ADVERTISEMENT
Saturday, May 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

Shwetha by Shwetha
March 29, 2026
in ಕ್ರಿಕೆಟ್, National, Newsbeat, State, ಕ್ರೀಡೆ, ದೇಶ - ವಿದೇಶ, ಬೆಂಗಳೂರು, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ ನೆಚ್ಚಿನ ತಂಡಕ್ಕೆ ಜೈಕಾರ ಹಾಕಿದರು. ಡಿಜೆ ಸಂಗೀತದ ಅಬ್ಬರ ಹಾಗೂ ದಿವಂಗತ ಪುನೀತ್ ರಾಜಕುಮಾರ್ ಅವರ ನೆನಪಿನ ಹಾಡುಗಳು ಕ್ರೀಡಾಂಗಣದಲ್ಲಿ ಮಾರ್ದನಿಸಿದವು. 19ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಹಾಲಿ ಚಾಂಪಿಯನ್ ಆರ್ ಸಿ ಬಿ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿ ಗೆಲುವಿನ ಅಭಿಯಾನ ಆರಂಭಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು. ಹೈದರಾಬಾದ್ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ ಇಶಾನ್ ಕಿಶನ್ ಕೇವಲ 38 ಎಸೆತಗಳಲ್ಲಿ 8 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 80 ರನ್ ಚಚ್ಚಿ ಆರ್ ಸಿ ಬಿ ಬೌಲರ್ ಗಳ ಬೆವರಿಳಿಸಿದರು. ಹೆನ್ರಿಚ್ ಕ್ಲಾಸೆನ್ ಜೊತೆಗೂಡಿ 97 ರನ್ ಗಳ ಜೊತೆಯಾಟವಾಡಿದರು. ಆದರೆ ಅಂತಿಮ ಹಂತದಲ್ಲಿ ಅಂಕಿತ್ ವರ್ಮಾ ಅವರ ಅದ್ಭುತ ಬ್ಯಾಟಿಂಗ್ ತಂಡದ ಮೊತ್ತವನ್ನು ಇನ್ನೂರರ ಗಡಿ ದಾಟಿಸಿತು.

Related posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

May 30, 2026
ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

May 30, 2026

ಆರ್ ಸಿ ಬಿ ಪರ ಪದಾರ್ಪಣೆ ಮಾಡಿದ ಕಿವೀಸ್ ವೇಗಿ ಜೇಕಬ್ ಡಫಿ ತಮ್ಮ ಚೊಚ್ಚಲ ಪಂದ್ಯದಲ್ಲೇ ಮ್ಯಾಜಿಕ್ ಮಾಡಿದರು. ಐಪಿಎಲ್ ಮಿನಿ ಹರಾಜಿನಲ್ಲಿ 2 ಕೋಟಿ ರೂಗಳಿಗೆ ಬಿಕರಿಯಾಗಿದ್ದಾಗ ವ್ಯಕ್ತವಾಗಿದ್ದ ಅಚ್ಚರಿಗೆ ಅವರು ತಮ್ಮ ಬೌಲಿಂಗ್ ಮೂಲಕವೇ ಉತ್ತರ ನೀಡಿದರು. ಅನುಭವಿ ಜೋಶ್ ಹೇಜಲ್ ವುಡ್ ಗೈರಿನಲ್ಲಿ ಬೌಲಿಂಗ್ ಜವಾಬ್ದಾರಿ ಹೊತ್ತ ಡಫಿ, ತಮ್ಮ ನಿಖರವಾದ ಶಾರ್ಟ್ ಪಿಚ್ ಎಸೆತಗಳ ಮೂಲಕ ಕೇವಲ 22 ರನ್ ನೀಡಿ 3 ಪ್ರಮುಖ ವಿಕೆಟ್ ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಸಿಕ್ಸರ್ ಮೂಲಕವೇ ಖಾತೆ ತೆರೆಯುವ ಹವ್ಯಾಸ ಹೊಂದಿರುವ ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್ ಹಾಗೂ ನಿತೀಶ್ ಕುಮಾರ್ ಅವರನ್ನು ಪೆವಿಲಿಯನ್ ಗೆ ಅಟ್ಟುವಲ್ಲಿ ಡಫಿ ಯಶಸ್ವಿಯಾದರು.

