ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಅತ್ಯಂತ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 16 ವರ್ಷದ ಬಾಲಕಿಯ ಮೇಲೆ ಗಣಿತ ಶಿಕ್ಷಕನೊಬ್ಬ ತರಗತಿ ಕೊಠಡಿಯಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಆರೋಪದ ಪ್ರಕಾರ, H.O ರಾಜಣ್ಣ ಎಂಬ ಶಿಕ್ಷಕ ಬಾಲಕಿಯ ಮೇಲೆ ದೌರ್ಜನ್ಯ ನಡೆಸಿದ್ದು, ಅದರ ಪರಿಣಾಮವಾಗಿ ಬಾಲಕಿ ಗರ್ಭಧರಿಸಿದ್ದಾಳೆ ಎನ್ನಲಾಗಿದೆ. ನಂತರ, ಈ ವಿಷಯವನ್ನು ಮರೆಮಾಚಲು ಚಳ್ಳಕೆರೆಯ ವೈದ್ಯೆ ಶಂಕರ ಲಕ್ಷ್ಮೀ ಸಹಾಯದಿಂದ ಬಾಲಕಿಗೆ ಗರ್ಭಪಾತ ಮಾಡಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ಈ ಪ್ರಕರಣ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ರಾಜಣ್ಣ ಹಾಗೂ ವೈದ್ಯೆ ಶಂಕರ ಲಕ್ಷ್ಮೀ ವಿರುದ್ಧ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಈ ಘಟನೆ ಸಮಾಜದಲ್ಲಿ ಆತಂಕ ಉಂಟುಮಾಡಿದ್ದು, ಶಾಲೆಗಳಲ್ಲಿನ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ.








