ರಾಜ್ಯಪಾಲ ಗೆಹೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ SSLC ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ರಾಜ್ಯಪಾಲರು ಪತ್ರ ಬರೆದಿರುವುದನ್ನು ಖಂಡಿಸಿದ ನಾರಾಯಣಗೌಡ, ಇದು ಅನಗತ್ಯ ಹಸ್ತಕ್ಷೇಪ ಎಂದು ಹೇಳಿದ್ದಾರೆ.
ನೀವು ಹಿಂದಿ ಸಾಮ್ರಾಜ್ಯಶಾಹಿಯ ಲಾಬಿಯ ಪರವಾಗಿ ಮಾತನಾಡುತ್ತಿದ್ದೀರಿ. ನಿಮ್ಮ ಅಧಿಕಪ್ರಸಂಗವನ್ನು ನಾವು ಒಪ್ಪಿಕೊಳ್ಳುವುದಿಲ್ಲ. ಗಂಟು ಮೂಟೆ ಕಟ್ಟಿ ಹೊರಡಿ, ಎಂದು ಕಿಡಿಕಾರಿದ್ದಾರೆ.
ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, SSLC ತೃತೀಯ ಭಾಷೆ ವಿಚಾರ ಮತ್ತಷ್ಟು ತೀವ್ರತೆ ಪಡೆದುಕೊಳ್ಳುವ ಸಾಧ್ಯತೆ ಇದೆ.