ಪಂದ್ಯದ 16ನೇ ಓವರ್ ನಲ್ಲಿ ಆರ್ ಸಿ ಬಿ ಆಟಗಾರ ಫಿಲ್ ಸಾಲ್ಟ್ ಹಿಡಿದ ಕ್ಯಾಚ್ ಪಂದ್ಯದ ಹೈಲೈಟ್ಸ್ ಆಗಿತ್ತು. ಅಭಿನಂದನ್ ಸಿಂಗ್ ಅವರ ಎಸೆತದಲ್ಲಿ ಬೌಂಡರಿ ಬಾರಿಸಲು ಮುಂದಾದ ಇಶಾನ್ ಕಿಶನ್ ಅವರ ಚೆಂಡನ್ನು ಪಾಯಿಂಟ್ ವಿಭಾಗದಲ್ಲಿ ಗಾಳಿಯಲ್ಲಿ ಹಾರಿ ಒಂದೇ ಕೈಯಲ್ಲಿ ಫಿಲ್ ಸಾಲ್ಟ್ ಕ್ಯಾಚ್ ಹಿಡಿದ ರೀತಿ ಇಡೀ ಕ್ರೀಡಾಂಗಣವೇ ಬೆರಗಾಗುವಂತೆ ಮಾಡಿತು. ಇದರಿಂದಾಗಿ ಇಶಾನ್ ಶತಕದ ಕನಸು ಭಗ್ನಗೊಂಡಿತು.

ಬೆಟ್ಟದಂತಿದ್ದ 202 ರನ್ ಗಳ ಕಠಿಣ ಗುರಿ ಬೆನ್ನತ್ತಿದ ಆರ್ ಸಿ ಬಿ ತಂಡಕ್ಕೆ ಆರಂಭಿಕ ಆಘಾತ ಎದುರಾದರೂ, ಸ್ಥಳೀಯ ಪ್ರತಿಭೆ ದೇವದತ್ತ ಪಡಿಕ್ಕಲ್ ಮತ್ತು ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ ಹೈದರಾಬಾದ್ ಬೌಲರ್ ಗಳನ್ನು ಮನಬಂದಂತೆ ದಂಡಿಸಿದರು. ಕೇವಲ 26 ಎಸೆತಗಳಲ್ಲಿ 61 ರನ್ ಸಿಡಿಸಿದ ಪಡಿಕ್ಕಲ್ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ಇವರಿಬ್ಬರ 101 ರನ್ ಗಳ ದ್ವಿತೀಯ ವಿಕೆಟ್ ಜೊತೆಯಾಟ ಪಂದ್ಯದ ಗತಿಯನ್ನೇ ಬದಲಿಸಿತು. ಬಹಳ ದಿನಗಳ ನಂತರ ಚಿನ್ನಸ್ವಾಮಿಯಲ್ಲಿ ವಿರಾಟ್ ಅವರ ಲವಲವಿಕೆಯ ಆಟವನ್ನು ಅಭಿಮಾನಿಗಳು ಕಣ್ತುಂಬಿಕೊಂಡರು.

ಎಂಟನೇ ಓವರ್ ನಲ್ಲಿ ಕ್ಲಾಸೆನ್ ಕೈಚೆಲ್ಲಿದ ಕ್ಯಾಚ್ ನಿಂದ ಜೀವದಾನ ಪಡೆದ ಕಿಂಗ್ ಕೊಹ್ಲಿ ತಮ್ಮ ಎಂದಿನ ಕ್ಲಾಸಿಕ್ ಬ್ಯಾಟಿಂಗ್ ಮೂಲಕ ಕೇವಲ 38 ಎಸೆತಗಳಲ್ಲಿ ಅಜೇಯ 69 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ನಾಯಕ ರಜತ್ ಪಾಟೀದಾರ್ ಕೇವಲ 12 ಎಸೆತಗಳಲ್ಲಿ 31 ರನ್ ಸಿಡಿಸಿ ಅಬ್ಬರಿಸಿದರೆ, ಟಿಮ್ ಡೇವಿಡ್ ಜೊತೆಗಿನ ಕೊಹ್ಲಿಯ 40 ರನ್ ಗಳ ಜೊತೆಯಾಟದಿಂದ ಆರ್ ಸಿ ಬಿ ಕೇವಲ 15.4 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 203 ರನ್ ಗಳಿಸಿ ವಿಜಯದ ನಗು ಬೀರಿತು.

