ಉಗಾಂಡದ ಸೇನಾ ಮುಖ್ಯಸ್ಥ ಮುಹೂಝಿ ಕೈನೇರುಗಬ ಅವರು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಾಗಿದ್ದಾರೆ. ಟರ್ಕಿ ದೇಶವು ಉಗಾಂಡಕ್ಕೆ 1 ಬಿಲಿಯನ್ ಡಾಲರ್ (ಸುಮಾರು ₹9,300 ಕೋಟಿ) ಹಣ ನೀಡಬೇಕು ಎಂದು ಅವರು ಹೇಳಿದಷ್ಟೇ ಅಲ್ಲ, ಟರ್ಕಿಯ ಅತ್ಯಂತ ಸುಂದರ ಮಹಿಳೆಯನ್ನು ತನ್ನೊಂದಿಗೆ ಮದುವೆಯಾಗಲು ಒಪ್ಪಿಸಬೇಕು ಎಂಬ ಹೇಳಿಕೆಯೂ ನೀಡಿದ್ದಾರೆ.
ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಹಲವರು ಇದನ್ನು ಟೀಕಿಸಿದ್ದಾರೆ. ಕೆಲವರು ಇದನ್ನು ಹಾಸ್ಯವಾಗಿ ತೆಗೆದುಕೊಂಡರೆ, ಇನ್ನು ಕೆಲವರು ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ ಮೇಲೆ ಪರಿಣಾಮ ಬೀರುವ ಹೇಳಿಕೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಉಗಾಂಡವು ಆಫ್ರಿಕಾದಲ್ಲಿ ಭದ್ರತಾ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ವಿಶೇಷವಾಗಿ ಸೋಮಾಲಿಯ ದಲ್ಲಿ ಉಗ್ರ ಸಂಘಟನೆಗಳ ವಿರುದ್ಧ ಹೋರಾಟ ನಡೆಸುತ್ತಿರುವುದು ಗಮನಾರ್ಹ. ಈ ಹಿನ್ನೆಲೆಯಲ್ಲಿ ಟರ್ಕಿ ದೇಶವು ಉಗಾಂಡಕ್ಕೆ ಆರ್ಥಿಕ ಸಹಾಯ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಟರ್ಕಿ ಮತ್ತು ಉಗಾಂಡ ನಡುವಿನ ವ್ಯಾಪಾರ ಸಂಬಂಧಗಳು ಈಗಾಗಲೇ ಅಭಿವೃದ್ಧಿಯಾಗಿದ್ದು, ಹಲವಾರು ಟರ್ಕಿ ಕಂಪನಿಗಳು ಉಗಾಂಡದಲ್ಲಿ ದೊಡ್ಡ ಮಟ್ಟದ ಹೂಡಿಕೆ ಮಾಡಿವೆ. ಆದರೆ ಈ ರೀತಿಯ ವೈಯಕ್ತಿಕ ಹಾಗೂ ವಿವಾದಾತ್ಮಕ ಬೇಡಿಕೆಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ.
ಈ ಹೇಳಿಕೆಗೆ ಟರ್ಕಿ ಸರ್ಕಾರದ ಪ್ರತಿಕ್ರಿಯೆ ಇನ್ನಷ್ಟೇ ಬರಬೇಕಿದೆ.








