ಪಶ್ಚಿಮ ಬಂಗಾಳದಲ್ಲಿ ಟಿಎಮ್’ಸಿ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಟಿಎಮ್’ಸಿ ಆಡಳಿತ ಖಾಸಗಿ ಉದ್ಯೋಗಗಳನ್ನು ಹಾಳುಮಾಡಿದ್ದು, ನುಸುಳುಕೋರರಿಗೆ ಉದ್ಯೋಗ ನೀಡಲಾಗಿದೆ ಎಂದು ಆರೋಪಿಸಿದ ಅವರು, ಇಲ್ಲಿನ ಯುವಕರಿಗೆ ಮಾಡಿದ ಈ ದ್ರೋಹವನ್ನು 100 ವರ್ಷಗಳಾದರೂ ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ನಮಗೆ ಕಾನೂನಿನ ಮೇಲೆ ನಂಬಿಕೆ ಇದೆ. TMC ಆಡಳಿತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಗಳನ್ನು ಮರು ತನಿಖೆ ನಡೆಸುತ್ತೇವೆ. ಭ್ರಷ್ಟಾಚಾರದಲ್ಲಿ ಭಾಗಿಯಾದವರನ್ನು ಜೈಲಿಗೆ ಅಟ್ಟುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ, 7ನೇ ವೇತನ ಆಯೋಗವನ್ನು ಜಾರಿಗೊಳಿಸುವ ಭರವಸೆ ನೀಡಿದ ಅವರು, ಪಶ್ಚಿಮ ಬಂಗಾಳಕ್ಕೆ ಇವೇ ನನ್ನ ಗ್ಯಾರಂಟಿಗಳು ಎಂದು ಘೋಷಿಸಿದ್ದಾರೆ.
ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.