ಕಳೆದ ವರ್ಷ ಆರ್ ಸಿ ಬಿ ಗೆದ್ದಾಗ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮೃತಪಟ್ಟ 11 ಅಭಿಮಾನಿಗಳ ಸ್ಮರಣಾರ್ಥ ಕ್ರೀಡಾಂಗಣದ ಪಿ ಒನ್ ಗ್ಯಾಲರಿಯಲ್ಲಿ 11 ಆಸನಗಳನ್ನು ಖಾಲಿ ಬಿಟ್ಟು ಪುಷ್ಪ ನಮನ ಸಲ್ಲಿಸಲಾಯಿತು. ಜೊತೆಗೆ ಪಂದ್ಯಕ್ಕೂ ಮುನ್ನ ಮೃತರ ಗೌರವಾರ್ಥ ಒಂದು ನಿಮಿಷದ ಮೌನಾಚರಣೆ ಮಾಡಲಾಯಿತು. ಈ ಸಂಪ್ರದಾಯ ಮುಂದಿನ ಎಲ್ಲಾ ಪಂದ್ಯಗಳಲ್ಲೂ ಮುಂದುವರೆಯಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ಖ್ಯಾತ ಹಿನ್ನೆಲೆ ಗಾಯಕ ವಿಜಯಪ್ರಕಾಶ್ ಅವರ ರಾಷ್ಟ್ರಗೀತೆಯೊಂದಿಗೆ ಪಂದ್ಯ ಆರಂಭವಾಯಿತು. ಭದ್ರತೆಗಾಗಿ ಎರಡು ಸಾವಿರಕ್ಕೂ ಹೆಚ್ಚು ಪೊಲೀಸರು ಹಾಗೂ ಕಮಾಂಡೊಗಳನ್ನು ನಿಯೋಜಿಸಲಾಗಿತ್ತು. ಈ ಅದ್ಧೂರಿ ಉದ್ಘಾಟನಾ ಪಂದ್ಯಕ್ಕೆ ಐಸಿಸಿ ಮುಖ್ಯಸ್ಥ ಜಯ್ ಶಾ, ಬಿಸಿಸಿಐ ಅಧ್ಯಕ್ಷ ಮಿಥುನ್ ಮನ್ಹಾಸ್, ಖಜಾಂಚಿ ರಘುರಾಮ್ ಭಟ್ ಹಾಗೂ ಐಪಿಎಲ್ ಚೇರ್ಮನ್ ಅರುಣ್ ಧುಮಾಲ್ ಹಾಜರಿದ್ದು ಪಂದ್ಯದ ಶೋಭೆ ಹೆಚ್ಚಿಸಿದರು.

ShareTweetSendShare
Join us on:

Related Posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

by Shwetha
May 30, 2026
0

ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕ ಮಹಿಳೆಯರ ವಿರುದ್ಧ ದಾಳಿ ನಡೆಸುವುದು ಅಥವಾ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ....

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

by Shwetha
May 30, 2026
0

ಬೆಂಗಳೂರು: ರಾಜ್ಯ ರಾಜಕಾರಣದ ದಿಢೀರ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಲವು ಸ್ಫೋಟಕ ಮತ್ತು...

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

by Shwetha
May 30, 2026
0

ರಾಜ್ಯ ರಾಜಕಾರಣದಲ್ಲಿ ಇದೀಗ ನೂತನ ಸಚಿವ ಸಂಪುಟ ರಚನೆಯದ್ದೇ ಬಹುದೊಡ್ಡ ಸದ್ದು. ಕಾಂಗ್ರೆಸ್ ವಲಯದಲ್ಲಿ ಸಚಿವ ಸ್ಥಾನಕ್ಕಾಗಿ ಬಿರುಸಿನ ಚಟುವಟಿಕೆಗಳು ಹಾಗೂ ಭಾರೀ ಕಸರತ್ತುಗಳು ತೆರೆಮರೆಯಲ್ಲಿ ನಡೆಯುತ್ತಿವೆ....

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

by Shwetha
May 30, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ದೀರ್ಘ ಸಾರ್ವಜನಿಕ ಜೀವನದ ಸೇವೆಯನ್ನು ಶ್ಲಾಘಿಸಿದರು. ಸಾಮಾಜಿಕ ನ್ಯಾಯ,...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

by Shwetha
May 30, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಹೊರಹಾಕಿರುವ ಮಾತುಗಳು ಕೇವಲ ರಾಜಕೀಯ ಹೇಳಿಕೆಗಳಲ್ಲ, ಅವು ಹತ್ತಾರು ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಒಬ್ಬ ನಾಯಕನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram