‘ಝೂಂಬಿ ಡ್ರಗ್ಸ್’ ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಯುವಕನನ್ನು ಪೊಲೀಸರು ಪರೀಕ್ಷೆಗೊಳಪಡಿಸಿದ್ದು, ಆತ ಯಾವುದೇ ರೀತಿಯ ‘ಝೂಂಬಿ ಡ್ರಗ್’ ಸೇವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ವಿಡಿಯೋವನ್ನು ಅಪ್ಲೋಡ್ ಮಾಡಿ ಹಂಚಿದ ವ್ಯಕ್ತಿಯನ್ನೇ ಪೊಲೀಸರು ಬಂಧಿಸಿದ್ದಾರೆ.
ಬಂಧಿತನು ಈಗ ತನ್ನ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳುವ ವಿಡಿಯೋ ಬಿಡುಗಡೆ ಮಾಡಿದ್ದಾನೆ. ಜೊತೆಗೆ, ಈ ವಿಡಿಯೋವನ್ನು ಶೇರ್ ಮಾಡಿದ ಇತರರಿಗೆ ಸಹ ನೋಟಿಸ್ ನೀಡಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ







