಣಗೆರೆಯ ಗುಳ್ಳಮ್ಮ ದೇವಸ್ಥಾನದ ಬಳಿ ಮುಖಾಮುಖಿಯಾಗುವ ಸನ್ನಿವೇಶ ನಿರ್ಮಾಣವಾಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಅರಿತಿದ್ದ ಪೊಲೀಸ್ ಇಲಾಖೆ, ಭಾರಿ ಸಂಖ್ಯೆಯಲ್ಲಿ ಮೀಸಲು ಪೊಲೀಸ್ ಪಡೆಯನ್ನು ನಿಯೋಜಿಸಿತ್ತು. ಪೊಲೀಸರು ಎರಡು ಗುಂಪುಗಳ ನಡುವೆ ಗೋಡೆಯಂತೆ ನಿಂತು ಸಂಭಾವ್ಯ ಘರ್ಷಣೆಯನ್ನು ಯಶಸ್ವಿಯಾಗಿ ತಡೆದರು.

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್

ಬಿಜೆಪಿ ಕಾರ್ಯಕರ್ತರ ವಿರೋಧ ಮತ್ತು ಧಿಕ್ಕಾರದ ನಡುವೆಯೇ ಗುಡುಗಿದ ಶಾಸಕ ಪ್ರದೀಪ್ ಈಶ್ವರ್, ದಮ್ ಇದ್ರೆ ದಾವಣಗೆರೆಗೆ ಬನ್ನಿ ಅಂತ ಸವಾಲ್ ಹಾಕಿದ್ರು. ಈಗ ನಾನು ನಿಮ್ಮ ಬಿಜೆಪಿ ಕಚೇರಿ ಮುಂದೆಯೇ ಬಂದು ನಿಂತಿದ್ದೀನಿ. ಏನೂ ಮಾಡೋಕಾಗಿಲ್ಲ ಎಂದು ನೇರವಾಗಿ ತಿರುಗೇಟು ನೀಡಿದರು. ಇದೇ ವೇಳೆ ಬಿಜೆಪಿ ಹೈಕಮಾಂಡ್ ನಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೋತಿ ಮರಿ ಎಂದು ಕರೆಯುವ ಮೂಲಕ ಮತ್ತೊಮ್ಮೆ ವಿವಾದದ ಕಿಡಿ ಹೊತ್ತಿಸಿದರು.

ಒಟ್ಟಿನಲ್ಲಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಈಗ ಕೇವಲ ಅಭ್ಯರ್ಥಿಗಳ ನಡುವಿನ ಹಣಾಹಣಿಯಾಗಿ ಉಳಿದಿಲ್ಲ, ಬದಲಾಗಿ ಪ್ರದೀಪ್ ಈಶ್ವರ್ ಮತ್ತು ಸ್ಥಳೀಯ ಬಿಜೆಪಿಗರ ನಡುವಿನ ಅಹಂನ ಕದನವಾಗಿ ಮಾರ್ಪಟ್ಟಿದ್ದು, ಮುಂದಿನ ದಿನಗಳಲ್ಲಿ ಈ ಕ್ಷೇತ್ರ ಇನ್ನಷ್ಟು ಹೈಡ್ರಾಮಾಗಳಿಗೆ ಸಾಕ್ಷಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ShareTweetSendShare
Join us on:

Related Posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

by Shwetha
May 15, 2026
0

ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

by Shwetha
May 15, 2026
0

ಪತ್ನಿಯ ಜೀವನ ನಿರ್ವಹಣೆಗೆ ನ್ಯಾಯಾಲಯ ನಿಗದಿಪಡಿಸಿದ ಹಣವನ್ನು ನೀಡದೆ ಸಬೂಬು ಹೇಳುವ ಪತಿಯಂದಿರಿಗೆ ಕರ್ನಾಟಕ ಹೈಕೋರ್ಟ್ ಈಗ ಬಿಸಿ ಮುಟ್ಟಿಸಿದೆ. ನ್ಯಾಯಾಲಯದ ಆದೇಶವಿದ್ದರೂ ಜೀವನಾಂಶ ನೀಡದಿದ್ದರೆ ಅಂತಹವರ...

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

by Shwetha
May 15, 2026
0

ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದೆ. ವಿ.ಡಿ. ಸತೀಶನ್‌ ಅವರನ್ನು ಕೇರಳದ ಹೊಸ ಮುಖ್ಯಮಂತ್ರಿಯಾಗಿ...

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

by Shwetha
May 15, 2026
0

ನವದೆಹಲಿ: ಹಿಂದುತ್ವ ಎನ್ನುವುದು ಕೇವಲ ಒಂದು ಧರ್ಮವಲ್ಲ, ಅದು ಜೀವನದ ಒಂದು ಅತ್ಯುನ್ನತ ಮತ್ತು ವಿಶಾಲವಾದ ಮಾರ್ಗ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಒಬ್ಬ...

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram